ನ.28ರಂದು ಶರಾವತಿ ಮುಳುಗಡೆ ರೈತರ ಪಾದಯಾತ್ರೆ: ಮಧು ಬಂಗಾರಪ್ಪ
Team Udayavani, Nov 26, 2022, 1:23 PM IST
ಶಿವಮೊಗ್ಗ: ಶರಾವತಿ ಮುಳುಗಡೆ ರೈತರ ಪಾದಯಾತ್ರೆಯು ನವೆಂಬರ್ 28 ರಂದು ನಡೆಯಲಿದೆ. ಆಯನೂರಿನಿಂದ ಶಿವಮೊಗ್ಗ ನಗರದ ಪಾದಯಾತ್ರೆ ಸಾಗಲಿದೆ. ಬಳಿಕ ಎನ್ಇಎಸ್ ಮೈದಾನದಲ್ಲಿ ಸಾರ್ವಜನಿಕ ಸಭೆ ಆಯೋಜನೆ ಮಾಡಲಾಗಿದೆ ಎಂದು ಸೊರಬ ಮಾಜಿ ಶಾಸಕ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗೋಷ್ಠಿಲ್ಲಿ ಮಾತನಾಡಿದ ಅವರು, ಪಾದಯಾತ್ರೆ ಹಮ್ಮಿಕೊಂಡ ನಂತರ ಬಿಜೆಪಿ ನಾಯಕರು ಎಚ್ಚೆತ್ತುಕೊಂಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಹಾಲಿ ಸಿಎಂ ಬೊಮ್ಮಾಯಿ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. 15 ದಿನದೊಳಗೆ ಸಮಸ್ಯೆ ಸರಿಪಡಿಸುವುದಾಗಿ ಹೇಳುತ್ತಿದ್ದಾರೆ. ಜಿಲ್ಲೆಯ ಸಂಸದರು ಈ ತನಕ ಸಂಸತ್ತಿನಲ್ಲಿ ರೈತರ ಪರವಾನಗಿ ದನಿ ಎತ್ತಿಲ್ಲ ಎಂದರು.
ಶರಾವತಿ, ಬಗರ್ ಹುಕುಂ, ಕಸ್ತೂರಿರಂಗನ್ ವರದಿ ಸೇರಿದಂತೆ ಅನೇಕ ಕಾರಣಗಳಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕಾಗೋಡು ತಿಮ್ಮಪ್ಪ ಹಕ್ಮು ಪತ್ರ ನೀಡಿದರು. ಆದರೆ, ಅದನ್ನು ಈಗಿನ ಸರ್ಕಾರ ವಜಾಗೊಳಿಸಿದೆ. ದಮ್ಮು, ತಾಕತ್ ಬಗ್ಗೆ ಮಾತನಾಡುವ ಸಿಎಂ ಈಗ ಏಕೆ ಮಾತನಾಡುತ್ತಿಲ್ಲ. ಜಾತಿ, ಧರ್ಮದ ಬಗ್ಗೆ ಮಾತನಾಡುವ ಸಿಎಂ ಜಿಲ್ಲೆಯ ಮುಳುಗಡೆ ಜನರ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಹಾಗಾಗಿಯೇ ನಾವು ಹೋರಾಟ ರೂಪಿಸುತ್ತಿದ್ದೇವೆ. ಜಿಲ್ಲೆಯ ಜನತೆ 28ರ ಪಾದಯಾತ್ರೆಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಧು ಬಂಗಾರಪ್ಪ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.