ಅರ್ಹರಿಗೆ ಮನೆ ಪರಿಹಾರ ನಿಶ್ಚಿತ: ಜಿಲ್ಲಾಧಿಕಾರಿ

ವಿಳಂಬ ಕುರಿತು ದೂರು ಬಂದಲ್ಲಿ ಪರಿಶೀಲಿಸಲಾಗುವುದು

Team Udayavani, Nov 16, 2022, 6:04 PM IST

ಅರ್ಹರಿಗೆ ಮನೆ ಪರಿಹಾರ ನಿಶ್ಚಿತ: ಜಿಲ್ಲಾಧಿಕಾರಿ

ಧಾರವಾಡ: ಮಳೆ ಹಾನಿ ಪರಿಹಾರ ಪಟ್ಟಿಯಿಂದ ವಂಚಿತವಾಗಿರುವ ಅರ್ಹ ಫಲಾನುಭವಿಗಳನ್ನು ಪರಿಹಾರಕ್ಕೆ ಪರಿಗಣಿಸಲು ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮಕ್ಕೆ ಮತ್ತೂಮ್ಮೆ ಮನವಿ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಮಂಗಳವಾರ ತಾಲೂಕು ದಂಡಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ವಿವಿಧ ಗ್ರಾಮಗಳ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೆ ಒಳಗಾಗಿರುವ ಮನೆಗಳ ಪಟ್ಟಿ ಅಂತಿಮಗೊಳಿಸಲಾಗಿದೆ. ಅದನ್ನು ಸರ್ಕಾರಕ್ಕೆ ಕಳುಹಿಸಿ ಕೂಡ ಆಗಿದೆ. ಆದರೆ ಮಳೆಹಾನಿ ಪರಿಹಾರ ನಿಗದಿಪಡಿಸುವಲ್ಲಿ ಒಂದಿಷ್ಟು ಗೊಂದಲಗಳು ಸೃಷ್ಟಿಯಾಗಿದ್ದು, ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು. ಅದಕ್ಕಾಗಿ ಆನ್‌ ಲೈನ್‌ನಲ್ಲಿಯೇ ಪಟ್ಟಿ ಸಲ್ಲಿಕೆಯಾಗಬೇಕು. ಈ ಕುರಿತು ಆರ್‌ಜಿಆರ್‌ಎಚ್‌ಸಿಗೆ ಮನವಿ ಮಾಡಲಾಗುವುದು ಎಂದರು.

ಗ್ರಾಮೀಣರ ದೂರು: ಮಾದನಬಾವಿ ಗ್ರಾಮದಲ್ಲಿ ಗ್ರಾಮಸೇವಕ ಮನೆಹಾನಿ ಕುರಿತು ಫಲಾನುಭವಿಗಳಿಗೆ ಕೆಟಗೇರಿ ಮಾಡಿಸುತ್ತೇನೆ ಎಂದು ಹೇಳಿ ಹಣ ಪಡೆದು, ನಂತರ ಅವನು ಹೇಳಿದ ಕೆಟಗೇರಿ ಆಗದ್ದರಿಂದ ಮರಳಿ ಫಲಾನುಭವಿಗೆ ಹಣ ವಾಪಸ್‌ ನೀಡಿರುವ ಕುರಿತು ದೂರು ಬಂದಿದ್ದು, ಅದನ್ನು ಅಧಿಕಾರಿಗಳಿಂದ ತನಿಖೆ ಮಾಡಲಾಗುವುದು. ತಪ್ಪು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಖಡಕ್‌ ಎಚ್ಚರಿಕೆ ನೀಡಿದರು.

