ವೈದ್ಯರ ಜತೆ ರೋಗಿಗೆ ನೆರವಾದ ಮಂಗಳೂರು ಮೂಲದ ಗಗನಸಖಿ
ವಿಮಾನದಲ್ಲಿ ಪ್ರಯಾಣಿಕನಿಗೆ ಹೃದಯಾಘಾತ
Team Udayavani, Nov 16, 2022, 7:33 AM IST
ಮಂಗಳೂರು: ಲಂಡನ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಹೃದಯಾಘಾತಕ್ಕೊಳಗಾದ ವ್ಯಕ್ತಿಯ ಪ್ರಾಣ ರಕ್ಷಣೆಗೆ ವೈದ್ಯರ ಜತೆ ಮಂಗಳೂರು ಮೂಲದ ಗಗನಸಖಿ ನೆರವಾಗಿ ಗಮನ ಸೆಳೆದಿದ್ದಾರೆ.
ಘಟನೆ ಬಗ್ಗೆ ವೈದ್ಯ, ಮೂಲತಃ ಬೆಂಗಳೂರಿನವರಾದ ಲಂಡನ್‌ನಲ್ಲಿ ವೃತ್ತಿ ಮಾಡುತ್ತಿರುವ ಡಾ| ವಿಶ್ವರಾಜ್ ವೇಮಲ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.
ನ. 12ರಂದು ವಿಮಾನದಲ್ಲಿ ಬೆಂಗಳೂರಿಗೆ ಬರುತ್ತಿರುವಾಗ 43 ವರ್ಷದ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಏನು ಮಾಡುವುದು ಎಂದು ಚಿಂತಿಸುತ್ತಿದ್ದಾಗ, ತನ್ನಲ್ಲಿರುವ ಆಟೋಮೇಟೆಡ್ ಎಕ್ಸ್‌ಟರ್ನಲ್ ಡಿಫಿಬ್ರಿಲೇಟರ್ (ಎಇಡಿ) ನೆರವಾಯಿತು.
ಈ ವೇಳೆ ಗಗನಸಖಿಯರಾದ ಮಲ್ಲಿಶಾ ಹಾಗೂ ಮಂಗಳೂರಿನವರಾದ ಗಿರಿಥಾ ನೆರವಾಗಿದ್ದಾರೆ. ಅಂತಿಮವಾಗಿ ವಿಮಾನವನ್ನು ಮುಂಬಯಿಯಲ್ಲಿ ಇಳಿಸಿ ತುರ್ತು ನಿಗಾ ಘಟಕಕ್ಕೆ ಹಸ್ತಾಂತರಿಸಲಾಯಿತು. ಈ ವೇಳೆ ರೋಗಿಯ ಆರೋಗ್ಯ ಸ್ಥಿತಿ ಸ್ಥಿರವಾಗಿತ್ತು. ಬಳಿಕ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದಾರೆ ಎಂದು ಡಾ| ವಿಶ್ವರಾಜ್ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.