ಶಬರಿಮಲೆ ಯಾತ್ರೆ: ಬೆಳಗಾವಿಯಿಂದ ಕೊಲ್ಲಂಗೆ ವಿಶೇಷ ರೈಲು ಸಂಚಾರ
Team Udayavani, Nov 15, 2022, 4:14 PM IST
ಹುಬ್ಬಳ್ಳಿ: ಪ್ರಯಾಣಿಕರ ಬೇಡಿಕೆ ಮೇರೆಗೆ ಬೆಳಗಾವಿ ಸಂಸದೆ ಮಂಗಲಾ ಎಸ್. ಅಂಗಡಿ ಅವರು ಶಬರಿಮಲೆಗೆ ಹೋಗುವ ತ್ರಾರ್ಥಿಗಳ ಅನುಕೂಲಕ್ಕಾಗಿ ಬೆಳಗಾವಿಯಿಂದ ಕೊಲ್ಲಂಗೆ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಸಚಿವಾಲಯಕ್ಕೆ ಮನವಿ ಸಲ್ಲಿಸಿ ಕೋರಿದ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಕೆಲ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ನ.20ರಂದು ಬೆಳಗಾವಿ-ಕೊಲ್ಲಂ ವಿಶೇಷ ಎಕ್ಸ್ಪ್ರೆಸ್ ರೈಲು (07357) ಬೆಳಗ್ಗೆ 11:30 ಗಂಟೆಗೆ ಬೆಳಗಾವಿಯಿಂದ ಹೊರಟು ಮರುದಿನ ಮಧ್ಯಾಹ್ನ 3:15 ಗಂಟೆಗೆ ಕೊಲ್ಲಂ ತಲುಪಲಿದೆ. ಅದೇರೀತಿ 21ರಂದು ಕೊಲ್ಲಂ-ಬೆಳಗಾವಿ ರೈಲು (07358) ಸಂಜೆ 5:10 ಗಂಟೆಗೆ ಕೊಲ್ಲಂನಿಂದ
ಹೊರಟು ಮರುದಿನ ರಾತ್ರಿ 11:00 ಗಂಟೆಗೆ ಬೆಳಗಾವಿ ತಲುಪಲಿದೆ.
ಈ ವಿಶೇಷ ರೈಲು ಖಾನಾಪುರ, ಲೋಂಡಾ, ಧಾರವಾಡ, ಹುಬ್ಬಳ್ಳಿ, ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ, ತಿಪಟೂರು, ತುಮಕೂರು, ಯಲಹಂಕ, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೊದನೂರು, ಪಾಲಕ್ಕಾಡ್,
ತ್ರಿಶೂರ್, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಸ್ಸೆರಿ, ತಿರುವಲ್ಲಾ, ಚೆಂಗನ್ನೂರ, ಮಾವೇಲಿಕರ, ಕಾಯಂಕುಲಂ, ಸಸ್ತಾನ್ಕೋಟ್ಟ ನಿಲ್ದಾಣಗಳಲ್ಲಿ ನಿಲುಗಡೆ
ಆಗಲಿದೆ. ಈ ರೈಲು ಒಂದು ಎಸಿ-2 ಟೈರ್, ಎಂಟು ಎಸಿ 3-ಟೈರ್, ಒಂಬತ್ತು ಸ್ಲಿಪರ್ ಕ್ಲಾಸ್ ಮತ್ತು ಎರಡು ಲಗೇಜ್ ಕಮ್ ಬ್ರೇಕ್-ವ್ಯಾನ್ ಸೇರಿ ಜನರೇಟರ್ ಕಾರ್ ಒಳಗೊಂಡಿರುವ 20 ಬೋಗಿಗಳ ಸಂಯೋಜನೆ ಹೊಂದಿದೆ.
