ಗ್ರಾಮಗಳು ಕೈಬಿಟ್ಟು ಹೋಗುವ ಮುನ್ನ ಕಣ್ತೆರೆಯಿರಿ
Team Udayavani, Nov 22, 2022, 6:00 AM IST
ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ ಎಂದು ಮಹಾರಾಷ್ಟ್ರ ಇನ್ನೂ ಭಾವಿಸಿದಂತಿಲ್ಲ. ಗಡಿ ವಿವಾದದ ಮೂಲಕವೇ ಅಲ್ಲಿ ಜನಪ್ರಿಯಗೊಂಡ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾದ ಮೇಲೆ ಈ ವಿಚಾರವನ್ನು ಮತ್ತಷ್ಟು ಹಸುರಾಗಿರುವಂತೆ ನೋಡಿಕೊಳ್ಳುತ್ತಿರುವುದು ಸ್ಫುಟ. ಈ ಸಂಬಂಧ ಮುಖ್ಯಮಂತ್ರಿ ನೇತೃತ್ವದಲ್ಲಿ ರಚನೆಯಾದ ಸಮಿತಿ ಸೋಮವಾರ ಸಭೆ ನಡೆಸಿದೆ. ಬೆಳಗಾವಿ ಜಿಲ್ಲೆಯಲ್ಲಿರುವ ಮರಾಠಿ ಭಾಷಿಕರೇ ಹೆಚ್ಚಾಗಿರುವ 865 ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡುವ ಸಂಬಂಧ ಸದ್ಯದಲ್ಲೇ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಈ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ವಿಪಕ್ಷದ ನಾಯಕರು ಈ ಸಭೆಯಲ್ಲಿ ಭಾಗಿಯಾಗಿದ್ದರು.
ಸುಪ್ರೀಂ ಕೋರ್ಟ್‌ನಲ್ಲಿ ಒಂದು ಪ್ರಕರಣ ನಡೆಯುತ್ತಿರುವಾಗಲೇ ಪ್ರಧಾನಿಗಳ ಮಧ್ಯಸ್ಥಿಕೆಗೆ ಮಹಾರಾಷ್ಟ್ರ ಹೊರಟಿರುವುದು ಆತಂಕದ ಬೆಳವಣಿಗೆಯೇ. ಈ ನಡುವೆ ಬೆಳಗಾವಿಯ ಮರಾಠಿ ಭಾಷಿಕರು ಹೆಚ್ಚಿರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಮಹಾರಾಷ್ಟ್ರ ಸರಕಾರ ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ. ಇದಕ್ಕೆ ಮುನ್ನವೇ ಈ ಬೆಳವಣಿಗೆಗಳು ನಡೆದಿರುವುದು ಆತಂಕವನ್ನು ಹೆಚ್ಚಿಸಿದೆ.
ವಿಚಿತ್ರವೆಂದರೆ ಇಷ್ಟೆಲ್ಲ ಘಟನೆಗಳು ಆಗುತ್ತಿದ್ದರೂ ಕರ್ನಾಟಕದಲ್ಲಿ ಮಾತ್ರ ಏನೂ ಆಗಿಯೇ ಇಲ್ಲ ಎನ್ನುವ ರೀತಿಯಲ್ಲಿ ವಾತಾವರಣ ಗೋಚರಿಸುತ್ತಿದೆ. ಮಹಾರಾಷ್ಟ್ರದ ಸುದ್ದಿ ಹೊರಬಿದ್ದ ಬಳಿಕ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ, ರಾಜ್ಯ ಸರಕಾರಕ್ಕೆ ಎಚ್ಚೆತ್ತುಕೊಳ್ಳುವಂತೆ ಆಗ್ರಹಿಸಿದ್ದಾರೆ. ನೆಲಜಲ ವಿಚಾರದಲ್ಲಿ ಈ ಹಿಂದೆ ಎಲ್ಲ ರಾಜಕೀಯ ಪಕ್ಷಗಳು ಒಗ್ಗಟ್ಟನ್ನು ಪ್ರದರ್ಶಿಸಿರುವುದು ಸಹಜವಾದರೂ ಆಡಳಿತ ಪಕ್ಷ ಬಿಜೆಪಿ ತನ್ನ ಸ್ಪಷ್ಟ ನಿಲುವನ್ನು ಹೇಳಲೇ ಬೇಕು. ಈಗ ಮಹಾರಾಷ್ಟ್ರದಲ್ಲೂ ಬಿಜೆಪಿಯೇ ಆಡಳಿತದಲ್ಲಿದೆ. ಹೀಗಿ ರುವುದರಿಂದ ಎರಡು ರಾಜ್ಯಗಳ ಪ್ರಮುಖರು ಕುಳಿತು ಈ ವಿವಾ ದವನ್ನು ಬಗೆಹರಿಸುವ ಬದಲು ಪ್ರಧಾನಿ ಮಧ್ಯಸ್ಥಿಕೆಗೆ ಮುಂದಾ ಗಿರುವುದು ಮಹಾರಾಷ್ಟ್ರದ ಅತಿರೇಕದ ವರ್ತನೆ ಎಂದರೂ ತಪ್ಪಲ್ಲ.
