![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 19, 2022, 9:13 AM IST
ಮಂಜೇಶ್ವರ : ಮದ್ರಸಾದಿಂದ ಹೊರ ಬರುತ್ತಿದ್ದ 9ರ ಹರೆಯದ ಬಾಲಕಿಯನ್ನು ಮೇಲಕ್ಕೆತ್ತಿ ನೆಲಕ್ಕೆಸೆದ ಆರೋಪಿ ಕುಂಜತ್ತೂರು ಉದ್ಯಾವರದ ಅಬೂಬಕ್ಕರ್ ಸಿದ್ದೀಕ್ (30) ವಿರುದ್ಧ ಮಂಜೇಶ್ವರ ಪೊಲೀಸರು ಕೊಲೆಯತ್ನ ಹಾಗು ಪೋಕ್ಸೊ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ.
ಗಾಯಗೊಂಡ ಬಾಲಕಿಯ ಹೇಳಿಕೆ ಯನ್ನು ಕಾಸರಗೋಡು ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ(2) ದಾಖಲಿಸಿಕೊಳ್ಳಲಿದೆ. ನ. 17ರಂದು ಬೆಳಗ್ಗೆ ಮದ್ರಸಾದಿಂದ ಹೊರಬರುತ್ತಿದ್ದ ಬಾಲಕಿಯನ್ನು ಆರೋಪಿ ವಿನಾಕಾರಣ ಮೇಲಕ್ಕೆತ್ತಿ ನೆಲಕ್ಕೆ ಎಸೆದಿದ್ದ. ಇದರ ಸಿಸಿ ಟಿವಿ ದೃಶ್ಯಗಳು ಪೊಲೀಸರಿಗೆ ಲಭಿಸಿದೆ.
ನೆಲಕ್ಕೆ ಬಿದ್ದ ಬಾಲಕಿ ಅಲ್ಲಿಂದ ಎದ್ದೇಳಲು ಪ್ರಯತ್ನಿಸಿದರೂ, ಆಗದೆ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಆದಾದ ಬಳಿಕ ಆಕೆ ಎದ್ದು ನೇರವಾಗಿ ಮನೆಗೆ ಹೋಗಿ ನಡೆದ ವಿಷಯವನ್ನು ಮನೆಯವರಲ್ಲಿ ತಿಳಿಸಿದ್ದಳು. ಈ ಬಗ್ಗೆ ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿತ್ತು. ಅದರಂತೆ ಪೊಲೀಸರು ಕೇಸು ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಬಾಲಕಿಯನ್ನು ಮೇಲಕ್ಕೆತ್ತಿ ನೆಲಕ್ಕೆ ಎಸೆದಿರುವುದಾದರೂ ಯಾತಕ್ಕಾಗಿ ಎನ್ನುವುದು ಈ ತನಕ ಸ್ಪಷ್ಟಗೊಂಡಿಲ್ಲ. ಅದನ್ನು ಭೇದಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡಿರುವ ಬಾಲಕಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಠಿನ ಕ್ರಮಕ್ಕೆ ಡಿ.ಐ.ಜಿ. ನಿರ್ದೇಶನ
ಜಿಲ್ಲೆಯಾದ್ಯಂತ ನಡೆಯುತ್ತಿರುವ ಅಪರಾಧ ಕೃತ್ಯಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅನಿಲ್ ಕಾಂತ್ ಅವರು ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ಇದನ್ನೂ ಓದಿ : ಭಾರತ – ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದ: ಬ್ರಿಟನ್ ಪ್ರಧಾನಿ ರಿಷಿ ಸುನಕ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.