18 ತುಂಬಿದ ಪ್ರತಿಯೊಬ್ಬರನ್ನೂ ಪಟ್ಟಿಗೆ ಸೇರಿಸಿ


Team Udayavani, Nov 22, 2022, 3:07 PM IST

18 ತುಂಬಿದ ಪ್ರತಿಯೊಬ್ಬರನ್ನೂ ಪಟ್ಟಿಗೆ ಸೇರಿಸಿ

ಚಾಮರಾಜನಗರ: ಮುಂಬರುವ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಗಾಗಿ ಶೇ. 100ರಷ್ಟು ಮತದಾರರನ್ನು ನೋಂದಣಿ ಮಾಡುವ ಸಂಬಂಧ ಜಿಲ್ಲೆಯಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳು ವಂತೆ ಜಿಪಂ ಸಿಇಒ ಕೆ.ಎಂ. ಗಾಯಿತ್ರಿ ಸೂಚನೆ ನೀಡಿದರು.

ನಗರದ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ, ರಾಷ್ಟ್ರೀಯ ಮತದಾರರ ಪಟ್ಟಿ ನೋಂದಣಿ ಮತ್ತು ಪರಿ ಷ್ಕರಣೆ-2023 ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಜಿಲ್ಲಾ ಸ್ವೀಪ್‌ ಸಮಿತಿ ಸಭೆಯಲ್ಲಿ ಮಾತನಾಡಿದರು.

ನೋಂದಣಿ ಬಗ್ಗೆ ಪರಿಶೀಲಿಸಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮುಂಬರುವ ಸಾರ್ವ ತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಗಾಗಿ ಶೇ.100ರಷ್ಟು ಮತದಾರರನ್ನು ನೋಂದಣಿ ಮಾಡುವ ಸಂಬಂಧ ಈಗಾಗಲೇ ಆಯೋಗವು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಪಂಗಳ ಪಂಚಾಯಿತಿ ಅಭಿವೃದ್ಧಿ ಅಧಿ ಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿ ಗಳ ಜೊತೆ ಸಮನ್ವಯತೆ ಸಾಧಿಸಿ 18 ವರ್ಷ ಮೇಲ್ಪಟ್ಟ ವರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿ ರುವ ಬಗ್ಗೆ ಪರಿಶೀಲಿಸಬೇಕು ಎಂದರು.

ಸ್ವೀಪ್‌ ಕಾರ್ಯಕ್ರಮ ಆಯೋಜಿಸಿ: ನೋಂದಣಿ ಯಾಗದೆ ಇರುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡಿಸಲು ಹಾಗೂ ತಿದ್ದುಪಡಿ, ಬದಲಾವಣೆಗಳಿದ್ದಲ್ಲಿ ಪರಿಷ್ಕರಣೆ ಮಾಡಿಕೊಳ್ಳುವ ಸಂಬಂಧ ಗ್ರಾಪಂ ಹಾಗೂ ತಾಪಂ ಮಟ್ಟಗಳಲ್ಲಿ ವಿವಿಧ ಸ್ವೀಪ್‌ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ಮತದಾನದ ಬಗ್ಗೆ ಅರಿವು ಮೂಡಿಸಿ: ಗ್ರಾಪಂಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮೀಣ ಪ್ರದೇಶದಲ್ಲಿ ಇರುವ ವಿದ್ಯಾರ್ಥಿ ನಿಲಯಗಳು, ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ, 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಪರಿಶೀಲಿಸಬೇಕು. ನೋಂದಣಿಯಾಗಿಲ್ಲದಿದ್ದಲ್ಲಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗ ಳೊಂದಿಗೆ ಸಮನ್ವಯದಿಂದ ನೋಂದಣಿಗೆ ಕ್ರಮವಹಿಸಬೇಕು. ಮತದಾನದ ಬಗ್ಗೆ ಅರಿವು ಮೂಡಿ ಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಳಿಗೆ ನಿರ್ದೇ ಶನ ನೀಡುವಂತೆ ತಿಳಿಸಿದರು.

ಅಧಿಕಾರಿಗಳಿಗೆ ಸೂಚನೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು, ಅಂಗನವಾಡಿ ಕಾರ್ಯ ಕರ್ತೆಯರು ಮತ್ತು ಸಹಾಯಕಿಯರು, ವಿಕಲಚೇತ ನರು, ಸಾಂತ್ವನ ಮತ್ತು ಸ್ವಾಧಾರ ಕೇಂದ್ರ ಹಾಗೂ ವೃದ್ಧಾಶ್ರಮಗಳಲ್ಲಿರುವ 18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಗ್ರಾಪಂ ಮಟ್ಟದ ಎಂಬಿಕೆಗಳಿಂದ ಪರಿಶೀಲಿಸ ಬೇಕು. ಮತದಾನದಲ್ಲಿ ಸಕ್ರಿಯವಾಗಿ ಭಾಗವಹಿಸಲು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋ ಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮತದಾನದ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸಿ: ಲಿಂಗತ್ವ ಅಲ್ಪಸಂಖ್ಯಾತರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಂಬಂಧ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸ್ವೀಪ್‌ ಕಾರ್ಯಕ್ರಮವನ್ನು ಆಯೋಜಿಸಿ ಮತದಾರರ ಪಟ್ಟಿಯಲ್ಲಿ ನೋಂದಣಿ ಮತ್ತು ಪರಿಷ್ಕರಣೆ ಮಾಡುವ ಬಗ್ಗೆ ಹಾಗೂ ಮತ ದಾನದ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಸೋಲಿಗ, ಬುಡಕಟ್ಟು ಜನಾಂಗದ ವರು ವಾಸಿಸುವ ಗ್ರಾಪಂ ವ್ಯಾಪ್ತಿಯಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರನ್ನು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಲು ಹಾಗೂ ಮತದಾನದ ಬಗ್ಗೆ ಅರಿವು ಮೂಡಿಸಲು ಸಮು ದಾಯದ ಮುಖಂಡರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಸ್ವೀಪ್‌ ಕಾರ್ಯಕ್ರಮಗಳನ್ನು ಪರಿ ಣಾಮ ಕಾರಿಯಾಗಿ ಆಯೋಜಿಸುವಂತೆ ತಿಳಿಸಿದರು.

ಜಿಪಂ ಮುಖ್ಯ ಯೊರಿ ಪ್ರಭುಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ಗೀತಾಲಕ್ಷ್ಮೀ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಜಿಲ್ಲಾ ಮಟ್ಟದ ಅಧಿಕಾರಿಗಳು ಇತರರು ಇದ್ದರು.

ಟಾಪ್ ನ್ಯೂಸ್

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.