ʼಕುಲ ಕುಲವೆಂದು ಹೊಡೆದಾಡದಿರಿʼ ಎನ್ನುತ್ತಲೇ ʼಕುಲಕಿಚ್ಚಿನ ರಾಜಕೀಯʼ ಮಾಡಿದವರ್ಯಾರು?:ಜೆಡಿಎಸ್


Team Udayavani, Nov 13, 2022, 11:31 AM IST

ʼಕುಲ ಕುಲವೆಂದು ಹೊಡೆದಾಡದಿರಿʼ ಎನ್ನುತ್ತಲೇ ʼಕುಲಕಿಚ್ಚಿನ ರಾಜಕೀಯʼ ಮಾಡಿದವರ್ಯಾರು?:ಜೆಡಿಎಸ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣದ ಬಳಿಕ ಆರಂಭವಾಗಿರುವ ರಾಜಕೀಯ ಹೇಳಿಕೆಗೆ ಭರಾಟೆ ಇನ್ನೂ ಮುಂದುವರಿದಿದೆ. ‘ಸುಳ್ ಬಿಜೆಪಿ ಸುಳ್ ಸಿಎಂ’ ಎಂದು ಟ್ವೀಟ್ ಮಾಡಿರುವ ಜೆಡಿಎಸ್ ಟೀಕಾಸ್ತ್ರ ಪ್ರಯೋಗಿಸಿದೆ.

ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಬಿಜೆಪಿ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ.  ʼಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ ಎಂದು ಖಾರವಾಗಿ ಟ್ವೀಟ್ ಮಾಡಿದೆ.

ಎಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರ ಮೋದಿ ಅವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ. ಮಾಜಿ ಪ್ರಧಾನಿಗಳನ್ನು ಸಮಾರಂಭಕ್ಕೆ ಆಹ್ವಾನಿಸಿಲ್ಲ ಎಂದು ಪ್ರಶ್ನೆ ಮಾಡಿದ್ದನ್ನೇ ʼಮಹಾ ಅಪರಾಧʼ ಎಂದು ಚಿತ್ರಿಸುತ್ತಿರುವ ಬಿಜೆಪಿಯ ವಿಕೃತಿ ಆದಿಯಿಂದಲೂ ಧರ್ಮ, ಜಾತಿ ಮತ್ತು ಸುಳ್ಳಿನ ಸುತ್ತಲೇ ಗಿರಕಿ ಹೊಡೆಯುತ್ತಿದೆ ಎನ್ನುವುದು ಸಾರ್ವಕಾಲಿಕ ಸತ್ಯ. ಸತ್ಯವನ್ನು ಮಿಥ್ಯೆ ಎನ್ನಲಾದಿತೆ? ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಸ್ತಿತ್ವದ ಭಯ ಎನ್ನುವುದು ಹಾಗಿರಲಿ, ಪ್ರಧಾನಿಯ ನಾಮಬಲ ಒಂದಿಲ್ಲದಿದ್ದರೆ ನಿಮಗೆ ಠೇವಣಿಗೂ ಖಾತರಿ ಇಲ್ಲ. ಇನ್ನು ಆರು ತಿಂಗಳಲ್ಲಿ ಮೋದಿ ಅವರು ಎಷ್ಟು ಸಲ ಕರ್ನಾಟಕಕ್ಕೆ ಓಡೋಡಿ ಬರುತ್ತಾರೋ ನೋಡೋಣ. ಅಲ್ಲಿ ನಿಮ್ಮ ಯೋಗ್ಯತೆಯ ಅಳತೆ ಎಷ್ಟು? ಎಂಬುದು ಗೊತ್ತಾಗುತ್ತದೆ ಎಂದು ಸವಾಲೆಸೆದಿದ್ದಾರೆ.

ಇದನ್ನೂ ಓದಿ:ಇತಿಹಾಸ ಪ್ರಸಿದ್ಧ ಶ್ರೀ ಆಂಜನೇಯಸ್ವಾಮಿ ಸನ್ನಿಧಾನದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವ

