![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 24, 2022, 1:00 PM IST
ಬೆಂಗಳೂರು: ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಗೈರಾಗಿ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಕಡಲೆಕಾಯಿ ಪರಿಷೆಗೆ ಬಂದಿದ್ದ ವೇಳೆ ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿ ನಿವಾಸಿ ಪ್ರತ್ವಿಕ್(21) ಬಂಧಿತ ರೌಡಿ.
ಆರೋಪಿ 2019ರ ನವೆಂಬರ್ 19ರಂದು ಬಸವನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳಾದ ಅಭಿಷೇಕ್ ಮತ್ತು ಪ್ರತ್ವಿಕ್ ಸೇರಿ ಅಭಿಷೇಕ್ ಎಂಬಾತನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿತ್ತು. ಬಳಿಕ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಕೂಡ ಸಲ್ಲಿಸಲಾಗಿತ್ತು.
ಬಳಿಕ ಜಾಮೀನು ಪಡೆದು ಹೊರ ಬಂದಿದ್ದ ಆರೋಪಿ ಪ್ರತ್ವಿಕ್, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯ ನಾಲ್ಕು ಬಾರಿ ಜಾಮೀನು ರಹಿತ ವಾರೆಂಟ್ ಹೊರಡಿಸಿದ್ದರೂ ವಿಚಾರಣೆಗೆ ಗೈರಾಗಿದ್ದ. ಹೀಗಾಗಿ ಆರೋಪಿಯ ಬಂಧನಕ್ಕೆ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು. ಆರೋಪಿ ಪ್ರತಿ ವರ್ಷ ಬಸವನಗುಡಿ ಕಡಲೆಕಾಯಿ ಪರಿಷೆಗೆ ತಪ್ಪದೇ ಬರುತ್ತಾನೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಮಾಹಿತಿ ಹಿನ್ನೆಲೆಯಲ್ಲಿ ಆರೋಪಿಗಾಗಿ ಕಾದು ಕುಳಿತ್ತಿದ್ದ ಪೊಲೀಸರ ತಂಡ ಮಂಗಳವಾರ ಈತನನ್ನು ಬಂಧಿಸಿದೆ ಎಂದು ಪೊಲೀಸರು ಹೇಳಿದರು.
You seem to have an Ad Blocker on.
To continue reading, please turn it off or whitelist Udayavani.