ಧಾರ್ಮಿಕ ಮೆರವಣಿಗೆಗೆ ಬಂದಿದ್ದವರ ಮೇಲೆ ಹರಿದ ಟ್ರಕ್: ಮಕ್ಕಳು ಸೇರಿ 12 ಮಂದಿ ಸಾವು, ಪ್ರಧಾನಿ ಸಂತಾಪ
Team Udayavani, Nov 21, 2022, 11:09 AM IST
ಬಿಹಾರ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದೇಸರಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಲ್ತಾನ್‌ಪುರ ಗ್ರಾಮದ ಬಳಿ ಮದುವೆಗೂ ಮುನ್ನ ನಡೆಯುವ ಧಾರ್ಮಿಕ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ನೆರೆದಿದ್ದ ಜನರ ಗುಂಪಿನ ಮೇಲೆ ವೇಗವಾಗಿ ಬಂದ ಟ್ರಕ್ ಢಿಕ್ಕಿ ಹೊಡೆದು ಮಹಿಳೆಯರು ಮತ್ತು ಆರು ಮಕ್ಕಳು ಸೇರಿದಂತೆ ಕನಿಷ್ಠ 12 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಿಹಾರದ ರಾಜಧಾನಿ ಪಾಟ್ನಾದಿಂದ ಸುಮಾರು 30 ಕಿಮೀ ದೂರದಲ್ಲಿರುವ ವೈಶಾಲಿ ಜಿಲ್ಲೆಯ ದೇಸರಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಲ್ತಾನ್‌ಪುರ ಗ್ರಾಮದಲ್ಲಿ ಮದುವೆ ಕಾರ್ಯ ನಡೆಯುತ್ತಿದ್ದು ಇದರ ಭಾಗವಾಗಿ ಧಾರ್ಮಿಕ ಮೆರವಣಿಗೆ ನಡೆಸಲು ಸಿದ್ದರೆ ನಡೆಸಲಾಗುತ್ತಿತ್ತು ಅದರಂತೆ ರಾತ್ರಿ ಒಂಬತ್ತು ಗಂಟೆಯ ಸುಮಾರಿಗೆ ಊರಿನ ಜನ ರಸ್ತೆ ಬದಿ ಸೇರಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿದ್ದ ಜನರಿಗೆ ಢಿಕ್ಕಿ ಹೊಡೆದಿದೆ, ಪರಿಣಾಮ ಮಹಿಳೆಯರು ಮತ್ತು 6 ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.
ಗಾಯಾಳುಗಳನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಅಪಘಾತದ ಕುರಿತು ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ 2 ಲಕ್ಷ ಹಾಗೂ ಗಾಯಗೊಂಡವರಿಗೆ 50,000 ಪರಿಹಾರ ಘೋಷಿಸಿದ್ದಾರೆ.
The accident in Vaishali, Bihar is saddening. Condolences to the bereaved families. May the injured recover soon. An ex-gratia of Rs. 2 lakh from PMNRF would be given to the next of kin of each deceased. The injured would be given Rs. 50,000: PM @narendramodi
— PMO India (@PMOIndia) November 20, 2022
वैशाली, बिहार में हुई सड़क दुर्घटना में बच्चों समेत कई लोगों के हताहत होने की ख़बर अत्यंत पीड़ादायक है। मैं इस हादसे में अपने प्रियजनों को खोने वाले परिवारों के प्रति गहन शोक-संवेदनाएं व्यक्त करती हूं तथा घायल हुए लोगों के शीघ्र स्वस्थ होने की कामना करती हूं।
— President of India (@rashtrapatibhvn) November 20, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.