ಶಿಕ್ಷಣ ಕ್ರಾಂತಿ ಮಾಡಿದ ಸಿಸೋಡಿಯಾ ಮಾನಹಾನಿ ಮಾಡಲು ಸಂಚು: ಕೇಜ್ರಿವಾಲ್
ನಕಲಿ ಅಬಕಾರಿ ಹಗರಣ ಪ್ರಕರಣದಲ್ಲಿ ಸಿಸೋಡಿಯಾರನ್ನು ಬಂಧಿಸುವ ಪ್ರಯತ್ನಗಳು ನಡೆದಿವೆ
Team Udayavani, Nov 25, 2022, 8:05 PM IST
ನವದೆಹಲಿ : ಅಬಕಾರಿ ನೀತಿ ಹಗರಣದ ಪ್ರಕರಣ ನಕಲಿ ಅದರಲ್ಲಿ ತಮ್ಮ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲು ಪ್ರಯತ್ನಿಸಲಾಗಿದೆ ಆದರೆ ಸಿಬಿಐ ತನ್ನ ತನಿಖೆಯಲ್ಲಿ ಅವರ ವಿರುದ್ಧ ಏನೂ ಕಂಡುಬಂದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಕಿಡಿಕಾರಿದ್ದಾರೆ.
”ಸಿಬಿಐ ಆರೋಪಪಟ್ಟಿಯಲ್ಲಿ ಮನೀಶ್ ಹೆಸರು ಇಲ್ಲ. ಇಡೀ ಪ್ರಕರಣ ನಕಲಿ. ದಾಳಿಯಲ್ಲಿ ಏನೂ ಪತ್ತೆಯಾಗಿಲ್ಲ. ಒಟ್ಟು 800 ಅಧಿಕಾರಿಗಳ ನಾಲ್ಕು ತಿಂಗಳ ಕಾಲ ತನಿಖೆಯಲ್ಲಿ ಏನೂ ಸಿಗಲಿಲ್ಲ. ಶಿಕ್ಷಣದಲ್ಲಿ ಕ್ರಾಂತಿಯ ಮೂಲಕ ದೇಶದ ಕೋಟ್ಯಂತರ ಬಡ ಮಕ್ಕಳಿಗೆ ಉತ್ತಮ ಭವಿಷ್ಯದ ಭರವಸೆಯನ್ನು ಮನೀಶ್ ನೀಡಿದರು. ಅಂತಹ ವ್ಯಕ್ತಿಯನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವ ಮೂಲಕ ಮಾನಹಾನಿ ಮಾಡಲು ಸಂಚು ರೂಪಿಸಿದ್ದಕ್ಕೆ ನನಗೆ ವಿಷಾದವಿದೆ ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಇಬ್ಬರು ಉದ್ಯಮಿಗಳು ಸೇರಿದಂತೆ ಏಳು ಆರೋಪಿಗಳ ವಿರುದ್ಧ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಸಿಬಿಐ ಶುಕ್ರವಾರ ತನ್ನ ಮೊದಲ ಆರೋಪಪಟ್ಟಿ ಸಲ್ಲಿಸಿದೆ. ಇಬ್ಬರು ಬಂಧಿತ ಉದ್ಯಮಿಗಳಲ್ಲದೆ, ಸುದ್ದಿ ವಾಹಿನಿಯ ಮುಖ್ಯಸ್ಥ, ಹೈದರಾಬಾದ್ ಮೂಲದ ಮದ್ಯ ವ್ಯಾಪಾರಿ, ದೆಹಲಿ ಮೂಲದ ಮದ್ಯ ವಿತರಕ ಮತ್ತು ಇಬ್ಬರು ಅಬಕಾರಿ ಇಲಾಖೆ ಅಧಿಕಾರಿಗಳನ್ನು ಆರೋಪಪಟ್ಟಿಯಲ್ಲಿ ಹೆಸರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಬಿಐ ಎಫ್‌ಐಆರ್‌ನಲ್ಲಿ ಹೆಸರಿಸಲಾದ ಸಿಸೋಡಿಯಾ, ಫೆಡರಲ್ ಏಜೆನ್ಸಿ ತನಿಖೆಯನ್ನು ವಹಿಸಿಕೊಂಡ 60 ದಿನಗಳಲ್ಲಿ ಸಲ್ಲಿಸಲಾದ ಚಾರ್ಜ್‌ಶೀಟ್‌ನಲ್ಲಿ ಕಾಣಿಸಿಕೊಂಡಿಲ್ಲ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲಂಚದ ಅಪರಾಧಕ್ಕೆ ಸಂಬಂಧಿಸಿದ ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.