ಶಾಲಾ ಕಟ್ಟಡ ವಿವಾದಕ್ಕೆ ತೆರೆ ಎಳೆದ ಬೊಮ್ಮಾಯಿ: ಆರು ಸಾವಿರ ಕೊಠಡಿ ನಿರ್ಮಾಣದ ಭರವಸೆ
Team Udayavani, Nov 14, 2022, 2:55 PM IST
ಕಲಬುರಗಿ: ಶಾಲಾ ಕಟ್ಟಡದ ವಿಚಾರದಲ್ಲಿ ನಡೆಯುತ್ತಿರುವ ವಾದ- ವಿವಾದ ಬೆಳೆಯದಂತೆ ಎಚ್ಚರಿಕೆ ಹೆಜ್ಜೆ ಇಟ್ಟಿರುವ ಸಿಎಂ ಬಸವರಾಜ ಬೊಮ್ಮಾಯಿ ಒಟ್ಟು ಎರಡು ಸಾವಿರ ಶಾಲಾ ಕೊಠಡಿಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು ಆರು ಸಾವಿರ ಕೊಠಡಿಗಳನ್ನು ಕರ್ನಾಟಕದಲ್ಲಿ ನಿರ್ಮಿಸಲಾಗುವುದು ಎಂದು ಘೋಷಿಸಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇದೆ ವರ್ಷ 8 ಸಾವಿರ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಹೆಚ್ಚುವರಿ ಶಾಲಾ ಕೊಠಡಿಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ನೀಡಲು ನಿರ್ಧರಿಸಲಾಗಿದೆ. ಇದೊಂದು ದೊಡ್ಡ ಕ್ರಾಂತಿಯಾಗಲಿದ್ದು ಇದನ್ನು ಮೂರು ವರ್ಷ ನಿರಂತರವಾಗಿ ಮಾಡಿದರೆ, ಕರ್ನಾಟಕದಲ್ಲಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ಕೊಠಡಿಗಳ ಮೂಲಸೌಕರ್ಯದ ಕೊರತೆ ನೀಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಇದನ್ನೂ ಓದಿ:ಎಲ್ಲ ಮಾದರಿಯ ಹಾಲಿನ ದರದಲ್ಲಿ ಮೂರು ರೂಪಾಯಿ ಹೆಚ್ಚಳ: ರೈತರ ಸಹಾಯಕ್ಕೆ ನಿಂತ ಕೆಎಂಎಫ್
ಅದರ ಜೊತೆಗೆ ಮುಂದಿನ ಆಗಸ್ಟ್ 15 ರೊಳಗೆ ಎಲ್ಲಾ ಸರ್ಕಾರಿ ಶಾಲೆಗಳ ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಕ್ಕಾಗಿ 250 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. 15 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಲಾಗಿದೆ. ಎರಡನೇ ಹಂತದ ನೇಮಕಾತಿಗೆ ಮುಂದಿನ ವಾರದಲ್ಲಿ ಅನುಮತಿ ನೀಡಲಿದ್ದೇವೆ. ಶಿಕ್ಷಣ ಕ್ಷೇತ್ರದಲ್ಲಿದ್ದ ಕೊರತೆಯನ್ನು ಯಾವುದೇ ಸರ್ಕಾರ ಮುಟ್ಟಲೂ ಹೋಗಿರಲಿಲ್ಲ. ಆಮೂಲಾಗ್ರ ಬದಲಾವಣೆಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ತಂದು ಅಗತ್ಯವಿರುವ ಮೂಲಸೌಕರ್ಯ ಒದಗಿಸುವುದು ಸೇರಿದಂತೆ ಗುಣಮಟ್ಟದ ಶಿಕ್ಷಣ ಕ್ಕಾಗಿ ಶಿಕ್ಷಕರ ತರಬೇತಿ ಹಾಗೂ ಪಠ್ಯಕ್ರಮದ ಬಗ್ಗೆ ಗಮನ ನೀಡಲಾಗಿದೆ. ಮುಂದಿನ ವರ್ಷ ನೂತನ ಶಿಕ್ಷಣ ನೀತಿಯನ್ನು ಪ್ರಾಥಮಿಕ ಶಿಕ್ಷಣದಲ್ಲಿಯೂ ಅನುಷ್ಠಾನಕ್ಕೆ ತರಲಾಗುವುದು ಎಂದರು.
ಕೇಸರೀಕರಣ: ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಇತ್ತೀಚಿನ ದಿನಗಳಲ್ಲಿ ಏನೇ ಪ್ರಗತಿ ಮಾಡಿದರೂ ವಿವಾದ ಸೃಷ್ಟಿ ಮಾಡುವ ಚಟವಿದೆ. ಪ್ರಗತಿಯ ಬಗ್ಗೆ ಆಸಕ್ತಿ ಇಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ಬಗ್ಗೆ ಸಂತೋಷವಿಲ್ಲ. ಇಲ್ಲಿಯೂ ರಾಜಕಾರಣ ಮಾಡುತ್ತಾರೆ. ಇದನ್ನು ಮಾಡಿದರೆ ಸರ್ಕಾರಕ್ಕೆ ಅದರ ಶ್ರೇಯಸ್ಸು ಹೋಗುತ್ತದೆ ಎಂದು ಸಣ್ಣ ಪುಟ್ಟ ವಿಚಾರಗಳಿಗೆ ತಗಾದೆ ತೆಗೆದರೆ ಅಡಕ್ಕೆ ನಾವು ಲಕ್ಷ್ಯ ಕೊಡುವುದಿಲ್ಲ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರುತ್ತಿದ್ದೇವೆ ಎಂದರು.
ಉತ್ತಮ ವಾತಾವರಣದ ನಿರ್ಮಾಣ: ಖಂಡಿತ ಕೇಸರೀಕರಣ ಆಗುತ್ತಿಲ್ಲ. ಕೇಸರಿ ಎಂದರೆ ಕಣ್ಣು ಕೆಂಪೇಕಾಗುತ್ತದೆ. ಸ್ವಾಮಿ ವಿವೇಕಾನಂದರು ಸನ್ಯಾಸಿ. ಜಗತ್ತಿಗೆ ವಿವೇಕ ನೀಡಿದವರು. ಅವರ ಹೆಸರಿನಲ್ಲಿ ಮಕ್ಕಳಿಗೆ ಪ್ರೇರಣೆ ಸಿಗಲಿ ಎಂದು ಯೋಜನೆ ರೂಪಿಸಿದೆ. ಒಳ್ಳೆ ವಾತಾವರಣ ನಿರ್ಮಾಣವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
MUST WATCH
ಹೊಸ ಸೇರ್ಪಡೆ
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.