ಮಂಗಳೂರು ಸ್ಪೋಟ ಪ್ರಕರಣ: ಗುಪ್ತಚರ ಮತ್ತು ಗೃಹ ಇಲಾಖೆಯ ವೈಫಲ್ಯ ಎಂದ ಸಿದ್ದರಾಮಯ್ಯ
Team Udayavani, Nov 20, 2022, 12:42 PM IST
ಬೆಂಗಳೂರು: ಮಂಗಳೂರಿನ ನಾಗುರಿ ಬಳಿ ಶನಿವಾರ ನಡೆದ ಆಟೋ ರಿಕ್ಷಾ ಸ್ಪೋಟಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ. ಇದು ಗುಪ್ತಚರ ಇಲಾಖೆ ಮತ್ತು ಗೃಹ ಇಲಾಖೆಯ ವೈಫಲ್ಯ ಎಂದಿದ್ದಾರೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಬಾಂಬು ಸ್ಪೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ಅವರು ಹೇಳಿದ್ದಾರೆ.
ಮಂಗಳೂರು ಬಾಂಬು ಸ್ಪೋಟ ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ. ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ಜನತೆ ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ರಾಜ್ಯದ ಜನರಲ್ಲಿ ಕೇಳಿ ಕೊಳ್ಳುತ್ತಿದ್ದೇನೆ ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.