ಪ್ರತಿ ಕ್ಷೇತ್ರಕ್ಕೆ ಐದಕ್ಕಿಂತ ಹೆಚ್ಚು ಆಕಾಂಕ್ಷಿಗಳು!

ಹಾಲಿ ಕೈ ಶಾಸಕರಿರುವ ಖಾನಾಪುರ, ಬೆಳಗಾವಿ ಗ್ರಾಮೀಣ, ಬೈಲಹೊಂಗಲದಲ್ಲಿ ಒಂದೊಂದೇ ಅರ್ಜಿ

Team Udayavani, Nov 17, 2022, 4:57 PM IST

18

ಬೆಳಗಾವಿ: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ವಲಯದಲ್ಲಿ ಹೊಸ ಶಕ್ತಿ ಮತ್ತು ಹುರುಪು ಕಾಣಿಸಿಕೊಂಡಿದೆ. ವಾತಾವರಣ ನಮ್ಮ ಪರವಾಗಿದೆ ಎಂಬ ವಿಶ್ವಾಸದಿಂದ ಟಿಕೆಟ್‌ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಮುಗಿ ಬಿದ್ದಿದ್ದಾರೆ. ಒಂದೊಂದು ಕ್ಷೇತ್ರಕ್ಕೆ ಕನಿಷ್ಠ ಐದಕ್ಕಿಂತ ಹೆಚ್ಚು ಆಕಾಂಕ್ಷಿಗಳು ಟಿಕೆಟ್‌ ಬಯಸಿ ಅರ್ಜಿ ಸಲ್ಲಿಸಿದ್ದು ಯಾರಿಗೆ ಟಿಕೆಟ್‌ ನೀಡಬೇಕೆಂಬ ಧರ್ಮ ಸಂಕಟ ಪಕ್ಷದ ವರಿಷ್ಠರಿಗೆ ಎದುರಾಗಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರ ಅರಭಾವಿ, ಬೆಳಗಾವಿ ಗ್ರಾಮೀಣ, ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಬೈಲಹೊಂಗಲ, ಗೋಕಾಕ, ರಾಮದುರ್ಗ ಮತ್ತು ಸವದತ್ತಿ ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಕಿತ್ತೂರು-ಖಾನಾಪುರ ವಿಧಾನಸಭಾ ಕ್ಷೇತ್ರಗಳು ಕೆನರಾ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುತ್ತವೆ.

ಹಾಲಿ ಶಾಸಕರ ಕ್ಷೇತ್ರಗಳಾದ ಖಾನಾಪುರ, ಬೆಳಗಾವಿ ಗ್ರಾಮೀಣ, ಬೈಲಹೊಂಗಲ ಕ್ಷೇತ್ರಗಳಲ್ಲಿ ಒಂದಕ್ಕಿಂತ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿಲ್ಲ. ಹೀಗಾಗಿ ಇಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಯಾವುದೇ ತಲೆ ಬಿಸಿ ಇಲ್ಲ.

ಖಾನಾಪುರ ಶಾಸಕಿ ಅಂಜಲಿ ನಿಂಬಾಳಕರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಲಕ್ಷ್ಮಿ ಹೆಬ್ಟಾಳಕರ, ಬೈಲಹೊಂಗಲದ ಮಹಾಂತೇಶ ಕೌಜಲಗಿ ಬಿಟ್ಟರೆ ಬೇರೆಯವರು ಅರ್ಜಿ ಸಲ್ಲಿಸುವ ಗೋಜಿಗೆ ಹೋಗಿಲ್ಲ. ಅರ್ಜಿ ಸಲ್ಲಿಸಿದರೂ ಟಿಕೆಟ್‌ ಸಿಗಲ್ಲ ಎಂಬುದು ಖಾತ್ರಿಯಾಗಿದೆ. ಈ ಮೂರೂ ಕ್ಷೇತ್ರದ ಶಾಸಕರು ಮರು ಆಯ್ಕೆಯ ವಿಶ್ವಾಸದೊಂದಿಗೆ ಈಗಾಗಲೇ ಸದ್ದಿಲ್ಲದೆ ಚುನಾವಣೆ ತಯಾರಿ ಆರಂಭಿಸಿದ್ದಾರೆ.

