71,000 ನೇಮಕಾತಿ ಪತ್ರಗಳನ್ನು ವಿತರಿಸಲಿರುವ ಪ್ರಧಾನಿ ಮೋದಿ
ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳವು ಒಂದು ಹೆಜ್ಜೆ...
Team Udayavani, Nov 21, 2022, 7:54 PM IST
ನವದೆಹಲಿ : ರೋಜ್‌ಗಾರ್ ಮೇಳದ ಅಡಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.
ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಚೇರಿ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳವು ಒಂದು ಹೆಜ್ಜೆಯಾಗಿದೆ. ರೋಜ್‌ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರವಾಗಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ನೀಡುತ್ತದೆ ಎಂದು ಸರಕಾರದ ಪ್ರಕಟಣೆಯಲ್ಲಿ ಹೇಳಲಾಗಿದೆ.
ಅಕ್ಟೋಬರ್‌ನಲ್ಲಿ ರೋಜ್‌ಗಾರ್ ಮೇಳದ ಅಡಿಯಲ್ಲಿ ಹೊಸದಾಗಿ ಸೇರ್ಪಡೆಗೊಂಡ 75,000 ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಗಿತ್ತು.
“ಹೊಸದಾಗಿ ನೇಮಕಗೊಂಡವರಿಗೆ ನೇಮಕಾತಿ ಪತ್ರಗಳ ಭೌತಿಕ ಪ್ರತಿಗಳನ್ನು ಗುಜರಾತ್ ಮತ್ತು ಹಿಮಾಚಲ ಪ್ರದೇಶ ಹೊರತುಪಡಿಸಿ ದೇಶಾದ್ಯಂತ 45 ಸ್ಥಳಗಳಲ್ಲಿ ಹಸ್ತಾಂತರಿಸಲಾಗುವುದು ಎಂದು ಹೇಳಿಕೆ ತಿಳಿಸಿದೆ.
ಈ ಹಿಂದೆ ಭರ್ತಿ ಮಾಡಿದ ಹುದ್ದೆಗಳ ಜೊತೆಗೆ ಶಿಕ್ಷಕರು, ಉಪನ್ಯಾಸಕರು, ದಾದಿಯರು, ನರ್ಸಿಂಗ್ ಅಧಿಕಾರಿಗಳು, ವೈದ್ಯರು, ಔಷಧಿಕಾರರು, ರೇಡಿಯೋಗ್ರಾಫರ್‌ಗಳು ಮತ್ತು ಇತರ ತಾಂತ್ರಿಕ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುತ್ತಿದೆ. ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಗೃಹ ಸಚಿವಾಲಯವು ಗಮನಾರ್ಹ ಸಂಖ್ಯೆಯ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಪ್ರಧಾನಮಂತ್ರಿಯವರು ಕರ್ಮಯೋಗಿ ಪ್ರಾರಂಭ್ ಮಾಡ್ಯೂಲ್ ಅನ್ನು ಸಹ ಪ್ರಾರಂಭಿಸಲಿದ್ದಾರೆ ಎಂದು ಪಿಎಂಒ ಹೇಳಿಕೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.