“ಭಾರತದಲ್ಲಿರುವ ಶೇ.99ರಷ್ಟು ಮುಸ್ಲಿಮರು ಹಿಂದೂಸ್ಥಾನಿಗಳು’
Team Udayavani, Nov 13, 2022, 10:32 PM IST
ಥಾಣೆ: ಭಾರತದಲ್ಲಿರುವ ಶೇ.99ರಷ್ಟು ಮುಸ್ಲಿಮರು ತಮ್ಮ ಪೂರ್ವಜರು, ಸಂಸ್ಕೃತಿ, ಸಂಪ್ರದಾಯ ಮತ್ತು ಮಾತೃಭೂಮಿಯ ಕಾರಣದಿಂದಾಗಿ ಹಿಂದೂಸ್ಥಾನಿಗಳೇ ಆಗಿದ್ದಾರೆ ಎಂದು ಆರ್‌ಎಸ್‌ಎಸ್ ನಾಯಕ ಇಂದ್ರೇಶ್ ಕುಮಾರ್ ಹೇಳಿದರು.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉತ್ತಾನ್‌ನಲ್ಲಿ ನಡೆದ ಮುಸ್ಲಿಂ ರಾಷ್ಟ್ರೀಯ ಮಂಚ್(ಎಂಆರ್‌ಎಂ) ಕಾರ್ಯಕರ್ತರ ಎರಡು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, “ಭಾರತೀಯರಿಗೆ ಸಾಮಾನ್ಯ ಪೂರ್ವಜರಿದ್ದರು. ನಮ್ಮ ಮಾತೃಭೂಮಿ ಒಂದೇ ಆಗಿದೆ.
ಹೀಗಾಗಿ ಹಿಂದೂಗಳು ಮತ್ತು ಮುಸ್ಲಿಮರ ಡಿಎನ್‌ಎ ಒಂದೇ ಆಗಿದೆ’ ಎಂಬ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಯನ್ನು ಬೆಂಬಲಿಸಿದರು.
“ರಾಷ್ಟ್ರದ ಬಗೆಗಿನ ನಮ್ಮ ಕರ್ತವ್ಯವನ್ನು ನಾವು ಎಲ್ಲದಕ್ಕಿಂತ ಪ್ರಮುಖ ಎಂದು ಪರಿಗಣಿಸಬೇಕು. ನಂತರ ಇತರೆ ವಿಷಯಗಳು ಮುಖ್ಯವಾಗಬೇಕು. ಪವಿತ್ರ ಕುರಾನ್‌ನ ತತ್ವ ಮತ್ತು ನಿರ್ದೇಶನಗಳನ್ನು ನೀವು ಪರಿಪಾಲಿಸಬೇಕು,’ ಎಂದು ಎಂಆರ್‌ಎಂ ಕಾರ್ಯಕರ್ತರನ್ನು ಉದ್ದೇಶಿಸಿ ಇಂದ್ರೇಶ್ ಕುಮಾರ್ ಹೇಳಿದರು. ಕಾರ್ಯಾಗಾರದಲ್ಲಿ ಮಹಿಳೆಯರು ಸೇರಿದಂತೆ ಮಹಾರಾಷ್ಟ್ರದ ವಿವಿಧ ಭಾಗಗಳ 40ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.