ಆದರೆ ಅರಭಾವಿ, ಬೆಳಗಾವಿ ಉತ್ತರ,ದಕ್ಷಿಣ, ಕಿತ್ತೂರು ಮತ್ತು ಸವದತ್ತಿ ಕ್ಷೇತ್ರಗಳಲ್ಲಿ ಯಾರಿಗೆ ಟಿಕೆಟ್‌ ನೀಡಬೇಕು ಎಂಬ ಸಂದಿಗ್ಧ ಸ್ಥಿತಿ ನಾಯಕರಲ್ಲಿ ಕಾಣುತ್ತಿದೆ. ರಾಮದುರ್ಗ ಕ್ಷೇತ್ರದಲ್ಲಿ ಮಾಜಿ ಶಾಸಕ ಅಶೋಕ ಪಟ್ಟಣ ಅವರಿಗೆ ಟಿಕೆಟ್‌ ಬಹುತೇಕ ಅಂತಿಮವಾಗಿದೆ. ಅದೇ ರೀತಿ ಗೋಕಾಕದಲ್ಲಿ ಅಶೋಕ ಪೂಜಾರಿಗೆ ಟಿಕೆಟ್‌ ಸಿಗುವದು ಹೆಚ್ಚುಕಮ್ಮಿ ಖಚಿತವಾಗಿದೆ. ಕಿತ್ತೂರು ಕ್ಷೇತ್ರದಲ್ಲಿ ಮಾಜಿ ಶಾಸಕ ಡಿ.ಬಿ.ಇನಾಂದಾರ ಮತ್ತು ಬಾಬಾಸಾಹೇಬ ಪಾಟೀಲ ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಬಾಬಾಸಾಹೇಬ ಅವರ ಹೆಸರು ಮುಂಚೂಣಿಯಲ್ಲಿದೆ.

ಅರಭಾವಿಗೆ ಅಚ್ಚರಿಯ ಹೆಸರು: ಈಗಿನ ಮಾಹಿತಿಯ ಪ್ರಕಾರ ಈ ಬಾರಿ ಅರಭಾವಿ ಕ್ಷೇತ್ರಕ್ಕೆ ಹೊಸ ಹೆಸರು ಕೇಳಿ ಬರುತ್ತಿದೆ. ಕಳೆದ ಬಾರಿ ಅರವಿಂದ ದಳವಾಯಿ ಸ್ಪರ್ಧೆ ಮಾಡಿದ್ದರು. ಈ ಬಾರಿಯೂ ಸಹ ದಳವಾಯಿ ಅಲ್ಲದೆ ಜಿಪಂ ಮಾಜಿ ಸದಸ್ಯ ರಮೇಶ ಉಟಗಿ ಟಿಕೆಟ್‌ ಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಇದೆಲ್ಲಕ್ಕಿಂತ ಮುಖ್ಯವಾಗಿ ಜೆಡಿಎಸ್‌ ಮುಖಂಡ ಹಾಗೂ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ಕಾಂಗ್ರೆಸ್‌ದಿಂದ ಸ್ಪರ್ಧೆ ಮಾಡುತ್ತಾರೆಂಬ ಸುದ್ದಿ ಜಿಲ್ಲೆಯಲ್ಲಿ ಭಾರೀ ಸದ್ದು ಮಾಡುತ್ತಿದೆ. ಮೂಲಗಳ ಪ್ರಕಾರ ಜೆಡಿಎಸ್‌ ಬಿಡುವ ತೀರ್ಮಾನ ಮಾಡಿರುವ ಭೀಮಪ್ಪ ಗಡಾದ ಕಾಂಗ್ರೆಸ್‌ ಟಿಕೆಟ್‌ ಬಯಸಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್‌ದಿಂದ ಸ್ಪರ್ಧೆ ಮಾಡಿದ್ದ ಭೀಮಪ್ಪ ಗಡಾದ ಬಿಜೆಪಿಯ ಬಾಲಚಂದ್ರ ಜಾರಕಿಹೊಳಿ ಅವರಿಗೆ ತೀವ್ರ ಪೈಪೋಟಿ ಒಡ್ಡಿ 40 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದಿದ್ದು ಇಲ್ಲಿ ಗಮನಿಸಬೇಕಾದ ಸಂಗತಿ.

