ಪ್ರವಾಹ ತಡೆಗೆ 185 ಕೆರೆಗಳಿಗೆ ಗೇಟ್
ಜಲಾಶಯಗಳ ಕ್ರಸ್ಟ್ ಗೇಟ್ ಮಾದರಿ ಕೆರೆಗಳಿಗೆ ಅಳವಡಿಕೆ
Team Udayavani, Dec 2, 2022, 10:23 AM IST
ಬೆಂಗಳೂರು: ಪ್ರಸಕ್ತ ವರ್ಷದ ಮಳೆಗಾಲದಲ್ಲಿ ನಗರದ ಹಲವು ಬಡಾವಣೆಗಳು ಪ್ರವಾಹಕ್ಕೆ ತುತ್ತಾಗಿ ಸಂಕಷ್ಟ ಎದುರಾಗಿತ್ತು. ಇನ್ನು ಮುಂದೆ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುವುದನ್ನು ತಡೆಯಲು ಕೆರೆಗಳಿಗೆ ಡ್ಯಾಂಗಳಲ್ಲಿನ ಕ್ರಸ್ಟ್ ಗೇಟ್ ಮಾದರಿಯ ಗೇಟ್‌ಗಳ ಅಳವಡಿಕೆಗೆ ಬಿಬಿಎಂಪಿ ಮುಂದಾಗಿದೆ.
ಪ್ರತಿ ಬಾರಿ ಮಳೆ ಬಂದಾಗಲು ಬೆಂಗಳೂರಿನ ಹಲವು ಬಡಾವಣೆಗಳು ಜಲಾವೃತವಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಈ ವರ್ಷ ಮಳೆಯ ಪ್ರಮಾಣ ಹೆಚ್ಚಾಗಿ ನಗರದ 60ಕ್ಕೂ ಹೆಚ್ಚಿನ ಬಡಾವಣೆಗಳು ಒಂದಿಲ್ಲೊಂದು ಬಾರಿ ಪ್ರವಾಹಕ್ಕೆ ತುತ್ತಾಗಿವೆ. ಹೀಗೆ ಪದೇ ಪದೆ ಪ್ರವಾಹ ಸೃಷ್ಟಿಯಾಗಲು ರಾಜಕಾಲುವೆಗಳ ನಿರ್ವಹಣೆಯ ಲೋಪ ಒಂದೆಡೆಯಾದರೆ, ಕೆರೆಗಳು ಭರ್ತಿಯಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದಿದ್ದು ಮತ್ತೂಂ ದು ಕಾರಣ ಎನ್ನಲಾಗುತ್ತಿದೆ. ಹೀಗಾಗಿ ಕೆರೆಗಳಿಂದ ಹರಿಯುವ ನೀರನ್ನು ನಿಯಂತ್ರಿಸುವ ಸಲುವಾಗಿ ನಗರದಲ್ಲಿನ 185 ಕೆರೆಗಳಿಗೆ ಗೇಟ್‌ಗಳನ್ನು ಅಳವಡಿಸಲು ಯೋಜನೆ ರೂಪಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 219 ಕೆರೆಗಳಿವೆ. ಅವುಗಳಲ್ಲಿ 100ಕ್ಕೂ ಹೆಚ್ಚಿನ ಕೆರೆಗಳ ಹೂಳು ತೆಗೆ ಯುವುದು, ಕೆರೆ ದಂಡೆಯನ್ನು ಸದೃಢಪಡಿಸುವುದು, ಕೆರೆ ಸುತ್ತ ಬೇಲೆ ಹಾಕುವುದು ಸೇರಿ ಇನ್ನಿತರ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ಅಲ್ಲದೆ ಮುಂದಿನ ಕೆಲ ವರ್ಷಗಳಲ್ಲಿ ಎಲ್ಲ 219 ಕೆರೆಗಳ ಅಭಿವೃದ್ಧಿ ಮಾಡುವ ಗುರಿಯನ್ನು ಬಿಬಿಎಂಪಿ ಹೊಂದಿದೆ. ಅದಕ್ಕೂ ಮುನ್ನ 219 ಕೆರೆಗಳ ಪೈಕಿ 185 ಕೆರೆ ಗಳಿಂದ ರಾಜಕಾಲುವೆಗೆ ನೀರು ಹರಿಯುವುದನ್ನು ನಿಯಂತ್ರಿಸಲು ಗೇಟ್‌ಗಳನ್ನು ಅಳವಡಿಸಲಾಗುತ್ತಿದೆ.
ಮಳೆ ಬಂದಾಗ ಗೇಟ್ ಬಂದ್: ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ಮಳೆ ಬಂದಾಗ ನಗರದಲ್ಲಿನ 50ಕ್ಕೂ ಹೆಚ್ಚಿನ ಕೆರೆಗಳು ಭರ್ತಿಯಾಗಿ ಹೆಚ್ಚಿನ ಪ್ರಮಾಣದ ನೀರು ರಾಜಕಾಲುವೆಗೆ ಹರಿದಿತ್ತು. ಕೆರೆಗಳಿಂದ ಹರಿದ ನೀರಿನ ಮಟ್ಟವನ್ನು ರಾಜಕಾಲುವೆಗಳು ತಡೆಯಲಾಗದ ಕಾರಣ ನೀರು ಅಕ್ಕಪಕ್ಕದ ಬಡಾವಣೆಗಳಿಗೆ ಹರಿದಿತ್ತು. ಹೀಗಾಗಿ ಕೆರೆಗಳಿಂದ ರಾಜಕಾಲುವೆಗೆ ನೀರು ಹರಿಯುವ ಜಾಗದಲ್ಲಿ ಗೇಟ್ ಅಳವಡಿಸಲಾಗುತ್ತದೆ. ಮಳೆ ಬಂದಾಗ ಕೆರೆಯಲ್ಲಿ ಶೇಖರಣೆಯಾಗುವ ನೀರಿನ ಪ್ರಮಾಣ ಹೆಚ್ಚಾಗುವುದು ಕಂಡು ಬಂದಾಗ ನೀರು ಹೊರಗೆ ಹೋಗುವ ಗೇಟ್‌ನ್ನು ಬಂದ್ ಮಾಡಲಾಗುತ್ತದೆ. ಅದರಿಂದ ರಾಜಕಾಲುವೆಗಳ ಮೇಲೆ ಒತ್ತಡ ಹೆಚ್ಚುವುದು ನಿಲ್ಲುತ್ತದೆ.