ಇದರ ನಡುವೆಯೇ ರಾಜ್ಯ ಸರಕಾರದ ಕಡೆಯಿಂದ ಆಗಬೇಕಾಗಿರುವ ಕೆಲಸಗಳು ಸಾಕಷ್ಟಿವೆ. ಇತ್ತೀಚಿನ ದಿನಗಳಲ್ಲಿ ಬೆಳಗಾವಿ ಗಡಿ ವಿವಾದ ಸಂಬಂಧ ಕರ್ನಾಟಕದಲ್ಲಿ ಯಾವುದೇ ಸಭೆಗಳೇ ನಡೆದಿಲ್ಲ. ಕರ್ನಾಟಕ ಗಡಿ ರಕ್ಷಣ ಆಯೋಗದ ಅಧ್ಯಕ್ಷರಾಗಿದ್ದ ನ್ಯಾ| ಕೆ.ಎಲ್.ಮಂಜುನಾಥ್ ಅವರು ಆರು ತಿಂಗಳುಗಳ ಹಿಂದೆಯೇ ನಿಧನ ಹೊಂದಿದ್ದು, ಇವರ ಜಾಗಕ್ಕೆ ಬೇರೊಬ್ಬರನ್ನು ನೇಮಕ ಮಾಡಿಯೂ ಇಲ್ಲ. ಅಲ್ಲದೆ ಯಾವೊಬ್ಬ ಸಚಿವರಾಗಲಿ ಅಥವಾ ಉನ್ನತಾಧಿಕಾರದ ಸಮಿತಿಯಾಗಲಿ ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡೂ ಇಲ್ಲ. ಹೀಗಾಗಿ ಗಡಿ ಹೋರಾಟದ ವಿಚಾರದಲ್ಲಿ ಕರ್ನಾಟಕ ಹಿಂದೆ ಬಿದ್ದಿದೆ ಎಂದು ತಜ್ಞರು ಹೇಳುತ್ತಿದ್ದಾರೆ.
ಹಾಗೆಯೇ ಗಡಿ ವಿವಾದದ ಮಹಾರಾಷ್ಟ್ರದ ಅರ್ಜಿ ಸ್ವೀಕಾರ ವಾಗುವುದಿಲ್ಲ ಎಂಬುದು ಕರ್ನಾಟಕದ ವಿಶ್ವಾಸ. ಆದರೂ ಸುಪ್ರೀಂ ಮನಸ್ಸು ಮಾಡಿದರೆ ಅರ್ಜಿ ಸ್ವೀಕಾರ ಮಾಡಬಹುದು. ನಮ್ಮ ಪ್ರದೇಶಗಳು ನಮ್ಮಿಂದ ಕೈತಪ್ಪಿ ಹೋಗುವ ಮುನ್ನ ರಾಜ್ಯ ಸರಕಾರ ಎಚ್ಚೆತ್ತುಕೊಳ್ಳಬೇಕು. ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.