ಇನ್ನು ಬೆಳಗಾವಿ ದಕ್ಷಿಣ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ ಎಂಬ ಕುತೂಹಲ ಎಲ್ಲರನ್ನು ಕಾಡುತ್ತಿದೆ. ಕ್ಷೇತ್ರದಿಂದ ಈ ಬಾರಿ ಜೈನ, ಮರಾಠಾ ಅಥವಾ ಲಿಂಗಾಯತ ಸಮಾಜದ ವ್ಯಕ್ತಿಗೆ ಟಿಕೆಟ್‌ ಕೊಡಬೇಕೆಂಬ ಲೆಕ್ಕಾಚಾರದಲ್ಲಿ ಪಕ್ಷದ ನಾಯಕರಿದ್ದಾರೆ. ಅದರಂತೆ ಈಗಾಗಲೇ ಜಿಪಂ ಮಾಜಿ ಸದಸ್ಯ ರಮೇಶ ಗೋರಲ್‌, ಚಂದ್ರಹಾಸ ಅಣ್ವೇಕರ ಅರ್ಜಿ ಸಲ್ಲಿಸಿದ್ದಾರೆ. ಮಾಜಿ ಶಾಸಕ ರಮೇಶ ಕುಡಚಿ ಸಹ ಈ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಯಕೆ ಹೊಂದಿದ್ದಾರೆ.

ಬೆಳಗಾವಿ ದಕ್ಷಿಣದಂತೆ ಸವದತ್ತಿ ಕ್ಷೇತ್ರ ಸಹ ಕುತೂಹಲಕ್ಕೆ ಕಾರಣವಾಗಿದೆ. ಹಾಲಿ ಶಾಸಕರಾಗಿದ್ದ ಆನಂದ ಮಾಮನಿ ನಿಧನದ ನಂತರ ಈ ಕ್ಷೇತ್ರದಲ್ಲಿ ಬಿಜೆಪಿ ಒಂದು ರೀತಿಯಲ್ಲಿ ಕಳೆಗುಂದಿದೆ. ಶಕ್ತಿ ಕಳೆದುಕೊಂಡಿದೆ. ಈ ಅವಕಾಶವನ್ನು ಉಪಯೋಗಿಸಿಕೊಂಡು ಒಳ್ಳೆಯ ಅಭ್ಯರ್ಥಿಗೆ ಟಿಕೆಟ್‌ ನೀಡಬೇಕೆಂಬ ಚಿಂತನೆಯಲ್ಲಿ ರಾಜ್ಯ ನಾಯಕರಿದ್ದಾರೆ. ಟಿಕೆಟ್‌ಬಯಸಿ ವಿಶ್ವಾಸ ವೈದ್ಯ, ಪಂಚನಗೌಡ ದ್ಯಾಮನಗೌಡರ, ಸೌರಬ್‌ ಛೋಪ್ರಾ ಹಾಗೂ ಉಮೇಶ ಬಾಳಿ ಅರ್ಜಿ ಸಲ್ಲಿಸಿದ್ದಾರೆ. ಈ ನಾಲ್ವರ =ಹೊರತಾಗಿ ಹೊರಗಿನ ನಾಯಕರು ಇಲ್ಲಿಂದ ಸ್ಪರ್ಧೆ ಮಾಡುತ್ತಾರೆಂಬ ಮಾತುಗಳು ಸಹ ದಟ್ಟವಾಗಿ ಕೇಳಿ ಬರುತ್ತಿವೆ. ಸವದತ್ತಿ, ಅರಭಾವಿ, ರಾಮದುರ್ಗ, ಗೋಕಾಕ, ಬೆಳಗಾವಿ ಉತ್ತರ ಹಾಗೂ ದಕ್ಷಿಣ ಕ್ಷೇತ್ರಗಳ ಮೇಲೆ ವಿಶೇಷ ಗಮನ ಹರಿಸಿರುವ ಕಾಂಗ್ರೆಸ್‌ ನಾಯಕರು ಅದಕ್ಕೆ ಬೇಕಾದ ಕಾರ್ಯತಂತ್ರಗಳನ್ನು ಈಗಿನಿಂದಲೇ ಸಿದ್ಧಪಡಿಸುತ್ತಿದ್ದಾರೆ. ಅಭ್ಯರ್ಥಿಗಳ ಹೆಸರು ಅಂತಿಮವಾಗುತ್ತಿದ್ದಂತೆ ಚುನಾವಣೆಯ ತಾಲೀಮಿಗೆ ಮತ್ತಷ್ಟು ರಂಗು ಬರಲಿದೆ.

