ಶಬರಿಮಲೆ ಅಯ್ಯಪ್ಪ ದೇಗುಲ: ಕೈಪಿಡಿ ವಾಪಸ್ ಪಡೆದ ಕೇರಳ ಸರ್ಕಾರ
Team Udayavani, Nov 18, 2022, 6:40 AM IST
ಪತನಂತಿಟ್ಟ: ವಾರ್ಷಿಕ ಉತ್ಸವಕ್ಕಾಗಿ ಶಬರಿಮಲೆ ಅಯ್ಯಪ್ಪ ದೇಗುಲ ಗುರುವಾರ ಭಕ್ತರಿಗೆ ತೆರೆಯುತ್ತಿದ್ದಂತೆಯೇ ಕೇರಳ ಸರ್ಕಾರ ಎಡವಟ್ಟು ಮಾಡಿಕೊಂಡಿದೆ.
2018ರಲ್ಲಿ ಸುಪ್ರೀಂಕೋರ್ಟ್ ಎಲ್ಲಾ ವಯೋಮಿತಿಯ ಮಹಿಳೆಯರಿಗೆ ದೇಗುಲಕ್ಕೆ ಪ್ರವೇಶಾವಕಾಶ ಮಾಡಿಕೊಡಬೇಕು ಎಂಬ ತೀರ್ಪಿನ ಅಂಶ ಇರುವ ಕೈಪಿಡಿಯನ್ನು ಮುದ್ರಿಸಿ ಪೊಲೀಸ್ ಇಲಾಖೆಗೆ ನೀಡಲಾಗಿತ್ತು. ಈ ಬಗ್ಗೆ ಬಿಜೆಪಿ ಕಟುವಾಗಿ ಆಕ್ಷೇಪ ವ್ಯಕ್ತಪಡಿಸಿದ ಬಳಿಕ ಅದನ್ನು ವಾಪಸ್ ಪಡೆಯಲಾಗಿದೆ. ದುರುದ್ದೇಶದಿಂದಲೇ ಎಲ್‌ಡಿಎಫ್ ಸರ್ಕಾರ ಇಂಥ ಕ್ರಮ ಕೈಗೊಂಡಿದೆ ಎಂದು ಅದು ಹೇಳಿತ್ತು. ಆದರೆ, ಈ ಆರೋಪ ತಿರಸ್ಕರಿಸಿದ್ದ ಕೇರಳ ದೇವಸ್ವಂ ಸಚಿವ ಕೆ.ರಾಧಾಕೃಷ್ಣನ್ ಬಹಳ ಹಿಂದೆಯೇ ಈ ಕೈಪಿಡಿ ಮುದ್ರಿಸಲಾಗಿತ್ತು ಎಂದಿದ್ದರು.
ಈ ನಡುವೆ ದೇಶದ ವಿವಿಧ ಭಾಗಗಳಿಂದ ಧಾರಾಕಾರ ಮಳೆಯನ್ನೂ ಲೆಕ್ಕಿಸದೆ ಅಯ್ಯಪ್ಪನ ಸನ್ನಿಧಾನಕ್ಕೆ ಬಂದು ಸಾವಿರಾರು ಮಂದಿ ದರ್ಶನ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.