ಸಿದ್ದರಾಮಯ್ಯ ಸೋಲಿಸಲು ಬಿಜೆಪಿ ಜತೆ ಮೈತ್ರಿ: ಹೆಚ್ ಡಿಕೆ ಹೇಳಿದ್ದೇನು?

ಕೋಲಾರದಲ್ಲೇ ನಿಲ್ಲಲಿ, ಬೇರೆ ಕಡೆ ನಿಲ್ಲಲಿ. ನಾವೇನು...

Team Udayavani, Nov 14, 2022, 8:13 PM IST

1-wewqewqew

ಬೆಂಗಳೂರು: ಮುಂಬರುವ ಚುನಾವಣೆಗೆ ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ- ಜೆಡಿಎಸ್ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್‌ಗೆ ಬಿಜೆಪಿ ಬೆಂಬಲ ಎಂದು ಕೆಲವೆಡೆ ವರದಿ ಆಗಿದೆ. ಯಾವುದೇ ಕಾರಣಕ್ಕೂ ಆ ಪಕ್ಷದ ಜತೆ ಒಪ್ಪಂದ, ಮೈತ್ರಿ ಮಾಡಿಕೊಳ್ಳಲ್ಲ. ಬಿಜೆಪಿ ಜೊತೆ ಯಾವುದೇ ಚರ್ಚೆ ಆಗಿಲ್ಲ, ಮುಂದೆಯೂ ಆಗಲ್ಲ ಎಂದರು

ಸಿದ್ದರಾಮಯ್ಯ ಅವರು ಕೋಲಾರದಲ್ಲೇ ನಿಲ್ಲಲಿ, ಬೇರೆ ಕಡೆ ನಿಲ್ಲಲಿ. ನಾವೇನು ಬಿಜೆಪಿ ಜತೆ ಸೇರಿ ಅವರ ವಿರುದ್ಧ ಕುತಂತ್ರ ಮಾಡಬೇಕಿಲ್ಲ. ಬಿಜೆಪಿಯವರಂತೆ ಸಣ್ಣ ಮಟ್ಟದದಲ್ಲಿ ನಾನು ಮಾತನಾಡುವುದಿಲ್ಲ. ನಾವು ಏನೇ ಮಾಡಿದರೂ ಸೋಲಿಸುವುದು, ಗೆಲ್ಲಿಸುವುದು ನಮ್ಮ ಕೈಯಲ್ಲಿ ಇರುವುದಿಲ್ಲ. ನಮಗೆ ಕೋಲಾರದಲ್ಲಿ ಸಮಸ್ಯೆಯೇ ಇಲ್ಲ.‌ ಪಕ್ಷದ ಅಭ್ಯರ್ಥಿ ಯಾರು ಅನ್ನುವ ನಿರ್ಣಯ ಆಗಿದೆ. ಬೇರೆ ಪಕ್ಷದ ಜತೆ ಸೇರಿ ತಂತ್ರಗಾರಿಕೆ ಮಾಡುವಂತದ್ದೇನೂ ಇಲ್ಲ ಎಂದು ಅವರು ಹೇಳಿದರು.

ಸಿದ್ದರಾಮಯ್ಯರನ್ನು ಅವರ ಪಕ್ಷದವರೇ ಸೋಲಿಸುತ್ತಾರೆ
ಸಿದ್ದರಾಮಯ್ಯ ಅವರೇ ಆಗಲಿ, ಇನ್ನೊಬ್ಬರೇ ಬರಲಿ, ನಮಗೆ ಹೆದರಿಕೆ ಇಲ್ಲ. ಕೋಲಾರದಲ್ಲಿ ನಮ್ಮಲ್ಲಿ ಸಮರ್ಥ ಅಭ್ಯರ್ಥಿಗಳು ಇದ್ದಾರೆ‌. ಹೀಗೆ ಹೇಳಿದ ಕೂಡಲೇ ಸಿದ್ದರಾಮಯ್ಯ ಬಗ್ಗೆ ನಾವು ಸಾಫ್ಟ್ ಅಂತ ಅಲ್ಲ. ಎಲ್ಲರ ರೀತಿ ನಾವು ವೀರಾವೇಶದಿಂದ ಮಾತನಾಡುವುದು ಪ್ರಯೋಜನ ಇಲ್ಲ. ಎಲ್ಲಿ ಎನು ಕೆಲಸ ಮಾಡಬೇಕೊ ಮಾಡುತ್ತೇವೆ. ಸಿದ್ದರಾಮಯ್ಯ ಅವರನ್ನು ನಾವು ಸೋಲಿಸಬೇಕಿಲ್ಲ, ಅವರ ಪಕ್ಷದವರೇ ಸೋಲಿಸುತ್ತಾರೆ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

18ರಿಂದ ಪಂಚರತ್ನ ರಥಯಾತ್ರೆ

ಪಕ್ಷದ ಅಧ್ಯಕ್ಷರು ಹಾಗಾಗಿ ಸಿ.ಎಂ.ಇಬ್ರಾಹಿಂ ಅವರನ್ನು ಭೇಟಿ ನೀಡಿದೆ. ಹಲವಾರು ವಿಚಾರಗಳ ಚರ್ಚೆ ಮಾಡಿದ್ದೇನೆ. ಪಕ್ಷದ ಸಂಘಟನೆ, ನವೆಂಬರ್ 18ರಿಂದ ಪಂಚರತ್ನ ರಥಯಾತ್ರೆ ಪ್ರಾರಂಭ ಮಾಡಬೇಕು ಅಂತ ಇದ್ದೇವೆ. ಯಾವ ರೀತಿ ಮಾಡಬೇಕು ಅಂತ ಚರ್ಚೆ ಮಾಡಲು ಬಂದಿದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯ ವಿಚಾರವಾಗಿಯೂ ಮಾತನಾಡಿದ್ದೇನೆ ಎಂದರು.

