ಚಿತ್ರೀಕರಣ ಮುಗಿಸಿದ ವಿನಯ್ ರಾಜ್‌ಕುಮಾರ್ ನಟನೆಯ ‘ಪೆಪೆ’
Team Udayavani, Nov 21, 2022, 4:38 PM IST
ವಿನಯ್ ರಾಜ್‌ಕುಮಾರ್ “ಪೆಪೆ’ ಎಂಬ ಸಿನಿಮಾದಲ್ಲಿ ನಟಿಸುತ್ತಿರುವ ಸುದ್ದಿ ನಿಮಗೆ ಗೊತ್ತೇ ಇದೆ. ಈಗ ಈ ಚಿತ್ರ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದೆ.
ಶ್ರೀಲೇಶ್ ಎಸ್ ನಾಯರ್ ನಿರ್ದೇಶನಲ್ಲಿ ಮೂಡಿ ಬರ್ತಿರುವ “ಪೆಪೆ’ ಚಿತ್ರದ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಇಷ್ಟು ದಿನ ಚಿತ್ರೀಕರಣದಲ್ಲಿ ಬಿಝಿಯಾಗಿದ್ದ ಚಿತ್ರತಂಡ ಸಕಲೇಶಪುರದಲ್ಲಿ ನಡೆದ ಕ್ಲೈಮಾಕ್ಸ್ ಶೂಟಿಂಗ್ ಬಳಿಕ ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆದಿದೆ.
ಚಿತ್ರದಲ್ಲಿ ಮೆದಿನಿ ಕೆಳಮನಿ, ಯಶ್ ಶೆಟ್ಟಿ, ಕಾಜಲ್ ಕುಂದರ್, ಅರುಣಾ ಬಾಲರಾಜ್, ನವೀನ್ ಡಿ ಪಡಿಲದ, ಬಲರಾಜ ವಾಡಿ ಒಳಗೊಂಡ ತಾರಾಬಳಗವಿದೆ. ಅಭಿಷೇಕ್ ಛಾಯಾಗ್ರಹಣ, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಕೊಡಗು, ಸಕಲೇಶಪುರದಲ್ಲಿ ಸಿನಿಮಾ ಸೆರೆ ಹಿಡಿಯಲಾಗಿದೆ.
ಚಿತ್ರವನ್ನು ಉದಯ್ ಮತ್ತು ಶ್ರೀರಾಮ್ ಬಂಡವಾಳ ಹೂಡಿ ನಿರ್ಮಾಣ ಮಾಡಿದ್ದಾರೆ. 2018ರಲ್ಲಿ ತೆರೆಕಂಡ ಅನಂತು ವರ್ಸಸ್ ನುಸ್ರುತ್ ಸಿನಿಮಾ ಬಳಿಕ ವಿನಯ್ ರಾಜ್ ಕುಮಾರ್ ಯಾವುದೇ ಸಿನಿಮಾ ತೆರೆಕಂಡಿಲ್ಲ. “ಪೆಪೆ’ ಜೊತೆಗೆ “ಗ್ರಾಮಾಯಣ’, “ಅದೊಂದಿತ್ತು ಕಾಲ’ ಸಿನಿಮಾಗಳಲ್ಲೂ ವಿನಯ್ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.