ರಬಕವಿ-ಬನಹಟ್ಟಿ: ರಾಷ್ಟ್ರ ಮಟ್ಟದ ಮಹಿಳಾ ಟೆನಿಸ್ ಬಾಲ್ ಕ್ರಿಕೆಟ್ ಸ್ಪರ್ಧೆ


Team Udayavani, Nov 25, 2022, 10:52 PM IST

1-sadsadsd

ರಬಕವಿ-ಬನಹಟ್ಟಿ : ಬಿಸಿಸಿಐ, ಕರ್ನಾಟಕ ರಾಜ್ಯ ಟೆನ್ನಿಸ್‌ಬಾಲ್ ಕ್ರಿಕೆಟ್ ಅಸೋಶಿಯೇಶನ್ ಬೆಂಗಳೂರು ಹಾಗೂ ರಬಕವಿ-ಬನಹಟ್ಟಿ ತಾಲೂಕಾ ಟೆನ್ನಿಸ್‌ಬಾಲ್ ಕ್ರಿಕೆಟ್ ಅಸೋಸಿಯೇಶನ್ ಸಂಯುಕ್ತವಾಗಿ ಏರ್ಪಡಿಸಿರುವ ರಾಷ್ಟ್ರಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್ ಚಾಂಪಿಯನ್‌ಶಿಪ್ 2022-23 ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ನಾಳೆ ಶನಿವಾರ 11ಕ್ಕೆ ಬನಹಟ್ಟಿಯ ಎಸ್‌ಆರ್‌ಏ ಮೈದಾನದಲ್ಲಿ ಆರಂಭಗೊಂಡು ಮೊದಲ ದಿನದಂದು ಎರಡು ರಾಜ್ಯ ಮಹಿಳಾ ತಂಡಗಳು ಪಾಲ್ಗೊಳ್ಳಲಿವೆ.

ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಸಿದ್ದು ಸವದಿ ಕಾರ್ಯಕ್ರಮದ ಉದ್ಘಾಟಕರಾಗಿದ್ದು, ತಾಲೂಕು ಘಟಕದ ಅಧ್ಯಕ್ಷ ಪ್ರೊ.ಬಸವರಾಜ ಕೊಣ್ಣೂರ ಅಧ್ಯಕ್ಷತೆ ವಹಿಸಲಿದ್ದಾರೆ.

ರಾಜ್ಯ ಟೆನ್ನಿಸ್‌ಬಾಲ್ ಕ್ರಿಕೆಟ್ ಅಸೋಶಿಯೇಶನ್ ಅಧ್ಯಕ್ಷೆ ಶಾಹಿದಾಬೇಗಂ ಅಬ್ದುಲ್ ಹಕೀಮ್ ಮುಖ್ಯ ಅತಿಥಿಗಳಾಗಿ, ಮಾಜಿ ಸಚಿವೆ ಉಮಾಶ್ರೀ, ನಗರಾಧ್ಯಕ್ಷ ಸಂಜಯ ತೆಗ್ಗಿ, ಡಾ.ಎ.ಆರ್.ಬೆಳಗಲಿ, ಡಾ.ಎಂ.ಎಸ್.ದಡ್ಡೇನವರ, ಸಿದ್ದು ಕೊಣ್ಣೂರ, ಶ್ರೀಶೈಲ ದಳವಾಯಿ, ಅಂಬಾದಾಸ ಕಾಮೂರ್ತಿ, ಸಂಜೀವ ಜೋತಾವರ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಪಂದ್ಯಗಳು ಜರುಗಲಿದ್ದು, ಒಟ್ಟು ಏಳು ರಾಜ್ಯಗಳ ಮಹಿಳಾ ತಂಡಗಳು ಪ್ರದರ್ಶನ ನೀಡಲಿವೆ. ಭಾನುವಾರ ಸಮಾರೋಪ ಸಮಾರಂಭ ಜರುಗಲಿದ್ದು, ಅಧ್ಯಕ್ಷತೆಯನ್ನು ಜನತಾ ಶಿಕ್ಷಣ ಸಂಘದ ಅಧ್ಯಕ್ಷ ಬಿ.ಡಿ.ಭದ್ರನ್ನವರ, ಧಾರವಾಡ ಸಾ.ಶಿ.ಇ. ಆಯುಕ್ತ ಎಸ್.ಎಸ್.ಬಿರಾದಾರ ಮುಖ್ಯ ಅತಿಥಿಗಳಾಗಿ ಬೆಳಗಾವಿ ವಲಯದ ಅಧ್ಯಕ್ಷೆ ಗೀತಾಂಜಲಿ ಪಾಟೀಲ, ನಗರ ಯೋಜನಾ ಪ್ರಾದಿಕಾರದ ಅಧ್ಯಕ್ಷ ಬಸವಪ್ರಭು ಹಟ್ಟಿ, ಸಿದ್ಧನಗೌಡ ಪಾಟೀಲ, ಶಂಕರ ಜುಂಜಪ್ಪನವರ, ಸುರೇಶ ಚಿಂಡಕ, ಗಣಪತರಾವ ಹಜಾರೆ, ಮಲ್ಲಿಕಾರ್ಜುನ ನಾಶಿ, ಧರೆಪ್ಪ ಉಳ್ಳಾಗಡ್ಡಿ, ಪರಪ್ಪ ಬಿಳ್ಳೂರ ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ವಿಜೇತ ತಂಡಕ್ಕೆ ಪಾರಿತೋಷಕ ವಿತರಿಸಲಾಗುತ್ತದೆಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

7-rabakavi

Rabkavi Banhatti: ಮೊಬೈಲ್ ಕಳ್ಳತನ ಪತ್ತೆ: ವಾರಸುದಾರರಿಗೆ ಹಸ್ತಾಂತರ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.