ಕರ್ನಾಟಕ ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದ ಬಿ.ಎಲ್.ಸಂತೋಷ್ ಹೇಳಿಕೆ


Team Udayavani, Nov 28, 2022, 2:30 PM IST

BL-Santhosh

ಬೆಂಗಳೂರು: ಮೊದಲು ಪಕ್ಷಕ್ಕಾಗಿ ದುಡಿಯಲು ಮುಂದಾಗಿ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನೀಡಿರುವ ಹೇಳಿಕೆ ಈಗ ಬಿಜೆಪಿಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಪ್ರಶಿಕ್ಷಣ ಶಿಬಿರದಲ್ಲಿ ಸಂತೋಷ್ ಈ ಹೇಳಿಕೆ ನೀಡಿದ್ದಾರೆ. ಇದು ಟಿಕೆಟ್ ಆಕಾಂಕ್ಷಿಗಳಲ್ಲಿ ತಳಮಳ ಸೃಷ್ಟಿಸಿದ್ದು, ಕೆಲವು ಸಚಿವರು ಮತ್ತು ಶಾಸಕರಿಗೆ ಟಿಕೆಟ್ ಕೈ ತಪ್ಪಲಿದೆಯೇ ಎಂಬ ಸಂದೇಶವನ್ನು ಪರೋಕ್ಷವಾಗಿ ರವಾನಿಸಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಕೆಲ ದಿನಗಳ ಹಿಂದೆ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಅವರು ಮಾಡಿದ್ದ ಒಂದು ಟ್ವೀಟ್ ಬಿಜೆಪಿಯಲ್ಲಿ ಅನೇಕ ಹಿರಿಯರಿಗೆ ತಲೆ ನೋವು ಸೃಷ್ಟಿಸಿತ್ತು. ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಅನೇಕ ಹಿರಿಯರು ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಶಾಸಕರಿಗೆ ಟಿಕೆಟ್ ಕೊಡದೆ ಹೊಸ ಮುಖಗಳಿಗೆ ಮಣೆ ಹಾಕಲಾಗಿತ್ತು. ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಟಿಕೆಟ್ ಹಂಚಿಕೆ ಮಾಡಬೇಕೆಂದು ಲೆಹರ್ ಸಿಂಗ್ ಪ್ರತಿಪಾದಿಸಿದ್ದರು.

ಇದಕ್ಕೆ ಪುಷ್ಟಿ ನೀಡುವಂತೆ ಸಂತೋಷ್ ಕೂಡ ಟಿಕೆಟ್ ಬಗ್ಗೆ ಚಿಂತೆ ಬೇಡ ಎಂದಿರುವುದು ಐದಾರು ಬಾರಿ ಗೆದ್ದಿರುವವರಿಗೆ ಟಿಕೆಟ್ ಖಾತ್ರಿ ಇಲ್ಲ ಎಂಬ ಗುಸುಗುಸು ಹಬ್ಬುವಂತಾಗಿದೆ.

ಸತತವಾಗಿ ಆರು ಬಾರಿ, ಐದು ಬಾರಿ, ನಾಲ್ಕು ಬಾರಿ ಗೆದ್ದಿರುವವರನ್ನು ಕೈ ಬಿಟ್ಟು ಹೊಸ ಮುಖಗಳಿಗೆ ಅಂದರೆ ಎರಡು ಮತ್ತು 3ನೇ ಹಂತದ ಕಾರ್ಯಕರ್ತರನ್ನು ಕಣಕ್ಕಿಳಿಸಬೇಕೆಂಬ ಬೇಡಿಕೆ ಹೆಚ್ಚಾಗುತ್ತಲೇ ಇದೆ.

ಇದನ್ನೂ ಓದಿ:ಒಂದೇ ಓವರ್ ನಲ್ಲಿ 7 ಸಿಕ್ಸರ್ ಹೊಡೆದ ಋತುರಾಜ್ ಗಾಯಕ್ವಾಡ್: ದ್ವಿಶತಕದ ಸಾಧನೆ

ಈ ಹಿಂದೆ ದೆಹಲಿಯ ಪಾಲಿಕೆ ಚುನಾವಣೆಯಲ್ಲಿ ಬಹುತೇಕ ಹಾಲಿ ಎಲ್ಲ ಸದಸ್ಯರನ್ನು ಕೈಬಿಟ್ಟು ಹೊಸ ಮುಖಗಳಿಗೆ ಮಣೆ ಹಾಕಲಾಗಿತ್ತು. ಪರಿಣಾಮ ಯಾರೂ ಕೂಡ ಊಹೆ ಮಾಡದ ರೀತಿಯಲ್ಲಿ ಬಿಜೆಪಿ ಗೆದ್ದು ಅಧಿಕಾರ ಹಿಡಿದಿತ್ತು. ಈ ಪ್ರಯೋಗವನ್ನು ಕರ್ನಾಟಕದಲ್ಲೂ ಅನುಷ್ಠಾನ ಮಾಡಬೇಕೆಂದು ಬಿಜೆಪಿಯ ಒಂದು ಗುಂಪು ಬೇಡಿಕೆಯನ್ನು ಮುಂದಿಟ್ಟಿದೆ.

ಹಾಗೇನಾದರೂ ವರಿಷ್ಠರು ನಿರ್ಧಾರ ತೆಗೆದುಕೊಂಡರೆ ಅವೇಶನ ನಡೆಯುವ ವೇಳೆ ಮೊದಲ ಸಾಲಿನಲ್ಲಿ ಕೂರುವ ಬಹುತೇಕ ನಾಯಕರಿಗೆ ಮೊದಲನೇ ಮತ್ತು 2ನೇ ಸಾಲಿನಲ್ಲಿ ಕೂರುವವರಿಗೆ ಟಿಕೆಟ್ ಕೈ ತಪ್ಪುವ ಭೀತಿ ಎದುರಾಗಿದೆ.

ಒಂದಿಷ್ಟು ಹಳಬರಿಗೆ ಟಿಕೆಟ್ ಕೈ ತಪ್ಪಿಸಲು ದೆಹಲಿಯ ಪ್ರಭಾವಿ ನಾಯಕರು ಕೂಡ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಆಡಳಿತ ವಿರೋಧಿ ಅಲೆಯನ್ನು ಮೆಟ್ಟಬೇಕಾದರೆ ಹಳಬರಿಗೆ ಕೋಕ್ ನೀಡುವುದು ಅನಿವಾರ್ಯ ಎಂಬ  ಮಾತು ಕೇಳಿಬರುತ್ತಿದೆ.

ಪ್ರತಿ ಚುನಾವಣೆಯಲ್ಲೂ ಹೊಸತನವನ್ನೇ ಪ್ರಯೋಗ ಮಾಡುವ ಬಿಜೆಪಿ ಕರ್ನಾಟಕದಲ್ಲಿ ಯಾವ ಮಾದರಿ ಅನುಸರಿಸುತ್ತದೆ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.