ಡಿ. 16,17,18 : ಕಾಪುವಿನಲ್ಲಿ ಕಡಲ ಐಸಿರ ಬೀಚ್ ಫೆಸ್ಟ್ 2022: ಶಾಸಕ ಲಾಲಾಜಿ ಆರ್. ಮೆಂಡನ್


Team Udayavani, Nov 29, 2022, 5:37 PM IST

ಡಿ. 16,17,18 : ಕಾಪುವಿನಲ್ಲಿ ಕಡಲ ಐಸಿರ ಬೀಚ್ ಫೆಸ್ಟ್ 2022: ಶಾಸಕ ಲಾಲಾಜಿ ಆರ್. ಮೆಂಡನ್

ಕಾಪು: ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು ಮತ್ತು ದಿ. ಆರ್.ಡಿ. ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್16, 17 ಮತ್ತು 18 ರಂದು ಕಾಪು ಬೀಚ್ ನಲ್ಲಿ ಕಡಲ ಐಸಿರ ಬೀಚ್ ಫೆಸ್ಟ್ – 2022 ನಡೆಯಲಿದೆ ಎಂದು  ಸಮಿತಿಯ ಗೌರವಾಧ್ಯಕ್ಷ, ಶಾಸಕ ಲಾಲಾಜಿ ಆರ್. ಮೆಂಡನ್ ತಿಳಿಸಿದರು.

ಮಂಗಳವಾರ ಕಾಪು ಬೀಚ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕಡಲ ಐಸಿರ ಕಾರ್ಯಕ್ರಮದ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ, ನೂತನ ಶಾಲಾ ವಾಹನ ಖರೀದಿ, ಸಂಸ್ಥೆಗೆ ನೂತನ ಕಟ್ಟಡ ನಿರ್ಮಾಣ ಹಾಗೂ ಇತರ ಸಮಾಜ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ಡಿ. 16 ರಂದು ಉದ್ಘಾಟನಾ ಸಮಾರಂಭ ನಡೆಯಲಿದ್ದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶಾಲಾ ವಾರ್ಷಿಕೋತ್ಸವ ನಡೆಯಲಿದೆ. ಡಿ.17 ರಂದು ರಾಜ್ಯ ಮಟ್ಟದ ಸಮೂಹ ನೃತ್ಯ ಸ್ಪರ್ಧೆ, ಫಲಪುಷ್ಪ ಕಲಾ ಸ್ಪರ್ಧೆ, ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಚಿತ್ರ ಬಿಡಿಸುವ ಸ್ವರ್ಧೆ, ಬಲೆ ಬೀಸಿ ಮೀನು ಹಿಡಿಯುವುದು, ಗಾಳ ಹಾಕಿ ಮೀನು ಹಿಡಿಯುವುದು, ಮಹಿಳೆಯರಿಗಾಗಿ ಸಂಗೀತ ಕುರ್ಚಿ, ಬಾಳೆ ಹಣ್ಣು ತಿನ್ನುವುದು, ಬಾಟಲ್ ಬ್ಯಾಲೆನ್ಸ್ ಸ್ಪರ್ಧೆ ಮತ್ತು ತ್ರೋಬಾಲ್ ಪಂದ್ಯಾಟ ನಡೆಯಲಿದೆ.

ಡಿ. 18 ರಂದು ಚೆಂಡೆ ಸ್ಪರ್ಧೆ, ಬೀಚ್ ವಾಲಿಬಾಲ್ ಸ್ಪರ್ಧೆ,  ಕೊಳಲು ಮತ್ತು ತಬಲ ತಂಡ ಸ್ಪರ್ಧೆ, ಶ್ವಾನ ಸ್ಪರ್ಧೆ, ಈಜು ಸ್ಪರ್ಧೆ, ಮರಳಿನಲ್ಲಿ ಕಲಾಕೃತಿ, ಹುಟ್ಟು ದೋಣಿ ಸ್ಪರ್ಧೆ, ಗಾಳಿ ಪಟ ಸ್ಪರ್ಧೆ ಮತ್ತು ಪ್ರದರ್ಶನ ನಡೆಯಲಿದೆ.

ವಿಶೇಷ ಆಕರ್ಷಣೆಯಾಗಿ ಕರಾವಳಿ ಶೈಲಿಯ ಪುಡ್ ಪೆಸ್ಟಿವಲ್, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕಲಾವಿದರಿಂದ ಸಂಗೀತ ರಸಮಂಜರಿ, ವೈಶಿಷ್ಡ್ಯ ಪೂರ್ಣವಾಗಿ ಕಾಪು ದೀಪಸ್ತಂಭದ ಆವರಣದಲ್ಲಿ ಲೇಸರ್ ಶೋ, ಆಕರ್ಷಕ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಕಾಪು ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ನ ಅಧ್ಯಕ್ಷ ಶೀಲರಾಜ್ ಪುತ್ರನ್, ಉಪಾಧ್ಯಕ್ಷ ಆನಂದ ಶ್ರೀಯಾನ್, ಪ್ರಧಾನ ಕಾರ್ಯದರ್ಶಿ ಸಚಿನ್ ಪುತ್ರನ್, ಪದಾಧಿಕಾರಿಗಳಾದ ಸುಜಿತ್ ಸುವರ್ಣ, ಉದಯ ಶಂಕರ್, ಮಧುಕರ್ ಎಸ್., ನವೀನ್ ಅಮೀನ್, ದಿನೇಶ್ ಸುವರ್ಣ, ಲಾಲಾಜಿ ಪುತ್ರನ್, ರಾಜೇಶ್ ಸುವರ್ಣ, ನಿತೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.