ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಅನ್ಯಾಯ ಆರೋಪ: ಸರ್ಕಾರಕ್ಕೆ ನೋಟಿಸ್‌


Team Udayavani, Nov 23, 2022, 6:20 AM IST

ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಅನ್ಯಾಯ ಆರೋಪ: ಸರ್ಕಾರಕ್ಕೆ ನೋಟಿಸ್‌

ಬೆಂಗಳೂರು: “ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆ’ಯ ಕಾಮಗಾರಿಗಳಿಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೇರಿ ರಾಜ್ಯದ ಉಳಿದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಟೆಂಡರ್‌ ಪ್ಯಾಕೇಜ್‌ ಮೊತ್ತಕ್ಕೆ ಮಿತಿ ಹೇರಿದ್ದರಿಂದ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಈ ವಿಚಾರವಾಗಿ ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎನ್‌. ಮಹದೇವಸ್ವಾಮಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ನಗರಾಭಿವೃದ್ಧಿ ಇಲಾಖೆ, ಆರ್ಥಿಕ ಇಲಾಖೆ ಮತ್ತು ಬಿಬಿಎಂಪಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಡಿ.13ಕ್ಕೆ ಮುಂದೂಡಿತು. ಅರ್ಜಿದಾರರ ಪರ ಹಿರಿಯ ವಕೀಲೆ ಜಯ್ನಾ ಕೊಠಾರಿ ವಾದ ಮಂಡಿಸಿದರು.

ಸರ್ಕಾರದ ಟೆಂಡರ್‌ಗಳಲ್ಲಿ 50 ಲಕ್ಷದವರೆಗಿನ ಕಾಮಗಾರಿಗಳಲ್ಲಿ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಶೇ.24ರಷ್ಟು ಮೀಸಲಾತಿ ನೀಡಿ 2017ರಲ್ಲಿ ಕರ್ನಾಟಕ ಪಾರದರ್ಶಕ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಆದರೆ, “ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಬಿಬಿಎಂಪಿಗೆ 6 ಸಾವಿರ ಕೋಟಿ ರೂ. ಅನುದಾನ ನೀಡಿ ಕಾಮಗಾರಿಗಳಿಗೆ ಟೆಂಡರ್‌ ಕರೆಯಲು ಪ್ಯಾಕೇಜ್‌ ಮೊತ್ತ 10 ಕೋಟಿ ರೂ. ನಿಗದಿಪಡಿಸಲಾಗಿದೆ. ಅದೇ ರೀತಿ ರಾಜ್ಯದ ಉಳಿದ ನಗರ ಸ್ಥಳೀಯ ಸಂಸ್ಥೆಗಳಿಗೆ 3,885 ಕೋಟಿ ಅನುದಾನ ನೀಡಿ ನಗರಸಭೆ ವ್ಯಾಪ್ತಿಯಲ್ಲಿ 1 ಕೋಟಿ, ಪುರಸಭೆ ವ್ಯಾಪ್ತಿಯಲ್ಲಿ 50 ಲಕ್ಷ ಹಾಗೂ ಪಟ್ಟಣ ಪಂಚಾಯಿತಿಗಳಿಗೆ 25 ಲಕ್ಷ ರೂ. ತಾಲೂಕು ಮಟ್ಟದ ಕಾಮಗಾರಿಗಳಿಗೆ 1 ಕೋಟಿ ರೂ.ಪ್ಯಾಕೇಜ್‌ ಮೊತ್ತ ನಿಗದಿಪಡಿಸಲಾಗಿದೆ. ಇದರಿಂದಾಗಿ ಎಸ್ಸಿ-ಎಸ್ಟಿ ಗುತ್ತಿಗೆದಾರರು ಕಾಮಗಾರಿಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಟಾಪ್ ನ್ಯೂಸ್

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.