ಸ್ವೀಪ್ ಅಭಿಯಾನ-ಜಾಗೃತಿ ಜಾಥಾಗೆ ಚಾಲನೆ
Team Udayavani, Nov 23, 2022, 5:17 PM IST
ಕಾರವಾರ: ಅಮದಳ್ಳಿಯಲ್ಲಿ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ-2023 ಸ್ವೀಪ್ ಅಭಿಯಾನದಡಿ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಪಂ ಸಿಇಒ ಪ್ರಿಯಾಂಗಾ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.
ಮತದಾನ ಪವಿತ್ರವಾದುದು. ಮತದಾನದ ಹಕ್ಕು ಪ್ರಜೆಗಳ ಅತ್ಯಂತ ಜವಾಬ್ದಾರಿ ಕಾರ್ಯವಾಗಿದೆ. ಸಂವಿಧಾನ ಸಾರ್ವಜನಿಕರಿಕೆ ನೀಡಿದ ಪರಮೋತ್ಛ ಅಧಿಕಾರ ಎಂದರೆ ಮತದಾನ ಎಂದರು.
ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಕ್ಷಿಪ್ತ 2023ರ ಕರಡು ಮತದಾರರ ಪಟ್ಟಿ ಪ್ರಕಟಣೆ ಕೆಲಸ ಆರಂಭವಾಗಿದೆ. ಯುವ ಮತದಾರರ ಹೆಸರು ಸೇರ್ಪಡೆಗೆ ಡಿ. 4ರವರೆಗೆ ಅವಕಾಶವಿದೆ. ಪರಿಷ್ಕರಣೆಗೆ ಸಹ ಅವಕಾಶವಿದೆ. ಅರ್ಹ ಹೊಸ ಮತದಾರರು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರಿಸಿಕೊಳ್ಳಬಹುದು. ಜೊತೆಗೆ ಭಾವಚಿತ್ರ ಬದಲಾವಣೆ, ವಿಳಾಸ ಬದಲಾವಣೆ ಸೇರಿ ಎಲ್ಲ ರೀತಿಯ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಚುನಾವಣಾ ಆಯೋಗ, ಜಿಲ್ಲಾಡಳಿತ ನೀಡಿರುವ ಅವಕಾಶವನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಿಇಒ ಪ್ರಿಯಾಂಗಾ ಕರೆ ನೀಡಿದರು.
ಜಾಗೃತಿ ಜಾಥ ಮಾಡಬೇಕಾದ ಕೆಲಸಗಳನ್ನು ಅವರು ಇದೇ ಸಂದರ್ಭದಲ್ಲಿ ಸೂಚಿಸಿದರು. ಅಮದಳ್ಳಿಯ ಸಾರ್ವಜನಿಕರು ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.