ಯಾರದೋ ದುಡ್ಡಲ್ಲಿ ಸಿದ್ದರಾಮಯ್ಯ ಜಾತ್ರೆ: ಬೊಮ್ಮಾಯಿ
ಕೇಂದ್ರದ ಅಕ್ಕಿಗೆ ತಮ್ಮ ಲೇಬಲ್ ಅಂಟಿಸಿ ಹಂಚಿದ್ದ ಸಿದ್ದು ; ಕೊಪ್ಪದಲ್ಲಿ ಜನಸಂಕಲ್ಪ ಯಾತ್ರೆ
Team Udayavani, Nov 27, 2022, 11:57 PM IST
ಚಿಕ್ಕಮಗಳೂರು/ಕೊಪ್ಪ: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರಕಾರದ ಅಕ್ಕಿಯನ್ನು ರಾಜ್ಯ ಸರಕಾರದ ಚೀಲದಲ್ಲಿ ಅನ್ನಭಾಗ್ಯ ಹೆಸರಿನಲ್ಲಿ ನೀಡಿದರು. ಯಾರಧ್ದೋ ದುಡ್ಡಲ್ಲಿ ಸಿದ್ದರಾಮಯ್ಯ ಜಾತ್ರೆ ನಡೆಸಿದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಾ ಪ್ರಹಾರ ನಡೆಸಿದರು.
ರವಿವಾರ ಕೊಪ್ಪ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನ ಸಂಕಲ್ಪ ಯಾತ್ರೆ ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 5 ವರ್ಷ ಆಡಳಿತ ನೀಡಿದ ಸಿದ್ದರಾಮಯ್ಯ ಅವರು ಜನ ನೆನಪಿಟ್ಟುಕೊಳ್ಳುವಂತಹ ಯಾವ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ, ಯೋಜನೆ ತಂದಿದ್ದಾರೆ ಎಂಬುದನ್ನು ಹೇಳಲಿ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ರಕ್ಷಕರು ಎಂದು ಬಿಂಬಿಸಿ ಕೊಳ್ಳುವ ಕಾಂಗ್ರೆಸ್ಸಿಗರು ಹಾಸ್ಟೆಲ್ ವಿದ್ಯಾರ್ಥಿಗಳ ಹಾಸಿಗೆ, ದಿಂಬಿನಲ್ಲೂ ಭ್ರಷ್ಟಾಚಾರ ನಡೆಸಿದರು.
ನೀರಾವರಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಸಿದರು. ತಮ್ಮ ಮೇಲಿನ ಭ್ರಷ್ಟಾ ಚಾರದ ಪ್ರಕರಣ ಮುಚ್ಚಿಕೊಳ್ಳಲು ಲೋಕಾಯುಕ್ತ ಸಂಸ್ಥೆ ದುರ್ಬಲಗೊಳಿಸಿ ಎಸಿಬಿ ಸಂಸ್ಥೆ ರಚಿಸಿ ಪ್ರಕರಣಗಳನ್ನೆಲ್ಲ ಮುಚ್ಚಿ ಹಾಕಿದರು ಎಂದರು.
ರಾಜ್ಯ ಬಿಜೆಪಿ ಸರಕಾರ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣದ ಧ್ಯೇಯದೊಂದಿಗೆ ಕೆಲಸ ಮಾಡುತ್ತಿದ್ದು, ರೈತರ ಮಕ್ಕಳಿಗೆ ವಿದ್ಯಾಸಿರಿ ಸಹಿತ ಹಲವು ಯೋಜನೆಗಳನ್ನು ರೂಪಿಸಿದೆ.
ಕಾಡಾನೆ ಮತ್ತು ಮಾನವ ಸಂಘರ್ಷ ತಪ್ಪಿಸುವ ನಿಟ್ಟಿನಲ್ಲಿ ಆನೆ ನಿಗ್ರಹ ಕಾರ್ಯಪಡೆ ರಚಿಸಿದೆ. ಮಲೆನಾಡಿನ ಹತ್ತು ಹಲವು ಸಮಸ್ಯೆಗಳನ್ನು ನಿವಾರಿಸುವ ಕೆಲಸವನ್ನು ನಮ್ಮ ಸರಕಾರ ಮಾಡುತ್ತಿದ್ದು, ಕಾಫಿ ಬೆಳೆಗಾರರ ಭೂ ಒತ್ತುವರಿ ಸಮಸ್ಯೆ ಹಾಗೂ ಅಡಕೆ ಎಲೆಚುಕ್ಕಿ ರೋಗ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು. ರಾಜ್ಯದ ಭವ್ಯ ಭವಿಷ್ಯದ ದೃಷ್ಟಿಯಿಂದ 2023ರ ಚುನಾವಣೆಯಲ್ಲಿ ಭ್ರಷ್ಟ ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಕಿತ್ತುಹಾಕಿ ಬದಲಾವಣೆ ಮನ್ವಂತರ ಆರಂಭವಾಗಲಿದೆ ಎಂದರು.
ಮಾಜಿ ಮುಖ್ಯಮಂತ್ರಿ, ಸಂಸದೀಯ ಸಲಹಾ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಕಾಂಗ್ರೆಸ್ ದೇಶದಲ್ಲಿ ಅಸ್ತಿತ್ವ ಕಳೆದುಕೊಂಡಿದೆ. ಕೇವಲ ಎರಡು ರಾಜ್ಯಗಳಲ್ಲಿ ಅಧಿ ಕಾರದಲ್ಲಿರುವ ಆ ಪಕ್ಷ ಮುಂಬರುವ ಚುನಾವಣೆಯಲ್ಲಿ ಅಲ್ಲೂ ಸೋಲಲಿದೆ. ಕಾಂಗ್ರೆಸ್‌ಗೆ 63 ವರ್ಷ ಅಧಿಕಾರ ನಡೆಸಿ ಏನು ಮಾಡಿದೆ? ಹಣ, ಹೆಂಡ, ತೋಳ್ಬಲದಿಂದ ಚುನಾವಣೆ ಗೆಲ್ಲುವ ಭ್ರಮೆಯಲ್ಲಿದ್ದಾರೆ.
ಸಿದ್ದು, ಡಿಕೆಶಿ ನಾನೇ ಸಿಎಂ ಚರ್ಚೆ ಆರಂಭವಾಗಿದ್ದು ಅದು ಸಾಧ್ಯವಿಲ್ಲ. ಸಿದ್ದರಾಮಯ್ಯ ಸುಳ್ಳು ಭರವಸೆಗಳನ್ನು ನೀಡಿ ರೈತರು ಮತ್ತು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದು, ಅವರನ್ನು ಜನ ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಉಸ್ತುವಾರಿ ಸಚಿವ ಬೈರತಿ ಬಸವರಾಜ್, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿದರು. ತರೀಕೆರೆ ಶಾಸಕ ಡಿ.ಎಸ್. ಸುರೇಶ್, ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ. ಕಲ್ಮುರಡಪ್ಪ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.