ಬಿಜೆಪಿಯ ಒಕ್ಕಲಿಗ ನಾಯಕರು ಮುನ್ನೆಲೆಗೆ ಬರುವುದನ್ನು ಕುಮಾರಸ್ವಾಮಿ ಅವರು ಸಹಿಸುತ್ತಿಲ್ಲ ಎನ್ನುತ್ತಿದೆ ಬಿಜೆಪಿ! ʼಭೂತದ ಬಾಯಲ್ಲಿ ಭಗದ್ಗೀತೆʼ ಎಂದರೆ ಇದೇ. ಧರ್ಮ, ಜಾತಿ, ಆಚಾರ, ವಿಚಾರ, ಆಹಾರದ ವಿಷಯದಲ್ಲೇ ವಿಷ-ವಿಕೃತಿಗಳನ್ನು ಬಿತ್ತಿದ ಬಿಜೆಪಿ, ಈಗ ಸಹಿಷ್ಣುತೆಯ ಬಗ್ಗೆ ಪಾಠ ಬಿಗಿಯುತ್ತಿದೆ! 20 ದಿನಗಳ ಹಿಂದೆ ಸಚಿವ ಅಶ್ವಥ ನಾರಾಯಣ ಅವರು ಮಾಜಿ ಪ್ರಧಾನಿಗಳ ನಿವಾಸಕ್ಕೆ ಭೇಟಿ ನೀಡಿ ಮೃತ್ತಿಕೆ ಸಂಗ್ರಹದ ಬಗ್ಗೆ ತಿಳಿಸಿ ಆಹ್ವಾನಿಸಿದ್ದರಷ್ಟೇ. ಆದರೆ, ಮುಖ್ಯಮಂತ್ರಿಗಳು ಪ್ರತಿಮೆ ಅನಾವರಣಕ್ಕೆ ಆಹ್ವಾನಿಸಿದ್ದರು ಮತ್ತೂ ಆಹ್ವಾನ ಪತ್ರಿಕೆಯಲ್ಲೂ ದೇವೇಗೌಡರ ಹೆಸರನ್ನು ನಮೂದಿಸಲಾಗಿತ್ತೆಂದು ಹಸಿಸುಳ್ಳನ್ನೇ ಬಿಜೆಪಿ ಟ್ವೀಟಿಸಿದೆ. ಬಿಜೆಪಿ ʼಗೊಬೆಲ್ ಸಂತತಿಯ ಶಿಶುʼ ಎನ್ನುವುದಕ್ಕೆ ಇದಕ್ಕಿಂತ ಸತ್ಯ ಸಾಕ್ಷ್ಯ ಬೇಕಾ? ʼಸುಳ್‌ ಬಿಜೆಪಿʼಗೆ ಸತ್ಯವೆಂದರೆ ಅಪಥ್ಯ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ʼಸುಳ್‌ ಸಿಎಂʼ ಎಂದೇ ಪ್ರಖ್ಯಾತಿ ಆಗುತ್ತಿದ್ದಾರೆ. ಇದಲ್ಲವೇ ವಿಪರ್ಯಾಸ? ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ, ಸ್ವತಃ ಫೋನ್‌ ಕರೆ ಮೂಲಕ ದೇವೇಗೌಡರನ್ನು ಆಹ್ವಾನಿಸಿದ್ದಾರೆ ಎಂದು ‘ಗೊಬೆಲ್ ಬಿಜೆಪಿ’ ಟ್ವೀಟಿಸಿ ಸುಳ್ಳು ಹೇಳಿದೆ. ಸತ್ಯ ಏನೆಂಬುದನ್ನು ನಾವೂ ಟ್ವೀಟಿನಲ್ಲೇ ರಾಜ್ಯದ ಜನತೆಗೆ ನಿವೇದಿಸಿದ್ದೇವೆ. ಅದನ್ನು ಓದಲು ʼಗೊಬೆಲ್‌ ಬಿಜೆಪಿʼಗೆ ಗರ ಬಡಿದಿದೆಯಾ ಎಂದು ಟ್ವೀಟ್ ಮಾಡಿದೆ.

ನಾಡಪ್ರಭುಗಳ ವಿಚಾರದಲ್ಲೂ ಜೆಡಿಎಸ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಹೇಳಿದೆ. ಅರ್ಧದಿನದ ಅರೆಬರೆ ಭೇಟಿಯಲ್ಲಿ ಘನವೆತ್ತ ಪ್ರಧಾನಿಗಳು ಮಾಡಿದ್ದಾದರೂ ಏನು? ‘ಒಂದೇ ಕಲ್ಲಿನಲ್ಲಿ ನಾಲ್ಕು ಜಾತಿಗಳ ಮತಬುಟ್ಟಿಗೆ ಕೈ ಹಾಕಿದ ಪ್ರಧಾನಿ’ / ‘ಪ್ರತಿಮಾ ಪಥ, ಮೋದಿ ರಥ’ ಎನ್ನುವ ಸುದ್ದಿಗಳನ್ನು ಬಿಜೆಪಿ ನೋಡಲಿಲ್ಲವೆ?  ಕಮಲಕ್ಕೆ ಕಾಮಾಲೆ ಕಣ್ಣು ಎನ್ನುವುದು ನಾಟಕವೋ, ಬೂಟಕವೋ? ಜಾತಿವಾರು ಮತಗಳ ಧ್ರುವೀಕರಣಕ್ಕೆ ಹೊರಟವರು ಯಾರು? ಶ್ರೀ ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆದು ತಂದವರು ಯಾರು? ಸಂತ ಕನಕದಾಸರ ʼಕುಲ ಕುಲವೆಂದು ಹೊಡೆದಾಡದಿರಿ..ʼ ಪದವನ್ನು ಹೇಳುತ್ತಲೇ ʼಕುಲಕಿಚ್ಚಿನ ರಾಜಕೀಯʼ ಮಾಡಿದವರು ಯಾರು? ಅಂಗೈ ಹುಣ್ಣಿಗೆ ಕನ್ನಡಿ ಯಾಕೆ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಸಂಸ್ಕಾರವೇ ಗೊತ್ತಿಲ್ಲದ ಪಕ್ಷಕ್ಕೆ ಶಿಷ್ಟಾಚಾರ ಮಾತೇಕೆ? ಅದು ತನಗಿಲ್ಲ ಎಂದು ಬಿಜೆಪಿ ಸಾಬೀತುಪಡಿಸಿದೆ. ಕನ್ನಡದ ಆಚಾರ-ವಿಚಾರಕ್ಕೆ ಕೊಡಲಿ ಪೆಟ್ಟು ಹಾಕುತ್ತಿರುವ ಆ ಪಕ್ಷ, ಕನ್ನಡನಾಡಿಗೆ ಬಹುದೊಡ್ಡ ಬೆದರಿಕೆ ಎಂದಿದೆ.

ಟಾಪ್ ನ್ಯೂಸ್

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.