ಹಿಮಾಚಲ ವಿಧಾನಸಭಾ ಚುನಾವಣೆ : ಶಿಮ್ಲಾದಲ್ಲಿ ಖಾಸಗಿ ವಾಹನದಲ್ಲಿ ಇವಿಎಂಗಳು ಪತ್ತೆ
ಕಾಂಗ್ರೆಸ್ ನಿಂದ ಟ್ಯಾಂಪರಿಂಗ್ ಆರೋಪ
Team Udayavani, Nov 13, 2022, 3:42 PM IST
ಶಿಮ್ಲಾ: ಮತಗಟ್ಟೆಗೆ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಸಿಬಂದಿಗಳು ಇವಿಎಂಗಳನ್ನು ಖಾಸಗಿ ವಾಹನದಲ್ಲಿ ಸಾಗಿಸುತ್ತಿದ್ದ ಆರೋಪದ ಮೇಲೆ ಶನಿವಾರ ರಾತ್ರಿ ಶಿಮ್ಲಾ ಜಿಲ್ಲೆಯ ರಾಂಪುರ ಪ್ರದೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಅಡ್ಡಗಟ್ಟಿದ ಘಟನೆ ನಡೆದಿದೆ.
ಹೊಸ ಸರಕಾರವನ್ನು ಆಯ್ಕೆ ಮಾಡಲು ಶನಿವಾರ (ನ12) ಹಿಮಾಚಲ ಪ್ರದೇಶದ 68 ಸ್ಥಾನಗಳಲ್ಲಿ ಮೊದಲ ಹಂತದ ಮತದಾನ ನಡೆದಿತ್ತು. ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು,ಇವಿಎಂಗಳಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ, ಜಿಲ್ಲಾ ಚುನಾವಣಾ ಆಯೋಗದ ಅಧಿಕಾರಿಗಳು ತಕ್ಷಣ ಮತದಾನ ಪಕ್ಷದ ಸದಸ್ಯರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದರು.
ಖಾಸಗಿ ಕಾರಿನಲ್ಲಿ ಇವಿಎಂಗಳನ್ನು ಸಾಗಿಸಲಾಗುತ್ತಿತ್ತು. ನಾವು ಅದನ್ನು ಹಿಂಬಾಲಿಸಿದ್ದೇವೆ ಮತ್ತು ಪೊಲೀಸರು ಮತ್ತು ಚುನಾವಣಾ ಆಯೋಗದ ಅಧಿಕಾರಿಗಳಿಗೆ ತಿಳಿಸಿದ್ದೇವೆ ಎಂದು ಕಾಂಗ್ರೆಸ್ ಶಾಸಕ ನಂದ್ ಲಾಲ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
66-ರಾಮ್‌ಪುರ (ಎಸ್‌ಸಿ) ವಿಧಾನಸಭಾ ಕ್ಷೇತ್ರ ದತ್ತನಗರ-49 ಕ್ಕೆ ನಿಯೋಜಿಸಲಾದ ಮತಗಟ್ಟೆ ಸಂಖ್ಯೆ 146 ರ ಸಿಬಂದಿಗಳು ತಮ್ಮ ಖಾಸಗಿ ವಾಹನದಲ್ಲಿ ಇವಿಎಂಗಳನ್ನು ಕೊಂಡೊಯ್ಯುತ್ತಿದ್ದಾರೆ ಎಂದು ಮತದಾನ ಮುಗಿದ ನಂತರ ತಮಗೆ ಮಾಹಿತಿ ಲಭಿಸಿದೆ ಎಂದು ಜಿಲ್ಲಾ ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಇವಿಎಂ/ವಿವಿಪ್ಯಾಟ್ ಯಂತ್ರಗಳನ್ನು ಬಿಜೆಪಿಯ ಒತ್ತಾಯದ ಮೇರೆಗೆ ಟ್ಯಾಂಪರಿಂಗ್ ಮಾಡುವ ಉದ್ದೇಶದಿಂದ ಸಾಗಿಸಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ನಿಯಮದ ಪ್ರಕಾರ, ಮತದಾನ ಪ್ರಕ್ರಿಯೆ ಮುಗಿದ ನಂತರ, ಇವಿಎಂಗಳನ್ನು ಸರ್ಕಾರಿ ವಾಹನಗಳಲ್ಲಿ ಎಣಿಕೆ ಕೇಂದ್ರಕ್ಕೆ ಸಾಗಿಸಬೇಕು.
ಖಾಸಗಿ ವಾಹನದಲ್ಲಿ ಇವಿಎಂ/ವಿವಿಪ್ಯಾಟ್ ಯಂತ್ರವನ್ನು ಸಾಗಿಸುತ್ತಿರುವುದನ್ನು ನಾವು ಕಂಡುಕೊಂಡಿದ್ದೇವೆ, ಇದು ಇಸಿಐನ ಸೂಚನೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಸರಿಯಾದ ಕಾರ್ಯವಿಧಾನಗಳನ್ನು ಅನುಸರಿಸಿಲ್ಲ ಮತ್ತು ಉಲ್ಲಂಘಿಸಿರುವುದು ಪ್ರಾಥಮಿಕವಾಗಿ ಕಂಡುಬಂದಿದೆ ಎಂದು ಚುನಾವಣಾಧಿಕಾರಿ (ಎಸ್‌ಡಿಎಂ) ಸುರೇಂದರ್ ಮೋಹನ್ ಆದೇಶದಲ್ಲಿ ತಿಳಿಸಿದ್ದಾರೆ. ಮತಗಟ್ಟೆ ಸಿಬಂದಿಗಳನ್ನು ಅಮಾನತು ಮಾಡಲಾಗಿದೆ ಎಂಬ ವರದಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.