ಶ್ರದ್ಧಾ ರೀತಿಯ ಮತ್ತೊಂದು ಕೇಸ್: ಹತ್ಯೆಗೈದು ಫ್ರಿಡ್ಜ್ ನಲ್ಲಿಟ್ಟಿದ್ದ ತಾಯಿ-ಮಗನ ಬಂಧನ
Team Udayavani, Nov 28, 2022, 12:49 PM IST
ಹೊಸದಿಲ್ಲಿ: ದೇಶವನ್ನೇ ಬಿಚ್ಚಿ ಬೀಳಿಸಿದ ಶ್ರದ್ಧಾ ವಾಲ್ಕರ್ ಪ್ರಕರಣವು ಜನರ ಮನಸ್ಸಿನಿಂದ ಮರೆಮಾಚುವ ಮೊದಲೇ ರಾಷ್ಟ್ರರಾಜಧಾನಿಯಲ್ಲಿ ಮತ್ತೊಂದು ಘಟನೆ ನಡೆದಿದೆ. ಶ್ರದ್ಧಾ ರೀತಿಯ ಪ್ರಕರಣವೇ ನಡೆದಿದ್ದು, ವ್ಯಕ್ತಿಯೊಬ್ಬನನ್ನು ಕೊಂದು ತುಂಡು ತುಂಡಾಗಿ ಕತ್ತರಿಸಲಾಗಿದೆ.
ದಿಲ್ಲಿ ಪೊಲೀಸರ ಅಪರಾಧ ವಿಭಾಗವು ಮಹಿಳೆ ಮತ್ತು ಆಕೆಯ ಪುತ್ರನನ್ನು ಬಂಧಿಸಿದೆ. ಅವರು ಒಬ್ಬ ವ್ಯಕ್ತಿಯನ್ನು ಕೊಂದು, ದೇಹವನ್ನು ಕತ್ತರಿಸಿ, ರೆಫ್ರಿಜರೇಟರ್‌ನಲ್ಲಿ ತುಂಡುಗಳನ್ನು ಸಂಗ್ರಹಿಸಿಟ್ಟು ನಂತರ ಪೂರ್ವ ದೆಹಲಿಯ ಹಲವಾರು ಪ್ರದೇಶಗಳಲ್ಲಿ ಅವುಗಳನ್ನು ವಿಲೇವಾರಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಜೂನ್ ನಲ್ಲಿ ಪೊಲೀಸರು ಪಾಂಡವ ನಗರದಲ್ಲಿ ಮಾನವ ದೇಹದ ತುಂಡೊಂದನ್ನು ಪತ್ತೆ ಮಾಡಿದ್ದರು. ಆದರೆ ಅದು ಕೊಳೆತ ಸ್ಥಿತಿಯಲ್ಲಿ ಇದ್ದಿದ್ದರಿಂದ ಅದರ ತನಿಖೆ ಸಾಧ್ಯವಾಗಿರಲಿಲ್ಲ. ಕೆಲ ದಿನಗಳ ಹಿಂದೆ ಶ್ರದ್ಧಾ ಪ್ರಕರಣ ಬೆಳಕಿಗೆ ಬಂದ ಬಳಿಕ ಪಾಂಡವ ನಗರದಲ್ಲಿ ಸಿಕ್ಕ ಭಾಗವು ಆಕೆಯದ್ದೇ ಆಗಿರಬಹುದು ಎಂಬ ದಿಕ್ಕಿನಲ್ಲಿ ತನಿಖೆ ಮಾಡಲಾಗಿತ್ತು. ಆದರೆ ಇದೀಗ ಅದು ಪಾಂಡವ ನಗರದ ನಿವಾಸಿ ಅಂಜನ್ ದಾಸ್ ಎಂಬವನದ್ದು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಾದ ಪೂನಂ ಮತ್ತು ಆಕೆಯ ಮಗ ದೀಪಕ್ ಜೂನ್ ನಲ್ಲಿ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ದಾಸ್ ನನ್ನು ಕೊಂದಿದ್ದಾರೆ. ಅಂಜನ್ ಗೆ ಮೊದಲು ನಿದ್ರೆ ಮಾತ್ರೆಗಳನ್ನು ನೀಡಿ ನಂತರ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಆರೋಪಿಗಳು ಆತನ ದೇಹವನ್ನು ಕತ್ತರಿಸಿ, ರೆಫ್ರಿಜರೇಟರ್ ನಲ್ಲಿ ತುಂಡುಗಳನ್ನು ಸಂಗ್ರಹಿಸಿಟ್ಟಿದ್ದರು. ಬಳಿಕ ಅವುಗಳನ್ನು ಪಾಂಡವ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಲೇವಾರಿ ಮಾಡಿದ್ದರು.
A woman along with her son arrested by Crime Branch in Delhi’s Pandav Nagar for murdering her husband. They chopped off body in several pieces,kept in refrigerator & used to dispose of pieces in nearby ground: Delhi Police Crime Branch
(CCTV visuals confirmed by police) pic.twitter.com/QD3o5RwF8X
— ANI (@ANI) November 28, 2022
ದೀಪಕ್ ತಡರಾತ್ರಿಯಲ್ಲಿ ಕೈಯಲ್ಲಿ ಚೀಲವನ್ನು ಹಿಡಿದುಕೊಂಡು ಹೋಗುತ್ತಿರುವ ದೃಶ್ಯಗಳು ಸಮೀಪದ ಸಿಸಿ ಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಅವರ ತಾಯಿ ಪೂನಂ ಅವರನ್ನು ಹಿಂಬಾಲಿಸುತ್ತಿರುವುದು ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.