ದಲಿತ ಡಿಸಿಎಂ ಹುದ್ದೆ; ಮಹಿಳೆಯರಿಗೂ ಡಿಸಿಎಂ ಸ್ಥಾನ: ಎಚ್.ಡಿ.ಕುಮಾರಸ್ವಾಮಿ
Team Udayavani, Nov 22, 2022, 10:45 PM IST
ಕೋಲಾರ: ಸಾಮಾಜಿಕ ನ್ಯಾಯ ನೀಡಲು ಈಗಾಗಲೇ ದಲಿತ ಸಮುದಾಯದಲ್ಲಿ ಉಪಮುಖ್ಯಮಂತ್ರಿ ಮಾಡುತ್ತೇನೆಂದು ಘೋಷಣೆ ಮಾಡಿದ್ದೇನೆ. ಮಹಿಳೆಯರ ಸಬಲೀಕರಣಕ್ಕಾಗಿ ಒಂದು ವೇಳೆ ಅವಶ್ಯಕತೆ ಬಿದ್ದಲ್ಲಿ ಯಾವುದೇ ಸಮುದಾಯದ ಮಹಿಳೆಯನ್ನು ಉಪಮುಖ್ಯಮಂತ್ರಿ ಮಾಡಲು ಜೆಡಿಎಸ್ ತಯಾರಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದರು.
ತಾಲೂಕಿನ ಕ್ಯಾಲನೂರಿನಲ್ಲಿ ಗ್ರಾಮ ವಾಸ್ತವ್ಯದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ದಲಿತ ಸಮುದಾಯದವರಿಗೆ ಡಿಸಿಎಂ ಸ್ಥಾನ ನೀಡುತ್ತೇನೆಂದು ಈಗಾಗಲೇ ಹೇಳಿದ್ದೇನೆ. ನಾನು ದಲಿತ ಸಮುದಾಯದ ಮತಗಳನ್ನು ಸೆಳೆಯಲು ಹೀಗೆ ಹೇಳಿಲ್ಲ. ಆ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಮೇಲೆ ಸಾಮಾಜಿಕ ನ್ಯಾಯ ಒದಗಿಸಲು ಹೇಳಿದ್ದೇನೆ. ಹಾಗೇ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದ ಬಳಿಕ ಮಹಿಳೆಯರ ಸಬಲೀಕರಣಕ್ಕಾಗಿ ಡಿಸಿಎಂ ಸ್ಥಾನ ಕೊಡಲು ಬದ್ಧನಾಗಿದ್ದೇನೆ. ಆದರೆ ನಮ್ಮ ಪಕ್ಷದಲ್ಲಿ ಹೆಬ್ಬೆಟ್ಟಿನ ಉಪಮುಖ್ಯಮಂತ್ರಿ ಇರುವುದಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡುವವರನ್ನು ಡಿಸಿಎಂ ಮಾಡುತ್ತೇವೆ ಎಂದರು.
ಸರ್ಕಾರದಿಂದ ಹಣ ಮೀಸಲಿಟ್ಟಿದ್ದರೂ ಆ ಹಣ ಜನರಿಗೆ ತಲುಪುತ್ತಿಲ್ಲ. ಹಾಗಾಗಿ ನನಗೆ ಪೂರ್ಣ ಪ್ರಮಾಣದಲ್ಲಿ ಐದು ವರ್ಷ ಅಧಿಕಾರ ನೀಡಿದರೆ ಪಂಚರತ್ನ ಯೋಜನೆ ಸಂಪೂರ್ಣವಾಗಿ ಜಾರಿಗೆ ತರುತ್ತೇನೆ. ಒಂದು ವೇಳೆ ಪಂಚರತ್ನ ಯೋಜನೆಗಳನ್ನು ಜಾರಿಗೆ ತರದಿದ್ದರೆ ಮುಂದೆ ಯಾವುದೇ ಚುನಾವಣೆಯಲ್ಲಿ ಮತ ಕೇಳಲು ಜನರ ಬಳಿ ಬರುವುದಿಲ್ಲ ಎಂದು ಕುಮಾರಸ್ವಾಮಿ ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.