ಮಣಿಪಾಲ: ಅಂಗನವಾಡಿ ಕೇಂದ್ರದಲ್ಲೇ ಎಲ್‌ಕೆಜಿ, ಯುಕೆಜಿ ತೆರೆಯಲು ಆಗ್ರಹ
Team Udayavani, Dec 2, 2022, 5:30 AM IST
ಮಣಿಪಾಲ : ಮಕ್ಕಳ ಪೂರ್ವ ಪ್ರಾಥಮಿಕ ಶಿಕ್ಷಣವನ್ನು(ಎಲ್‌ಕೆಜಿ, ಯುಕೆಜಿ) ಅಂಗನವಾಡಿ ಕೇಂದ್ರದಲ್ಲೇ ನೀಡಲು ವ್ಯವಸ್ಥೆ ಮಾಡಬೇಕು ಮತ್ತು ಗ್ರಾಚ್ಯುಟಿ ನೀಡುವುದು, ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರಾಗಿ ಪರಿಣಿಸಬೇಕೆಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು) ಜಿಲ್ಲಾ ಸಮಿತಿಯಿಂದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಅನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಹಾಗಾರ್ ಮಾತನಾಡಿ, ಗ್ರಾಚ್ಯುಟಿ ಪಡೆಯಲು ಅಂಗನವಾಡಿ ನೌಕರರು ಅರ್ಹರು ಎಂದು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಹೀಗಾಗಿ ಕೂಡಲೇ ಗ್ರಾಚ್ಯುಟಿಗೆ ಸರಕಾರ ನಿರ್ದೇಶನ ಮಾಡಬೇಕು. ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸುವ ಮೂಲಕ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಮಕ್ಕಳಿಗೆ ಅಲ್ಲಿಯೇ ನೀಡುವ ವ್ಯವಸ್ಥೆ ಸರಕಾರ ಮಾಡಬೇಕು. ಸರಕಾರ ನಿರ್ದಿಷ್ಟ ಸೇವೆಗಳ ಹೊರತಾಗಿ ಹೆಚ್ಚುವರಿ ಕಾರ್ಯಗಳನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತತ್‌ಕ್ಷಣದಿಂದಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಶೀಲಾ ನಾಡ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರಿಗೆ ವಿವಿಧ ಸೌಲಭ್ಯ ಒದಗಿಸುವ ಜತೆಗೆ ಅವರನ್ನು ಶಿಕ್ಷಕಿಯರ ರೀತಿಯಲ್ಲೇ ಪರಿಗಣಿಸಿಬೇಕು. ವೇತನ ಹೆಚ್ಚಳ ಮಾಡಬೇಕು ಮತ್ತು ಗ್ರಾಚ್ಯುಟಿ ನೀಡುವ ವ್ಯವಸ್ಥೆಯನ್ನು ಕೂಡಲೇ ಜಾರಿ ಮಾಡಬೇಕು ಎಂದು ಆಗ್ರಹಿಸಿದರು. ಸಂಘದ ಜಿಲ್ಲಾಧ್ಯಕ್ಷೆ ಭಾರತಿ, ಖಜಾಂಚಿ ಯಶೋದಾ, ಸಿಐಟಿಯು ತಾಲೂಕು ಸಂಚಾಲಕ ಎಚ್. ನರಸಿಂಹ, ಮುಖಂಡ ಶೇಖರ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.