ಟ್ರೇಲರ್ ನಲ್ಲಿ ಪ್ರಜ್ವಲ್ ‘ಅಬ್ಬರ’: ನ.18ಕ್ಕೆ ಚಿತ್ರ ರಿಲೀಸ್
Team Udayavani, Nov 11, 2022, 12:57 PM IST
ನಟ ಪ್ರಜ್ವಲ್ ದೇವರಾಜ್ ಅಭಿನಯದ “ಅಬ್ಬರ’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಇದೇ ನವೆಂಬರ್ 18ಕ್ಕೆ “ಅಬ್ಬರ’ ಸಿನಿಮಾ ತೆರೆಗೆ ಬರುತ್ತಿದ್ದು, ಸದ್ಯ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ “ಅಬ್ಬರ’ ಸಿನಿಮಾದ ಟ್ರೇಲರ್ ಅನ್ನು ನಟ ದೇವರಾಜ್ ಬಿಡುಗಡೆಗೊಳಿಸಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.
ಈ ಹಿಂದೆ “ಟೈಸನ್’, “ಕ್ರ್ಯಾಕ್’ ನಂತಹ ಆ್ಯಕ್ಷನ್ ಸಿನಿಮಾಗಳನ್ನು ನಿರ್ದೇಶಿಸಿದ್ದ ಕೆ. ರಾಮ್ ನಾರಾಯಣ್ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. “ಅಬ್ಬರ’ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಅವರಿಗೆ ರಾಶಿ ಪೊನ್ನಪ್ಪ, ನಿಮಿಕಾ ರತ್ನಾಕರ್ ಹಾಗೂ ಲೇಖಾಚಂದ್ರ ನಾಯಕಿಯರಾಗಿ ಅಭಿನಯಿಸಿದ್ದಾರೆ.
ಉಳಿದಂತೆ ರವಿಶಂಕರ್, ಶೋಭರಾಜ್, ಶಂಕರ್ ಅಶ್ವಥ್, ವಿಕ್ಟರಿವಾಸು, ಕೋಟೆ ಪ್ರಭಾಕರ್ ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ಸಿ ಆ್ಯಂಡ್ ಎಂ ಮೂವೀಸ್’ ಬ್ಯಾನರ್‌ನಲ್ಲಿ ಬಸವರಾಜ್ ಟ್ರೇಲರ್ ನಲ್ಲಿ ಪ್ರಜ್ವಲ್ ಅಬ್ಬರ ಮಂಚಯ್ಯ ಸಿನಿಮಾವನ್ನು ನಿರ್ಮಿಸಿದ್ದಾರೆ.
ಇದನ್ನೂ ನೋಡಿ:ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ
“ಸಾಮಾನ್ಯವಾಗಿ ಸಿನಿಮಾ ರಿಲೀಸ್ ಹತ್ತಿರವಾಗುತ್ತಿದ್ದಂತೆ, ಸಹಜವಾಗಿಯೇ ಎಕ್ಸೈಟ್ ಮೆಂಟ್ ಹೆಚ್ಚಾಗುತ್ತದೆ. ಆದರೆ ಈ ಸಿನಿಮಾ ಮಾಡಿದ ಮೇಲೆ ನೆಮ್ಮದಿ ಕಾಣಿಸುತ್ತಿದೆ. ಸಿನಿಮಾ ಇಷ್ಟು ಚೆನ್ನಾಗಿ ಬರಲು ಚಿತ್ರತಂಡ ಒಟ್ಟಾಗಿ ಹಾಕಿದ ಪರಿಶ್ರಮ ಕಾರಣ. ಈ ಸಿನಿಮಾದಲ್ಲಿ ನನಗೆ ಮೂರು ವಿಭಿನ್ನವಾದ ಪಾತ್ರಗಳಿದ್ದು, ಒಟ್ಟು ಐದು ರೀತಿಯಲ್ಲಿ ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತೇನೆ. ಒಂದೇ ದಿನ ಮೂರೂ ಥರದ ಪಾತ್ರಗಳನ್ನು ಮಾಡಬೇಕಾ ಗಿದ್ದು, ಚಾಲೆಂಜಿಂಗ್ ಆಗಿತ್ತು’ ಎಂಬುದು ತಮ್ಮ ಪಾತ್ರದ ಬಗ್ಗೆ ನಟ ಪ್ರಜ್ವಲ್ ದೇವರಾಜ್ ಮಾತು.
“ಸಿನಿಮಾದಲ್ಲಿ ಆ್ಯಕ್ಷನ್, ಕಾಮಿಡಿ, ಎಂಟರ್ ಟೈನ್ಮೆಂಟ್ ಜೊತೆಗೆ ಒಂದು ರಿವೆಂಜ್ ಥಾಟ್ ಕೂಡ ಇದೆ. ಅದು ಸಿನಿಮಾದ ಕೊನೆಯವರೆಗೂ ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸುತ್ತಲೇ ಇರುತ್ತದೆ. ನಾನು ನಡೆಯುವ ದಾರಿ ಹೀಗೇ ಇರಬೇಕು ಅಂದು ಕೊಂಡಿರುತ್ತೇವೆ. ಆದರೆ, ಅದು ಹೋಗ್ತಾ ಹೋಗ್ತಾ ಕಳೆದು ಹೋಗುತ್ತದೆ. ಮನುಷ್ಯ ಯಾವಾಗಲೂ ಜಾಗೃತನಾಗಿರಬೇಕು ಎನ್ನುವುದೇ ಸಿನಿಮಾದ ಸಂದೇಶ. ಎಲ್ಲರಿಗೂ ಇಷ್ಟವಾಗುವಂಥ ಸಿನಿಮಾ ಮಾಡಿದ್ದೇವೆ’ ಎಂಬ ಭರವಸೆ ವ್ಯಕ್ತಪಡಿಸುತ್ತಾರೆ ಪ್ರಜ್ವಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.