ಲವ್ ಜಿಹಾದ್ ಆರೋಪ; ಯುವತಿಯ ಸಹೋದರನಿಂದ ಹರಿಹರಪುರದಲ್ಲಿ ದೂರು ದಾಖಲು
Team Udayavani, Nov 19, 2022, 1:32 PM IST
ಚಿಕ್ಕಮಗಳೂರು: ಅನ್ಯಕೋಮಿನ ಯುವಕನೊಬ್ಬ ಸೋಶಿಯಲ್ ಮೀಡಿಯಾದಲ್ಲಿ ತನ್ನ ಸಹೋದರಿಯ ಫೋಟೋ ಹಾಕಿದ್ದಾನೆಂದು ಆರೋಪಿಸಿ ಮನೋಜ್ ಎಂಬಾತ ಕೊಪ್ಪ ತಾಲ್ಲೂಕಿನ ಹರಿಹರಪುರ ಠಾಣೆಯಲ್ಲಿ ದೂರು ದಾಖಲಿದ್ದಾರೆ.
ಯುವತಿಯ ಅಣ್ಣ ಲವ್ ಜಿಹಾದ್ ಪಿತೂರಿ ಅರೋಪ ಹೊರಿಸಿ ದೂರು ದಾಖಲು ಮಾಡಿದ್ದು, ಕೊಪ್ಪ ಮೂಲದ ಮೊಹಮ್ಮದ್ ರೋಫ್ ವಿರುದ್ಧ ಠಾಣೆಗೆ ದೂರು ನೀಡಲಾಗಿದೆ.
ಕೊಪ್ಪ ತಾಲ್ಲೂಕಿನ ಹರಿಹರಪುರ ಪೊಲೀಸ್ ಠಾಣೆ ವ್ಯಾಪ್ತಿಯ ಯುವತಿಯೊಂದಿಗೆ ಯುವಕ ರೌಫ್ ಇರುವ ಪೊಟೊ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾನೆಂದು ಆರೋಪಿಸಿ ದೂರು ನೀಡಲಾಗಿದೆ.
ಹರಿಹರಪುರ ಠಾಣೆಗೆ ದೂರು ನೀಡಿದ ಯುವತಿಯ ಸಹೋದರ ಮನೋಜ್, ದೂರು ನೀಡಿದರೂ ಸೆನ್ ಇನ್ಸೆಪೆಕ್ಟರ್ ಜಾಕೀರ್ ಹುಸೇನ್ ಆರೋಪಿಯನ್ನು ಬಂಧಿಸಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದನ್ನೂ ಓದಿ:ಶಬರಿಮಲೆಗೆ ಹೊರಟಿದ್ದ ಯಾತ್ರಾರ್ಥಿಗಳ ಬಸ್ ಪಲ್ಟಿ: 18 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ
ಸಾಮಾಜಿಕ ಜಾಲತಾಣದ ಹಿನ್ನೆಲೆಯಲ್ಲಿ ಸೆನ್ ಠಾಣೆಗೆ ದೂರು ನೀಡುವಂತೆ ಸೂಚಿಸಿದ್ದ ಹರಿಹರಪುರ ಪೊಲೀಸರು ಅದರಂತೆ ದೂರು ನೀಡಿದರೂ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಲಾಗುತ್ತಿದೆ.
ಎಫ್ ಐಆರ್ ನಲ್ಲಿ ಮೊಹಮ್ಮದ್ ರೋಫ್ ಮೇಲೆ ಕೇಸ್ ದಾಖಲಾಗಿದ್ದು, ಯುವತಿ ಸಹೋದರ ಮನೋಜ್ ಅವರು ಎಸ್ಪಿಗೂ ಲಿಖಿತ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.