5ಕ್ಕೆ “ಮಕ್ಕಳ ಚಿತ್ರ ಕಲೋತ್ಸವ’ ಬಹುಮಾನ ವಿತರಣೆ

ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ಗೌರವಾಧ್ಯಕ್ಷ-ಮೇಲ್ಮನೆ ಸದಸ್ಯ ಎಸ್‌.ವಿ. ಸಂಕನೂರ ಮಾಹಿತಿ

Team Udayavani, Nov 23, 2022, 3:36 PM IST

14

ಗದಗ: ಸ್ಥಳೀಯ ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿಯ ಧಾರವಾಡದ ಬಾಲವಿಕಾಸ ಅಕಾಡೆಮಿ ಮತ್ತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಬಾರಿಗೆ ನಡೆಸಿದ ರಾಜ್ಯಮಟ್ಟದ “ಮಕ್ಕಳ ಚಿತ್ರ ಕಲೋತ್ಸವ’ (ಚಿಣ್ಣರ ಚಿತ್ರ ಚಿತ್ತಾರ)ದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಸಮಾರಂಭ ಡಿ. 5ರಂದು ನಗರದಲ್ಲಿ ನಡೆಯಲಿದೆ ಎಂದು ಸಮಿತಿ ಗೌರವ ಅಧ್ಯಕ್ಷರೂ ಆದ ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಹೇಳಿದರು.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಎಪಿಎಂಸಿ ಆವರಣದಲ್ಲಿರುವ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಸಮಾರಂಭ ನಡೆಯಲಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಕಳೆದ ಅ.14ರಂದು ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಆಯಾ ಶಾಲಾ ಮಟ್ಟ, ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಈ ಚಿತ್ರ ಸ್ಪರ್ಧೆ ನಡೆಸಲಾಗಿದ್ದು, ಇದೀಗ ಅವುಗಳ ಮೌಲ್ಯಮಾಪನ ನಡೆಯುತ್ತಿದೆ ಎಂದರು.

ಎಲ್‌.ಕೆ.ಜಿ.ಯಿಂದ 2ನೇ ತರಗತಿ, ಮೂರರಿಂದ 5ನೇ ತರಗತಿ, 6ರಿಂದ 8ನೇ ತರಗತಿ ಮತ್ತು 9ರಿಂದ 12ನೇ ತರಗತಿ ಹೀಗೆ ಒಟ್ಟು ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆ ನಡೆಸಲಾಗಿದೆ. ಪ್ರತಿ ವಿಭಾಗದಲ್ಲೂ 75 ಬಹುಮಾನಗಳಂತೆ ಒಟ್ಟು 300 ಮಕ್ಕಳಿಗೆ ಪ್ರಶಸ್ತಿ ಸಿಗಲಿದೆ. ಪ್ರತಿ ಪ್ರಶಸ್ತಿಯು 3 ಸಾವಿರ ರೂ. ನಗದು, 3 ಸಾವಿರ ರೂ. ಮೌಲ್ಯದ ವಿಶಿಷ್ಟ ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಅಷ್ಟೇ ಅಲ್ಲ, ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿ ಮಗುವಿಗೂ ಭಾಗವಹಿಸಿದ ಪ್ರಮಾಣ ಪತ್ರ ಹಾಗೂ ಒಂದು ಸ್ಮರಣಿಕೆ ಸಿಗಲಿದೆ ಎಂದು ವಿವರಿಸಿದರು.

ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ಸಂಸ್ಥಾಪಕ ಅಧ್ಯಕ್ಷ ವಿಜಯ ಕಿರೇಸೂರ ಮಾತನಾಡಿ, ಸ್ಪರ್ಧೆಯಲ್ಲಿ ರಾಜ್ಯಾದ್ಯಂತ 41,436 ಜನ ಮಕ್ಕಳು ಭಾಗವಹಿಸಿದ್ದರು.

ಸ್ಪರ್ಧೆ ವಿಜೇತ 300 ಜನ ಮಕ್ಕಳಿಗೆ ಖ್ಯಾತ ಕಲಾವಿದರಾದ ಮೈಕೆಲ್‌ ಎಂಜಿಲೋ, ರವಿವರ್ಮ, ಎಸ್‌.ಕೆ. ಚಟ್ಟಿ, ಟಿ.ಪಿ. ಅಕ್ಕಿ ಸೇರಿದಂತೆ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕಲಾವಿದರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿರುವುದು ಇದರ ಮತ್ತೂಂದು ವಿಶೇಷ ಎಂದರು.

ಡಿ. 5ರಂದು ನಡೆಯುವ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್‌, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ, ಶಾಸಕ ಎಚ್‌.ಕೆ. ಪಾಟೀಲ ಸೇರಿ ಹಲವರು ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 10ರಿಂದ ಸಂಜೆ 6ರ ವರೆಗೂ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದರು.

ಮಕ್ಕಳ ಕಲಿಕೆ ಆರಂಭವಾಗುವುದೇ ಚಿತ್ರಗಳ ಮೂಲಕ. ಮಕ್ಕಳಲ್ಲಿ ಚಿತ್ರಕಲೆ ಪ್ರೋತ್ಸಾಹಿಸುವ ಉದ್ದೇಶದಿಂದ ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆಯ ಈ ಯತ್ನ ಇತರರಿಗೂ ಮಾದರಿ.  -ಎಸ್‌.ವಿ. ಸಂಕನೂರ, ವಿಪ ಸದಸ್ಯರು

“ಮಕ್ಕಳ ಚಿತ್ರ ಕಲೋತ್ಸವ’ ಸ್ಪರ್ಧೆಯಲ್ಲಿ ವಿಜೇತ 300 ಮಕ್ಕಳ ಕಲಾಕೃತಿಗಳನ್ನು ಮಳಿಗೆಗಳಲ್ಲಿ ಪ್ರದರ್ಶನ ಮಾಡಲಾಗುತ್ತದೆ. ಅಷ್ಟೇ ಅಲ್ಲ, ಅವರ ಪರಿಚಯ ಕೂಡ ಅದರಲ್ಲಿ ಒಳಗೊಂಡಿರುತ್ತದೆ.  –ವಿಜಯ ಕಿರೇಸೂರ, ಸಂಸ್ಥಾಪಕ ಅಧ್ಯಕ್ಷ, ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.