ಸಾರ್ವಜನಿಕರು ಸಲ್ಲಿಸುವ ಎಲ್ಲ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಭೂಮಿ ವಿಭಾಗದಲ್ಲಿ ಜಿಲ್ಲೆ ಸತತವಾಗಿ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ. ವಿಳಂಬ ಕುರಿತು ದೂರು ಬಂದಲ್ಲಿ ಪರಿಶೀಲಿಸಲಾಗುವುದು ಎಂದರು.ಮಳೆಹಾನಿಯಿಂದ ಮನೆಹಾನಿ ಹಾಗೂ ಪರಿಹಾರ ಜಮೆ ಕುರಿತು ಯಾದವಾಡ, ಮುಳಮುತ್ತಲ, ಮಾದನಬಾವಿ, ನಿಗದಿ, ಹೆಬ್ಬಳ್ಳಿ, ಅಮ್ಮಿನಬಾವಿ ಮತ್ತು ಕೊಪ್ಪದಕೇರಿಯಲ್ಲಿರುವ ಪಾಲಿಕೆ ಉದ್ಯಾನವನಕ್ಕೆ ಮೂಲ ಸೌಕರ್ಯ ಕಲ್ಪಿಸುವುದು, ಹೊಸಯಲ್ಲಾಪುರ ವ್ಯಾಪ್ತಿಯಲ್ಲಿ ಪೋಡಿ ಮಾಡುವಲ್ಲಿನ ವಿಳಂಬ ಕುರಿತು, ಕಲ್ಲೆ ಗ್ರಾಮ ಸರ್ವೇ ನಂಬರ್‌ಗಳ ದಾಖಲೆ ಸರಿಪಡಿಸುವ ಕುರಿತು, ರಾಜೀವ ಗಾಂಧಿ ಕುಟುಂಬ ಕಲ್ಯಾಣ ಯೋಜನೆ ಪರಿಹಾರ ವಿಳಂಬ, ಜಮೀನು ಖಾತಾ ಬದಲಾವಣೆ ಮುಂತಾದ ವಿಷಯಗಳ ಕುರಿತು ಸಾರ್ವಜನಿಕರು ಅಹವಾಲು ಸಲ್ಲಿಸಿದರು. ಪರಿಶೀಲಿಸಿ, ಸೂಕ್ತ ಕ್ರಮ ಜರುಗಿರುವ ಕುರಿತು ಜಿಲ್ಲಾಧಿಕಾರಿ ತಿಳಿಸಿದರು.

ತಹಶೀಲ್ದಾರ್‌ ಸಂತೋಷ ಹಿರೇಮಠ ಅವರು, ಸಾರ್ವಜನಿಕ ಅಹವಾಲು ಸಲ್ಲಿಕೆ ಮತ್ತು ಕಚೇರಿ ಕಾರ್ಯ, ವಿವಿಧ ಯೋಜನೆಗಳ ಪ್ರಗತಿ ಕುರಿತು ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದರು. ಪ್ರೊಬೆಷನರಿ ಎಸಿ ಅನುರಾಧಾ ವಸ್ತ್ರದ, ಭೂದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕಿ ತನ್ವಿನ್‌ ಡಾಂಗಿ, ಸರ್ವೇ ಸಹಾಯಕ ಬಿ.ಎಚ್‌. ಮಾರುತಿ, ಗ್ರೇಡ್‌ 2 ತಹಶೀಲ್ದಾರ್‌ ಹಣಮಂತ ಕೊಚ್ಚರಗಿ ಇದ್ದರು. ತಹಶೀಲ್ದಾರ ಕಚೇರಿಯ ಉಪ ತಹಶೀಲ್ದಾರರಾದ ಮಂಜುನಾಥ ಗೂಳಪ್ಪನವರ, ರಮೇಶ ಬಂಡಿ, ಕಚೇರಿ ಶಿರಸ್ತೇದಾರ ಪ್ರವೀಣ ಪೂಜಾರ, ಕಂದಾಯ ನಿರೀಕ್ಷಕರಾದ ಗುರು ಸುಣಗಾರ, ಸಂಪತ್ತಕುಮಾರ ಗುರುವಡೆಯರ, ಐ.ಎಪ್‌. ಐಯ್ಯನಗೌಡರ ಇನ್ನಿತರರಿದ್ದರು.

ಟಾಪ್ ನ್ಯೂಸ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.