ವಿಳಿಂಜಂ ಪೊಲೀಸ್ ಠಾಣೆಗೆ 3 ಸಾವಿರ ಮಂದಿಯಿಂದ ಮುತ್ತಿಗೆ
ಕೇರಳದಲ್ಲಿ ತೀವ್ರಗೊಂಡ ಅದಾನಿ ಪೋರ್ಟ್ ವಿರುದ್ಧದ ಪ್ರತಿಭಟನೆ
Team Udayavani, Nov 29, 2022, 7:30 AM IST
ತಿರುವನಂತಪುರ: ಕೇರಳದಲ್ಲಿ ನಿರ್ಮಾಣ ಹಂತದಲ್ಲಿರುವ ಅದಾನಿ ಬಂದರು ವಿರುದ್ಧದ ಸ್ಥಳೀಯರ ಹೋರಾಟ ಹಿಂಸಾರೂಪಕ್ಕೆ ತಿರುಗಿದೆ.
ಭಾನುವಾರ ಸಂಜೆ ಸುಮಾರು 3 ಸಾವಿರದಷ್ಟು ಮಂದಿ ವಿಳಿಂಜಂ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ್ದಾರೆ. ಠಾಣೆಯಲ್ಲಿ ದೊಡ್ಡಮಟ್ಟದಲ್ಲಿ ದಾಂದಲೆಯನ್ನೂ ನಡೆಸಲಾಗಿದ್ದು, ಘಟನೆಯಲ್ಲಿ 40 ಪೊಲೀಸ್ ಸಿಬ್ಬಂದಿ ಮತ್ತು ಹಲವು ಸ್ಥಳೀಯರು ಗಾಯಗೊಂಡಿದ್ದಾರೆ.
ಘಟನೆ ಸಂಬಂಧ ಮಹಿಳೆಯರು, ಮಕ್ಕಳು ಸೇರಿದಂತೆ 3 ಸಾವಿರ ಮಂದಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಕಾನೂನುಬಾಹಿರವಾಗಿ ಗುಂಪು ಸೇರಿರುವುದು, ಗಲಭೆ, ಕ್ರಿಮಿನಲ್ ಸಂಚು ಆರೋಪಗಳನ್ನು ಅವರ ವಿರುದ್ಧ ಹೊರಿಸಲಾಗಿದೆ.
ಆಗಿದ್ದೇನು?
ಅದಾನಿ ಪೋರ್ಟ್ ವಿರುದ್ಧದ ಪ್ರತಿಭಟನೆ ಹಿನ್ನೆಲೆಯಲ್ಲಿ ಶನಿವಾರ ನಾಲ್ವರನ್ನು ಬಂಧಿಸಲಾಗಿತ್ತು. ಅವರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಭಾನುವಾರ ಸಂಜೆ ಕಬ್ಬಿಣದ ರಾಡು, ಕೋಲುಗಳು, ಕಲ್ಲು, ಇಟ್ಟಿಗೆಗಳನ್ನು ಹೊತ್ತುಕೊಂಡು ಪೊಲೀಸ್ ಠಾಣೆಯನ್ನು ಸುತ್ತುವರಿಯಿತು. ಆರೋಪಿಗಳನ್ನು ಬಿಡುಗಡೆ ಮಾಡದಿದ್ದರೆ ಠಾಣೆಗೆ ಬೆಂಕಿ ಹಚ್ಚುವುದಾಗಿಯೂ ಬೆದರಿಕೆ ಹಾಕಲಾಯಿತು. 5 ಪೊಲೀಸ್ ವಾಹನಗಳಿಗೆ ಹಾನಿ ಮಾಡಿ, ಠಾಣೆಯೊಳಗಿದ್ದ ಕಡತಗಳನ್ನೆಲ್ಲ ನಾಶಪಡಿಸಿತು ಎಂದು ಎಫ್ಐಆರ್‌ನಲ್ಲಿಉಲ್ಲೇಖಿಸಲಾಗಿದೆ.
ಇನ್ನು, ಪೊಲೀಸ್ ಠಾಣೆ ಮೇಲಿನ ದಾಳಿಯನ್ನು ಖಂಡಿಸಿರುವ ಕೇರಳ ಸರ್ಕಾರ “ಇದು ಸ್ವೀಕಾರಾರ್ಹವಲ್ಲ’ ಎಂದು ಹೇಳಿದೆ. ಇನ್ನು, ಲ್ಯಾಟಿನ್ ಕ್ಯಾಥೊಲಿಕ್ ಚರ್ಚ್, “ಈ ದಾಳಿಯ ಹಿಂದೆ ಬಾಹ್ಯ ಶಕ್ತಿಗಳ ಕೈವಾಡವಿದೆ. ಈ ಕುರಿತು ನ್ಯಾಯಾಂಗ ತನಿಖೆಯಾಗಬೇಕು’ ಎಂದು ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.