ಹುಬ್ಬಳ್ಳಿ-ಕೊಲ್ಲಂ-ಹುಬ್ಬಳ್ಳಿ: ನ.27ರಂದು ಹುಬ್ಬಳ್ಳಿ-ಕೊಲ್ಲಂ ವಿಶೇಷ ಎಕ್ಸ್ಪ್ರೆಸ್ ರೈಲು (07359) ಮಧ್ಯಾಹ್ನ 2:40 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಮರುದಿನ ಮಧ್ಯಾಹ್ನ 3:15 ಗಂಟೆಗೆ ಕೊಲ್ಲಂ ತಲುಪಲಿದೆ. ಅದೇ ರೀತಿ 28ರಂದು ಕೊಲ್ಲಂ-ಹುಬ್ಬಳ್ಳಿ ರೈಲು (07360) ಸಂಜೆ 5:10 ಗಂಟೆಗೆ ಕೊಲ್ಲಂನಿಂದ ಹೊರಟು ಮರುದಿನ ರಾತ್ರಿ 8:00 ಗಂಟೆಗೆ ಹುಬ್ಬಳ್ಳಿ ತಲುಪಲಿದೆ.
ಈ ವಿಶೇಷ ರೈಲು ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ, ತಿಪಟೂರು, ತುಮಕೂರು, ಯಲಹಂಕ, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಸ್ಸೆರಿ, ತಿರುವಲ್ಲಾ, ಚೆಂಗನ್ನೂರ, ಮಾವೇಲಿಕರ, ಕಾಯಂಕುಲಂ, ಸಸ್ತಾನ್ಕೋಟ್ಟ ನಿಲ್ದಾಣಗಳಲ್ಲಿ ನಿಲುಗಡೆ ಆಗಲಿದೆ.
ಬೆಳಗಾವಿ-ಕೊಲ್ಲಂ-ಬೆಳಗಾವಿ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್: ಡಿ.4ರಿಂದ ಜ.15ರ ವರೆಗೆ ಬೆಳಗಾವಿ-ಕೊಲ್ಲಂ ವಿಶೇಷ ಎಕ್ಸ್ಪ್ರೆಸ್ (07361) ರೈಲು ಪ್ರತಿ ರವಿವಾರ ಬೆಳಗ್ಗೆ 11:30 ಗಂಟೆಗೆ ಬೆಳಗಾವಿಯಿಂದ ಹೊರಟು ಮರುದಿನ ಮಧ್ಯಾಹ್ನ 3:15 ಗಂಟೆಗೆ ಕೊಲ್ಲಂ ತಲುಪಲಿದೆ. ಅದೇ ರೀತಿ ಡಿ. 5ರಿಂದ 16ರ ವರೆಗೆ ಕೊಲ್ಲಂ-ಬೆಳಗಾವಿ ರೈಲು (07362) ಪ್ರತಿ ಸೋಮವಾರ ಸಂಜೆ 5:10 ಗಂಟೆಗೆ ಕೊಲ್ಲಂನಿಂದ ಹೊರಟು ಮರುದಿನ ರಾತ್ರಿ 11:00 ಗಂಟೆಗೆ ಬೆಳಗಾವಿ ತಲುಪಲಿದೆ. ಈ ವಿಶೇಷ ರೈಲುಗಳು (07359/07360 ಮತ್ತು 07361/07362) ಒಂದು ಎಸಿ-2 ಟೈರ್, ಎರಡು ಎಸಿ-3 ಟೈರ್, ಹತ್ತು ಸ್ಲಿಪರ್ ಕ್ಲಾಸ್ ಮತ್ತು ಎರಡು ದ್ವಿತೀಯ ದರ್ಜೆ ಲಗೇಜ್ ಕಮ್ ಬ್ರೇಕ್-ವ್ಯಾನ್/ಅಂಗವಿಕಲ ಸ್ನೇಹಿ ಕಂಪಾರ್ಟ್ಮೆಂಟ್ ಒಳಗೊಂಡು 15 ಬೋಗಿಗಳ ಸಂಯೋಜನೆ ಹೊಂದಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.