ಫೈನಲ್ ನಲ್ಲಿ ಭಾರತ ತಂಡವನ್ನು ಬಯಸುತ್ತೇನೆ : ಪಾಕ್ ತಂಡದ ಮೆಂಟರ್
ಟಿ20 ವಿಶ್ವಕಪ್ ರೋಚಕ ಹಣಾಹಣಿಯ ನಿರೀಕ್ಷೆಯಲ್ಲಿ ಕ್ರಿಕೆಟ್ ಪ್ರೇಮಿಗಳು
Team Udayavani, Nov 9, 2022, 11:07 PM IST
ಸಿಡ್ನಿ : ”ಟಿ20 ವಿಶ್ವಕಪ್ ನ ಫೈನಲ್ನಲ್ಲಿ ನಾನು ಭಾರತ ತಂಡವನ್ನು ನೋಡಲು ಬಯಸುತ್ತೇನೆ” ಎಂದು ಪಾಕಿಸ್ಥಾನ ತಂಡದ ಮೆಂಟರ್ ಮ್ಯಾಥ್ಯೂ ಹೇಡನ್ ಹೇಳಿಕೆ ನೀಡಿದ್ದಾರೆ.
ಪಾಕ್ ತಂಡ ಫೈನಲ್ ಪ್ರವೇಶದ ಬಳಿಕ ಹೇಳಿಕೆ ನೀಡಿದ ಆಸೀಸ್ ಮಾಜಿ ಆಟಗಾರ ಮ್ಯಾಥ್ಯೂ ಹೇಡನ್ ”ಇಂದು ರಾತ್ರಿ ತುಂಬಾ ವಿಶೇಷವಾಗಿತ್ತು. ನೀವು ನೋಡಿದ ಆ ವೇಗದ ಬೌಲಿಂಗ್ ದಾಳಿಯು ನಂಬಲಾಗದ ಕೆಲಸ ಮಾಡಿದೆ. ನಾವು ಇನ್ನೂ ನಮ್ಮ ಅತ್ಯುತ್ತಮ ಪ್ರದರ್ಶನವನ್ನು ನೋಡಿಲ್ಲ ಎಂದು ನಾನು ಭಾವಿಸುತ್ತೇನೆ, ಇದು ಬಹುಶಃ ನಮ್ಮನ್ನು ಫೈನಲ್ನಲ್ಲಿ ಎದುರಿಸುವವರಿಗೆ ಭಯಾನಕ ಭಾಗವಾಗಿದೆ” ಎಂದು ಪಂದ್ಯದ ನಂತರದ ಪ್ರಸ್ತುತಿಯಲ್ಲಿ ಹೇಳಿದ್ದಾರೆ.
ಟಿ20 ವಿಶ್ವಕಪ್ ನ ಬುಧವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮೇಲುಗೈ ಸಾಧಿಸಿದ ಪಾಕಿಸ್ಥಾನ ತಂಡ ನ್ಯೂಜಿಲ್ಯಾಂಡ್ ಎದುರು 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ನ್ಯೂಜಿಲ್ಯಾಂಡ್ 4 ವಿಕೆಟ್ ನಷ್ಟಕ್ಕೆ 152 ರನ್ ಗಳನ್ನು ಮಾತ್ರ ಗಳಿಸಿತು.ಪಾಕ್ ಬೌಲರ್ ಗಳು ದೊಡ್ಡ ಮೊತ್ತದ ಸ್ಕೋರ್ ಮಾಡದಂತೆ ಕಡಿವಾಣ ಹಾಕಿದರು.
ನವೆಂಬರ್ 13 ರಂದು ಮೆಲ್ಬೋರ್ನ್ನ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ (ಎಂಸಿಜಿ) ನಂತಹ ಐಕಾನಿಕ್ ಸ್ಥಳದಲ್ಲಿ ಟಿ20 ವಿಶ್ವಕಪ್ ಫೈನಲ್ನಲ್ಲಿ ಪಾಕ್, ಭಾರತ ಅಥವಾ ಇಂಗ್ಲೆಂಡ್ ಅನ್ನು ಎದುರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
ICC World Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬುಮ್ರಾ ಮರಳಿ ನಂ.1
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.