ಶೈಕ್ಷಣಿಕ ಸುಧಾರಣೆಗಾಗಿ ರಾಷ್ಟ್ರೀಯ ಶಿಕ್ಷಣ ನೀತಿ: ಸಚಿವ ಡಾ.ಕೆ.ಸುಧಾಕರ್

Team Udayavani, Nov 19, 2022, 1:42 PM IST

sudhakar

ಬೆಂಗಳೂರು: ಶಿಕ್ಷಣ ಎಂದರೆ ಕೇವಲ ಉದ್ಯೋಗ ಪಡೆಯುವ ಹಾದಿ ಎಂಬಂತೆ ಬ್ರಿಟಿಷರು ಬಿಂಬಿಸಿದ್ದರು. ಆದರೆ ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಇಂತಹ ಚಿಂತನೆಯನ್ನು ಬದಲಿಸಿ ಶಿಕ್ಷಣ ಸುಧಾರಣೆ ಮಾಡುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸಿಎಂಆರ್‌ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇತ್ತೀಚೆಗೆ ದೇಶದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಲಾಗಿದೆ. ಈ ಕಾಲದಲ್ಲಿ ಮುಂದಿನ ಪೀಳಿಗೆಗಾಗಿ ಉತ್ತಮ ಶಿಕ್ಷಣ ನೀಡುವುದು ಮಹತ್ತರ ಹೊಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿಗಳು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಕ್ಷಣ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ಸುಧಾರಣೆ ಮಾಡುತ್ತಿದ್ದಾರೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಹೊಸ ಸುಧಾರಣೆ ತರಲಾಗುತ್ತಿದೆ ಎಂದರು.

ಶಿಕ್ಷಣವನ್ನು ವಿಶಾಲ ದೃಷ್ಟಿಯಿಂದ ನೋಡುವ ಮತ್ತು 21 ನೇ ಶತಮಾನದ ಆಧುನಿಕ ಚಿಂತನೆಗಳೊಂದಿಗೆ ಬೆಸೆಯುವ ಉದ್ದೇಶವನ್ನು ರಾಷ್ಟ್ರೀಯ ಶಿಕ್ಷಣ ನೀತಿಯು ಹೊಂದಿದೆ. ಭಾರತದಲ್ಲಿ ಎಂದಿಗೂ ಪ್ರತಿಭಾವಂತರ ಕೊರತೆ ಉಂಟಾಗಲಿಲ್ಲ. ಆದರೆ ಶಿಕ್ಷಣವನ್ನು ಕೇವಲ ಉದ್ಯೋಗ ಪಡೆಯುವ ದಾರಿ ಎಂಬಂತೆ ಬಿಂಬಿಸಲಾಗಿದೆ. ಬ್ರಿಟಿಷರ ಆಡಳಿತದಲ್ಲಿ ಅವರ ಅಗತ್ಯಕ್ಕೆ ಅನುಗುಣವಾಗಿ ಜನರಿಗೆ ಶಿಕ್ಷಣ ನೀಡಲು ಆರಂಭಿಸಲಾಯಿತು. ಸ್ವಾತಂತ್ರ್ಯದ ನಂತರವೂ ಈ ಶಿಕ್ಷಣ ವ್ಯವಸ್ಥೆ ಹೆಚ್ಚಿನ ಬದಲಾವಣೆ ಕಾಣಲಿಲ್ಲ. ಭಾರತೀಯ ಶಿಕ್ಷಣ ವ್ಯವಸ್ಥೆಯ ಮಹತ್ವವನ್ನು ಅರಿಯುವ ಕೆಲಸವನ್ನೂ ಯಾರೂ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಭಾರತೀಯ ಚಿಂತನೆ, ಪರಂಪರೆಯ ಬಗ್ಗೆ ಶಿಕ್ಷಣದಲ್ಲಿ ಚರ್ಚಿಸುವ ಮಹತ್ವವನ್ನು ಬ್ರಿಟಿಷರು ಮನಗಾಣಲಿಲ್ಲ. ಅವರು ಹೇರಿದ ಶಿಕ್ಷಣದಿಂದಾಗಿ ನಮ್ಮ ಪರಂಪರೆಯನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಜ್ಞಾನ ಹಾಗೂ ಶಿಕ್ಷಣ ಬಹುರೂಪವನ್ನು ಹೊಂದಿದೆ. ವ್ಯಕ್ತಿತ್ವವನ್ನು ರೂಪಿಸುವುದೇ ಶಿಕ್ಷಣ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದರು ಎಂದರು.

