ಮುಂದಿನ ಮುಖ್ಯಮಂತ್ರಿ ನಾನೇ: ಎಚ್.ಡಿ.ಕೆ
Team Udayavani, Nov 17, 2022, 11:00 PM IST
ಮಳವಳ್ಳಿ: ಮಾನವೀಯ ಮೌಲ್ಯಗಳು ಕುಸಿಯುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಬಸವ ತತ್ವಗಳನ್ನು ಪಾಲನೆ ಮಾಡಲು ಮುಂದಾಗಬೇಕು. ಈಗ ನಿರ್ಮಾಣವಾಗಲಿರುವ ಬಸವ ಭವನಕ್ಕೆ ಮುಂದಿನ ಮುಖ್ಯಮಂತ್ರಿಯಾಗಿ ಅನುದಾನ ನೀಡುವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ತಾಲೂಕಿನ ಶೆಟ್ಟಹಳ್ಳಿ ಗ್ರಾಪಂ ವ್ಯಾಪ್ತಿಯ ಉಪ್ಪನಹಳ್ಳಿ(ಕನ್ನಹಳ್ಳಿ)-ಮೂಗನಕೊಪ್ಪಲು ಬಳಿ ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಬಸವ ಭವನ ನಿರ್ಮಾಣದ ಭೂಮಿಪೂಜೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಸವ ಭವನಕ್ಕೆ ಶಾಸಕ ಡಾ.ಕೆ.ಅನ್ನದಾನಿ 45 ಲಕ್ಷ ರೂ. ಅನುದಾನ ನೀಡಿದ್ದಾರೆ. ಆದರೆ 3.5 ಕೋಟಿ ರೂ. ವೆಚ್ಚದ ಕಾಮಗಾರಿ ಆರಂಭವಾಗುವ ವೇಳೆಗೆ ಚುನಾವಣೆ ಬರುತ್ತದೆ. ಮುಂದಿನ ಸರ್ಕಾರದಲ್ಲಿ ನಾನೇ ಮುಖ್ಯಮಂತ್ರಿಯಾಗುವೆ. ಆಗ 1 ಕೋಟಿ ರೂ. ಅನುದಾನ ನೀಡುವೆ. ರಾಜ್ಯಸಭಾ ಸದಸ್ಯರಾದ ಎಚ್.ಡಿ.ದೇವೇಗೌಡರ ಅನುದಾನದಲ್ಲಿ 25 ಲಕ್ಷ ರೂ. ಕೊಡಿಸಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಾಡಿರುವ ಮತದಾರರ ಪಟ್ಟಿ ದುರ್ಬಳಕೆ ಆರೋಪದ ಬಗ್ಗೆ ಸರ್ಕಾರ ಸಾರ್ವಜನಿಕವಾಗಿ ಸ್ಪಷ್ಟನೆ ನೀಡಬೇಕು. ಬಿಜೆಪಿ ಸರ್ಕಾರ ಅಧಿ ಕಾರ ದುರುಪಯೋಗ ಮಾಡಿಕೊಂಡಿದ್ದರೆ ಕಾಂಗ್ರೆಸ್‌ನವರು ಮುಖ್ಯಮಂತ್ರಿ ರಾಜೀನಾಮೆ ಕೇಳುವುದರಲ್ಲಿ ತಪ್ಪಿಲ್ಲ. ಸರ್ಕಾರ ತಪ್ಪು ಮಾಡಿಲ್ಲ ಅಂದರೆ ವಾಸ್ತವಾಂಶವನ್ನು ಜನರಿಗೆ ತಿಳಿಸಲಿ. ಅದನ್ನು ಬಿಟ್ಟು ಟಾರ್ಗೆಟ್ ಮಾಡುತ್ತಾರೆ ಎನ್ನುವುದು ಸರಿಯಲ್ಲ. -ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.