ಮಳೆ ನಿಂತು ರಾಜಕಾಲುವೆಯಲ್ಲಿ ನೀರು ಹರಿಯುವ ಪ್ರಮಾಣ ಕಡಿಮೆಯಾದ ನಂತರ ಗೇಟ್‌ನ್ನು ತೆರೆಯಲಾಗುತ್ತದೆ. ಅದರಿಂದ ಕೆರೆಯ ನೀರು ರಾಜಕಾಲುವೆ ಮೂಲಕ ಹರಿದು ಖಾಲಿಯಾಗುತ್ತದೆ. ಮತ್ತೆ ಮಳೆ ಬಂದಾಗ ಕೆರೆಯಲ್ಲಿ ನೀರು ಶೇಖರಣೆ ಮಾಡುವುದಕ್ಕೆ ಸ್ಥಳಾವಕಾಶ ಇರುವಂತೆ ಮಾಡಲಾಗುತ್ತದೆ.
ಜನವರಿಯಿಂದ ಕಾಮಗಾರಿ ಆರಂಭ
ಬಿಬಿಎಂಪಿ ಕೆರೆ ವಿಭಾಗದ ಅಧಿಕಾರಿಗಳು ರೂಪಿಸಿರುವ ಯೋಜನೆಗೆ ಮುಖ್ಯ ಆಯುಕ್ತರು ಮತ್ತು ಆಡಳಿತಾಧಿಕಾರಿಯಿಂದ ಅನುಮೋದನೆ ದೊರೆತಿದೆ. ಯೋಜನೆಗಾಗಿ ಕೆರೆ ವಿಭಾಗಕ್ಕೆ ಈ ಬಾರಿ ನೀಡಿದ ಅನುದಾನದಲ್ಲಿ 35 ಕೋಟಿ ರೂ. ವ್ಯಯಿಸಲಾಗುತ್ತದೆ. ಅಲ್ಲದೆ ಟೆಂಡರ್ ಪ್ರಕ್ರಿಯೆ ನಡೆಸಿ ಗೇಟ್ ಅಳವಡಿಕೆಗೆ ಖಾಸಗಿ ಸಂಸ್ಥೆಯನ್ನು ನೇಮಿಸಲಾಗುತ್ತದೆ. ಇನ್ನೊಂದು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು, ಜನವರಿಯಿಂದ ಗೇಟ್ ಅಳವಡಿಕೆ ಕಾರ್ಯ ಆರಂಭವಾಗಲಿದೆ. 2023ರ ಮಳೆಗಾಲ ಆರಂಭಕ್ಕೂ ಮುನ್ನ ಅಂದರೆ ಮೇ ತಿಂಗಳ ಅಂತ್ಯದೊಳಗೆ ನಿಗದಿಪಡಿಸಿರುವ 185 ಕೆರೆಗಳಲ್ಲೂ ಗೇಟ್ ಅಳವಡಿಸುವ ಕಾರ್ಯ ಪೂರ್ಣಗೊಳಿಸಲಾಗುತ್ತದೆ. ಅದರಿಂದ ಮುಂದಿನ ಮಳೆಗಾಲದಲ್ಲಿ ಕೆರೆಗಳಿಂದ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗುವುದನ್ನು ತಡೆಯಲು ನಿರ್ಧರಿಸಲಾಗಿದೆ.
ನಗರದಲ್ಲಿ ಸೃಷ್ಟಿಯಾಗುತ್ತಿರುವ ಪ್ರವಾಹ ಪರಿಸ್ಥಿತಿ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲಾಗುತ್ತಿದೆ. ಪ್ರಮುಖ ವಾಗಿ ಮಳೆ ಬಂದಾಗ ಕೆರೆಗಳಿಂದ ರಾಜಕಾಲುವೆಗೆ ಹರಿವ ನೀರಿನ ಪ್ರಮಾಣ ಹೆಚ್ಚಾಗುವುದರಿಂದಲೂ ಪ್ರವಾಹ ಸೃಷ್ಟಿಗೆ ಕಾರಣವಾಗಿದೆ. ಹೀಗಾಗಿ ಮಳೆ ಬಂದಾಗ ಕೆರೆಗಳಿಂದ ನೀರು ಹೊರಗೆ ಹರಿಯದಂತೆ ತಡೆಯಲು ಗೇಟ್‌ಗಳನ್ನು ಅಳವಡಿಸಲು ಯೋಜನೆ ರೂಪಿಸಲಾಗಿದೆ. ಶೀಘ್ರದಲ್ಲಿ ಅದನ್ನು ಜಾರಿ ಮಾಡಿ, ಮುಂದಿನ ವರ್ಷದಿಂದ ಪ್ರವಾಹ ನಿಯಂತ್ರಿಸಲಾಗುವುದು. ● ಶಶಿಕುಮಾರ್, ಬಿಬಿಎಂಪಿ ಮುಖ್ಯ ಎಂಜಿನಿಯರ್ (ಕೆರೆ ವಿಭಾಗ)
● ಗಿರೀಶ್ ಗರಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.