ನಾವು ಸಹ ಪ್ರತಿ ಅಭ್ಯರ್ಥಿ ಗಳಿಗೆ ಮುಂದಿನ ಆರು ತಿಂಗಳಿಗೆ ಯಾವ ರೀತಿ ಚುನಾವಣಾ ತಂತ್ರ ಅಳವಡಿಸಬೇಕು.‌ ಪ್ರತಿ ಬೂತ್ ಮಟ್ಟದಲ್ಲಿ ಯಾವ ರೀತಿ ಜವಾಬ್ದಾರಿ ನಿರ್ವಹಣೆ, ಪ್ರತಿ ಮನೆ ಮನೆಗೆ ಪಂಚರತ್ನ‌ ಯೋಜನೆ ಮುಟ್ಟಿಸುವ ವಿಚಾರ. ಪ್ರತಿ ಅಭ್ಯರ್ಥಿ ಸೋಷಿಯಲ್ ಮೀಡಿಯಾದಲ್ಲಿ ಯಾವ ರೀತಿ ಮಾಡಬೇಕು. ನಿತ್ಯದ ಅವರ ಚಟುವಟಿಕೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಯಾವ ರೀತಿ ಮಾಡಬೇಕು. ನಮ್ಮ ಪಕ್ಷ ಸೈಲೆಂಟ್ ಆಗಿ ಕೆಲಸ ಮಾಡ್ತಾ ಇದ್ದೇವೆ. ಅಧ್ಯಕ್ಷರು ನಿಲ್ಲಿಸಬೇಕು ಅಂತ ಎಂಟತ್ತು ಕ್ಷೇತ್ರದಲ್ಲಿ ಒತ್ತಡ ಇದೆ. ನಾನು ಅವರು ಇಬ್ಬರೇ ಓಡಾಡಬೇಕಾಗಿದೆ. ಇಬ್ರಾಹಿಂ ಹಾಗೂ ನಾನು ರಾಜ್ಯ ಸುತ್ತಬೇಕು. ಪಕ್ಷ ಸಂಪೂರ್ಣ ಬಹುಮತ ತರಲು ಮಾಡಲಾಗುತ್ತದೆ ಎಂದರು.

ಇವರು ಕೇಸರಿ ಬಣ್ಣ ಬಳಿಯುತ್ತಾರೆ, ಇನ್ನೊಬ್ಬರು ಬಂದು ಇನ್ನೊಂದು ಬಣ್ಣ ಬಳಿಯುತ್ತಾರೆ

ಶಾಲೆಗಳಿಗೆ ಕೇಸರಿ ಬಣ್ಣ ಹಚ್ಚುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್ ಡಿಕೆ, ಇವರು ( ಬಿಜೆಪಿ) ಬಂದಿದ್ದಾರೆ ಕೇಸರಿ ಬಣ್ಣ ಹಚ್ಚುತ್ತಿದ್ದಾರೆ. ಮುಂದೆ ಬರುವವರು ಇನ್ನೊಂದು ಬಣ್ಣ ಹಚ್ಚುತ್ತಾರೆ. ಒಬ್ಬಬ್ಬೊರು ಒಂದೊಂದು ಬಣ್ಣ ಹಚ್ತಾರೆ.ಕಲಿಕೆಗೆ ಪ್ರಾಮುಖ್ಯತೆ ಕೊಡಬೇಕಿದೆ ಎಂದರು.

ಸಂಸದ ಪ್ರತಾಪ್ ಸಿಂಹ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಕುಮಾರಸ್ವಾಮಿ ಅವರು, ಅವರಿಗೆ ಒಡೆಯೋದೇ ಕೆಲಸ.‌ ಬಿಜೆಪಿಯವರಿಗೆ ಕಟ್ಟಿ ಅಭ್ಯಾಸ ಇಲ್ಲ.‌ಜನ ಇವರ ಹೇಳಿಕೆಗಳನ್ನು ಗಮನಿಸಬೇಕು. ಜನಕ್ಕೆ ನೆರಳು ಕೊಡೋದು ಮುಖ್ಯ. ನೆರಳು ಕೊಡೋದು ಯಾವುದಾದ್ರೇನು? ಎಂದರು.

ಟಾಪ್ ನ್ಯೂಸ್

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್‌ ಮೀನಾ ಬಂಧನ!

Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್‌ ಮೀನಾ ಬಂಧನ!

PM has not read Constitution, I guarantee this: Rahul

Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್‌

Kerala:ಧರ್ಮ ಆಧಾರಿತ ವಾಟ್ಸಾಪ್‌ ಗ್ರೂಪ್‌ ರಚನೆ ಆರೋಪ; ಇಬ್ಬರು ಐಎಎಸ್‌ ಅಧಿಕಾರಿಗಳ ಅಮಾನತು

Kerala:ಧರ್ಮ ಆಧಾರಿತ ವಾಟ್ಸಾಪ್‌ ಗ್ರೂಪ್‌ ರಚನೆ ಆರೋಪ; ಇಬ್ಬರು ಐಎಎಸ್‌ ಅಧಿಕಾರಿಗಳ ಅಮಾನತು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.