ಬೆಳಗಾವಿ ಉತ್ತರಕ್ಕೆ ಪೈಪೋಟಿ

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಸಾಕಷ್ಟು ಪೈಪೋಟಿ ಕಂಡುಬಂದಿದೆ. ಈಗಾಗಲೇ 10ಕ್ಕೂ ಹೆಚ್ಚು ಆಕಾಂಕ್ಷಿಗಳು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಮಾಜಿ ಶಾಸಕರಾದ ಫಿರೋಜ ಸೇಠ ಪ್ರಮುಖರು. ಇದಲ್ಲದೆ ಮಾಜಿ ಸಚಿವ ಹಾಗೂ ಹಿರಿಯ ಮುಖಂಡ ಎ.ಬಿ. ಪಾಟೀಲ ಸಹ ಉತ್ತರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಫಿರೋಜ ಸೇಠ ಅಲ್ಲದೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ವಿನಯ ನಾವಲಗಟ್ಟಿ, ನಗರ ಘಟಕದ ಅಧ್ಯಕ್ಷ ರಾಜು ಸೇಠ, ಹಿರಿಯ ಮುಖಂಡ ಹಸನ್‌ ಭಾವಿಕಟ್ಟಿ, ಅಜೀಮ ಪಟವೇಗಾರ, ಸಿದ್ದಿಕ್‌ ಅಂಕಲಗಿ ಅರ್ಜಿ ಸಲ್ಲಿಸಿದ್ದಾರೆ.

ಇದರಲ್ಲಿ ಫಿರೋಜ ಸೇಠ ಇಲ್ಲವೇ ರಾಜು ಸೇಠ ಅವರಿಗೆ ಟಿಕೆಟ್‌ ಖಚಿತ ಎಂಬ ಮಾತುಗಳು ಕೇಳಿ ಬರುತ್ತಿವೆ. ಗೋಕಾಕದಲ್ಲಿ ಅಶೋಕ ಪೂಜಾರಿ ಬಿಟ್ಟರೆ ಬೇರೆಯವರ ಹೆಸರು ಪ್ರಸ್ತಾಪವಾಗಿಲ್ಲ. ರಾಮದುರ್ಗ ಕ್ಷೇತ್ರದಿಂದ ಮಾಜಿ ಶಾಸಕ ಅಶೋಕ ಪಟ್ಟಣ ಹೊರತುಪಡಿಸಿ ರಾಜೇಂದ್ರ ಪಾಟೀಲ ಸೇರಿದಂತೆ ಇನ್ನೂ ನಾಲ್ವರು ಅರ್ಜಿ ಸಲ್ಲಿಸಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಂಟು ಮತ್ತು ಕೆನರಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ಏಳು ಕ್ಷೇತ್ರಗಳಲ್ಲಿ ಜಯ ಗಳಿಸುವ ಗುರಿ ಹೊಂದಿದ್ದೇವೆ. ವಾತಾವರಣ ಸಹ ನಮ್ಮ ಪರವಾಗಿದೆ. ಮುಖ್ಯವಾಗಿ ಈ ಬಾರಿ ಬಿಜೆಪಿಯಿಂದ ಮೂರರಿಂದ ನಾಲ್ಕು ಕ್ಷೇತ್ರಗಳು ನಮ್ಮ ವಶವಾಗಲಿವೆ.  –ವಿನಯ ನಾವಲಗಟ್ಟಿ, ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ.

„ಕೇಶವ ಆದಿ

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.