ನನ್ನನ್ನು ವಿಧಾನಸೌಧದೊಳಗೆ ನೋಡುವಂತೆ ಮಾಡಿ: ಡಿಕೆಶಿ
Team Udayavani, Nov 27, 2022, 11:50 PM IST
ಬೆಂಗಳೂರು: ನನ್ನ ಕೈಗೆ ಪೆನ್ನು, ಹಾಳೆಯನ್ನು ನೀಡಿ ವಿಧಾನಸೌಧದೊಳಗೆ ನೋಡುವಂತೆ ಮಾಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಒಕ್ಕಲಿಗ ಸಮುದಾಯದವರಲ್ಲಿ ಮನವಿ ಮಾಡಿದರು. ಆ ಮೂಲಕ ತನ್ನನ್ನು ಮುಖ್ಯಮಂತ್ರಿ ಮಾಡಿ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ.
ರವಿವಾರ ರಾಜ್ಯ ಒಕ್ಕಲಿಗರ ಸಂಘ, ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮೀಸಲಾತಿ ಹೆಚ್ಚಳ ಸಂಬಂಧದ ಸಭೆಯಲ್ಲಿ ಮಾತನಾಡಿದ ಅವರು ಈ ಹಿಂದೆಯೇ ಒಕ್ಕಲಿಗ ಸಂಘದ ಆವರಣದಲ್ಲಿ ನಡೆದ ಸಭೆ ಯಲ್ಲಿ ಈ ಬಗ್ಗೆ ಹೇಳಿದ್ದೆ. ಈಗ ಮತ್ತೆ ಮನವಿ ಮಾಡುತ್ತಿದ್ದೇನೆ. ನನ್ನ ಕೈಯನ್ನು ಬಲಪಡಿಸಿ ಹಾಗೂ ನನ್ನ ಕೈಗೆ ಪೆನ್ನು, ಹಾಳೆಯನ್ನು ನೀಡಿ ಎಂದು ಹೇಳಿದರು.
ಎಸ್.ಎಂ.ಕೃಷ್ಣ ಅವರ ಬಳಿಕ ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಆಲಂಕರಿಸಿದ್ದೇನೆ. ನಾನು ಒಕ್ಕಲಿಗ ಸಮುದಾಯದವ ಆಗಿರುವ ಹಿನ್ನೆಲೆಯಲ್ಲಿ ಹಲವು ಅವಕಾಶಗಳು ಸಿಕ್ಕಿವೆ ಎಂದರು. ಈಗಾಗಲೇ ಆರ್.ಅಶೋಕ್ ಸಚಿವರಾಗಿದ್ದಾರೆ. ನಮ್ಮ ಸಮುದಾಯದವರೇ ಆಗಿರುವ ಸುಧಾಕರ್, ಗೋಪಾಲಯ್ಯ ಕೂಡ ಸಚಿವರಾಗಿದ್ದಾರೆ. ಅವರು ಒಕ್ಕಲಿಗ ಸಮುದಾಯದವರಾಗಿರುವ ಹಿನ್ನೆಲೆ ಯಲ್ಲಿಯೇ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಹೇಳಿದರು.
ರಾಜಕೀಯವೇ ಬೇರೆ ಸಮುದಾಯವೇ ಬೇರೆ. ಆದರೆ ಸಮುದಾಯದ ವಿಚಾರಕ್ಕೆ ಬಂದಾಗ ಕೆಪಿಸಿಸಿ ಹುದ್ದೆಯನ್ನು ಪಕ್ಕಕ್ಕೆ ಇಟ್ಟು ಸಮುದಾಯದ ಒಳಿತಿನಲ್ಲಿ ಭಾಗವಹಿಸುತ್ತೇನೆ. ಈ ಹಿಂದೆ ನಾನು ಜೈಲಿಗೆ ಹೋದಾಗ ನಮ್ಮ ಸಮುದಾಯದರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕೆ ನಾನು ಋಣಿಯಾಗಿರುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ದೆಹಲಿಯ ನೇಲ್ ಆರ್ಟಿಸ್ಟ್ ನೇಣಿಗೆ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.