ರೈತರ ಮೇಲೆ ಕ್ರಿಮಿನಲ್‌ ಪ್ರಕರಣ ಬೇಡ: ಅಶೋಕ್‌

ಗ್ರಾಮವಾಸ್ತವ್ಯದಲ್ಲಿ ಅಧಿಕಾರಿಗಳಿಗೆ ಸಚಿವರ ಸೂಚನೆ

Team Udayavani, Nov 20, 2022, 7:00 AM IST

ರೈತರ ಮೇಲೆ ಕ್ರಿಮಿನಲ್‌ ಪ್ರಕರಣ ಬೇಡ: ಅಶೋಕ್‌

ಮೈಸೂರು: ಸರಕಾರಿ ಜಮೀನು, ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಉಳುಮೆ ಮಾಡಿಕೊಂಡು ಬರುತ್ತಿರುವ ರೈತರ ಮೇಲೆ ಯಾವುದೇ ಕಾರಣಕ್ಕೂ ಕ್ರಿಮಿನಲ್‌ ಪ್ರಕರಣ ದಾಖಲಿಸಬಾರದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಸೂಚಿಸಿದ್ದಾರೆ.

ಎಚ್‌.ಡಿ. ಕೋಟೆ ಭೀಮ ನಕೊಲ್ಲಿಯಲ್ಲಿ ನಡೆದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಹಿಂದೆ ಸರಕಾರಿ ಜಮೀನು ಅಥವಾ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುವ ರೈತರನ್ನು ಭೂ ಕಬಳಿಕೆದಾರರು ಎಂಬಂತೆ ನೋಡಲಾಗುತ್ತಿತ್ತು. ಅವರ ಮೇಲೆ ಪ್ರಕರಣ ದಾಖಲಿಸುತ್ತಿದ್ದುದರಿಂದ ಜಾಮೀನಿಗಾಗಿ ಕೋರ್ಟ್‌ಗೆ ಅಲೆಯಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ಅಂಥ ಸ್ಥಿತಿ ಇಲ್ಲ ಎಂದರು.

ಕೃಷಿ ಭೂಮಿಯಲ್ಲಿ ಕೋಳಿ ಫಾರ್ಮ್ ನಿರ್ಮಾಣಕ್ಕಾಗಿ ಭೂ ಪರಿವರ್ತನೆ ಮಾಡಲು ಸಾಕಷ್ಟು ಸಮಯ ವ್ಯರ್ಥವಾಗುತ್ತಿತ್ತು. ಈಗ ಕೋಳಿ ಸಾಕಣಿಕೆಯನ್ನೂ ಕೃಷಿ ಎಂದೇ ಪರಿಗಣಿಸಲಾಗಿದೆ. ಹಾಗೆಯೇ ಜಮೀನು ಖಾತೆ ಮಾಡಲು 30 ದಿನ ಇದ್ದ ಅವಧಿಯನ್ನು ಇಳಿಸಿ ಏಳು ದಿನಗಳಿಗೆ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಂದಿ ಸರಕಾರದಿಂದ ಪಡೆದ ಭೂಮಿಯಲ್ಲಿ ಮನೆ ಕಟ್ಟಲು ಜಿಲ್ಲಾಧಿಕಾರಿಗಳ ಹಂತದಲ್ಲೇ ಅನುಮತಿ ಪಡೆಯುವಂತೆ ಮಾಡಲಾಗಿದೆ. ಆರು ತಿಂಗಳು ಇದ್ದ ಭೂ ಪರಿವರ್ತನೆ ಅವಧಿಯನ್ನು ಏಳು ದಿನಗಳಿಗೆ ಇಳಿಸಿದ್ದು, ರೈತರ ಕೆಲಸ ಶೀಘ್ರದಲ್ಲೇ ಆಗುವಂತೆ ಮಾಡಿದ್ದೇವೆ ಎಂದು ಅಶೋಕ್‌ ಹೇಳಿದರು.

ಕಾಡಂಚಿನ ಭಾಗದಲ್ಲಿ 52 ವರ್ಷದಿಂದ ಉಳುಮೆ ಮಾಡಿದವರಿಗೆ ಹಕ್ಕು ಪತ್ರ ನೀಡಿಲ್ಲ. ಬೆಂಗಳೂರಿನಲ್ಲಿ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಮೈಸೂರು ಜಿಲ್ಲೆಯ 3,060 ರೈತರಿಗೆ 2.55 ಕೋಟಿ ರೂ. ಬೆಳೆ ಹಾನಿ ಪರಿಹಾರ ನೀಡ ಲಾಗಿದೆ. 5,640 ಮನೆ ಹಾನಿ ಪ್ರಕರಣಗಳಲ್ಲಿ 45 ಕೋಟಿ ರೂ. ಹಾಗೂ ಕೋವಿಡ್‌ನಿಂದ ಮೃತಪಟ್ಟ 3,664 ಕುಟುಂಬದವರಿಗೆ 27.35 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಈಗ ದೂರವಾಣಿ ಮೂಲಕ “ಹಲೋ ಕಂದಾಯ ಸಚಿವರೇ’ ಎಂದು ಕರೆ ಮಾಡಿ 72 ತಾಸುಗಳ ಒಳಗಾಗಿ ವೃದ್ಧಾಪ್ಯ ಪಿಂಚಣಿ ಪಡೆಯಬಹುದಾಗಿದೆ ಎಂದರು.

“ಅಮಾಸೆ’ಗೆ
ಹುಣ್ಣಿಮೆ ಬೆಳಕು
ಭೀಮನಕೊಲ್ಲಿ ಮಹದೇಶ್ವರ ದೇಗುಲದ ಆವರಣದಲ್ಲಿ ನಡೆದ ಸರ ಕಾರದ ವಿವಿಧ ಸೌಲಭ್ಯ ವಿತರಣ ಕಾರ್ಯಕ್ರಮದಲ್ಲಿ ಒಂದು ಕಾಲು ಕಳೆದುಕೊಂಡಿದ್ದ ವಿಶೇಷ ಚೇತನ ಅಮಾಸೆ ಎಂಬವರಿಗೆ ಸಚಿವರು ಸ್ವಹಸ್ತದಿಂದಲೇ ಕೃತಕ ಕಾಲು ಜೋಡಿಸಿ ಶುಭ ಹಾರೈಸಿದರು. ಬಳಿಕ ಸಚಿವರು ಅಮಾಸೆಯನ್ನು ವೇದಿಕೆಯಲ್ಲಿ ನಡೆದಾಡಿಸಿದರು. ಈ ವೇಳೆ ಮುಗ್ಗರಿಸಿದ ಅಮಾಸೆ ಕೆಳಗೆ ಕುಸಿದರು. ಬಳಿಕ ಸಚಿವರು ಮತ್ತೆ ಕೃತಕ ಕಾಲನ್ನು ಜೋಡಿಸಿ, ಅವರು ಆತ್ಮವಿಶ್ವಾಸದಿಂದ ನಡೆಯುವಂತೆ ಮಾಡಿದರು. ಅನಂತರ ಅವರಿಂದಲೇ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಗಮನ ಸೆಳೆದರು.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.