ದೇಶದ ಯುವಜನರು ಕೌಶಲ್ಯ ತರಬೇತಿ ಪಡೆದು, ಈಗಿನ ಕಾಲಕ್ಕೆ ಅನುಗುಣವಾಗಿ ತಯಾರಾಗುವಂತೆ ಮಾಡುವುದು ಹೊಸ ಶಿಕ್ಷಣ ನೀತಿಯ ಗುರಿಯಾಗಿದೆ. ಇದಕ್ಕಾಗಿ ಶಿಕ್ಷಣದ ಮೂಲಸೌಕರ್ಯವನ್ನು ಹೆಚ್ಚಿಸಲಾಗುತ್ತಿದೆ. 2014 ರಿಂದ ಹೊಸ ಮೆಡಿಕಲ್‌ ಕಾಲೇಜುಗಳ ನಿರ್ಮಾಣದ ಪ್ರಮಾಣ 55% ಹೆಚ್ಚಾಗಿದೆ ಎಂದರು.

ಇದನ್ನೂ ಓದಿ:ಶಬರಿಮಲೆಗೆ ಹೊರಟಿದ್ದ ಯಾತ್ರಾರ್ಥಿಗಳ ಬಸ್ ಪಲ್ಟಿ: 18 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ

ನಾಯಿಗಳಿಗೆ ಆಶ್ರಯ ನೀಡುವ ಸಿಎಂಆರ್‌ ಸಂಸ್ಥೆಯ ಈ ಕಾರ್ಯ ಯಶಸ್ವಿಯಾಗಿದೆ. ಇದಕ್ಕಾಗಿ ಎಲ್ಲರಿಗೂ ಶುಭ ಕೋರುತ್ತೇನೆ. ಈಗಿನ ಕಾಲದಲ್ಲಿ ಪರಿಸರ ಮಾಲಿನ್ಯದಿಂದಾಗಿ ಅನೇಕ ಜೀವಿಗಳಿಗೆ ತೊಂದರೆಯಾಗಿದೆ. ಕೆಲ ಜೀವಿಗಳು ಅಳಿವಿನಂಚಿಗೆ ಬಂದಿವೆ. ಭೂಮಿಯು ಮಾನವನ ಅವಶ್ಯಕತೆಗೆ ಇರುವುದೇ ಹೊರತು ದುರಾಸೆಗಲ್ಲ. ಬೇರೆ ಜೀವಿಗಳು ಕೂಡ ಈ ಭೂಮಿಯಲ್ಲಿದೆ ಹಾಗೂ ಮಾನವನಂತೆಯೇ ಅವುಗಳಿಗೂ ಬದುಕುವ ಹಕ್ಕು ಇದೆ ಎಂಬುದನ್ನು ಮರೆತೇಬಿಟ್ಟಿದ್ದೇವೆ. ಈ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಸಿಎಂಆರ್‌ ಸಂಸ್ಥೆಯನ್ನು ಶ್ಲಾಘಿಸುತ್ತೇನೆ ಎಂದರು.

ಸಿಎಂಆರ್‌ ಶಿಕ್ಷಣ ಸಂಸ್ಥೆಯು ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೂ ಸೇವೆ ನೀಡುತ್ತಿರುವುದು ಶ್ಲಾಘನೀಯ. ಸಂಸ್ಥೆಯ ಲೋಗೋ ಕೂಡ ಉನ್ನತ ಮೌಲ್ಯಗಳನ್ನು ಬಿಂಬಿಸುತ್ತದೆ. ಇದೇ ರೀತಿ ಎಲ್ಲಾ ವಿಶ್ವವಿದ್ಯಾಲಯಗಳು ಕಾರ್ಯ ನಿರ್ವಹಿಸಲಿ ಎಂದರು.

ಸೋಲಾರ್‌ ವಿದ್ಯುತ್‌ ಬಳಕೆಗೆ ಸರ್ಕಾರ ಒತ್ತು ನೀಡಿದೆ. ಹೊಸ ಸಂಶೋಧನೆಗಳ ಮೂಲಕ ಸೋಲಾರ್‌ ಕ್ಷೇತ್ರದಲ್ಲಿ ಬದಲಾವಣೆ ತರಬೇಕಿದ್ದು, ಇದಕ್ಕಾಗಿ ಎಲ್ಲರೂ ಸಹಯೋಗ ನೀಡಬೇಕು ಎಂದರು.

ಮೆಡಿಕಲ್‌ ಕಾಲೇಜು ಆರಂಭಿಸಿ: ಮುಂದಿನ ದಿನಗಳಲ್ಲಿ ತಾವು ಕೂಡ ಹೊಸ ಮೆಡಿಕಲ್‌ ಕಾಲೇಜು ಆರಂಭಿಸಬೇಕು ಎಂದು ಸಚಿವ ಡಾ.ಕೆ.ಸುಧಾಕರ್, ಸಿಎಂಆರ್‌ ವಿಶ್ವವಿದ್ಯಾಲಯದ ಮುಖ್ಯಸ್ಥರಾದ ಕೆ.ಸಿ.ರಾಮಮೂರ್ತಿ ಅವರಿಗೆ ಸಲಹೆ ನೀಡಿದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.