ಮುಸ್ಲಿಮರಿಗಾಗಿ ಪ್ರತ್ಯೇಕ ಕಾಲೇಜ್ ಸರಿಯಲ್ಲ: ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ
ರೌಡಿಗಳನ್ನು ಸೇರಿಸಿಕೊಳ್ಳುವ ವಿಚಾರ ಅಷ್ಟು ಪ್ರಾಮುಖ್ಯತೆ ಪಡೆಯುವುದಿಲ್ಲ...
Team Udayavani, Dec 2, 2022, 3:00 PM IST
ಕಲಬುರಗಿ: ರಾಜ್ಯದಲ್ಲಿ ಎಲ್ಲ ವರ್ಗಗಳ ಹಿತಕ್ಕಾಗಿ ವಿದ್ಯಾದಾನವನ್ನು ಮಾಡುವ ನಿಟ್ಟಿನಲ್ಲಿ ಸರಕಾರ ಆಲೋಚನೆ ಮಾಡಬೇಕು. ಹಿಂದೂಗಳಿಗೊಂದು, ಮುಸ್ಲಿಮರಿಗಾಗಿ ಪ್ರತ್ಯೇಕವಾಗಿ ಕಾಲೇಜು ಮಾಡ್ತಾರೇನು? ಬಿಜೆಪಿಗರ ತಲೆ ಸರಿಯಾಗಿ ಓಡುತ್ತಿಲ್ಲ, ವಕ್ಫ್ ಬೋರ್ಡ್ ತೀರ್ಮಾನ ಒಳ್ಳೆಯ ಬೆಳೆವಣಿಗೆಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಕ್ಫ್ ಬೋರ್ಡ್ ನಿರ್ಧಾರದ ಹಿಂದೆ ಸರಕಾರದ ದೂರದೃಷ್ಟಿ ಇದೆ. ಇದರಿಂದ ಎರಡೂ ವ್ಯವಸ್ಥೆಗಳನ್ನು ಹುಟ್ಟುಹಾಕುವ ಆ ಮೂಲಕ ಶಿಕ್ಷಣದ ಹಕ್ಕಿನಿಂದ ಕೆಲವು ವರ್ಗವನ್ನು ವಂಚಿಸುವ ಕೆಲಸ ನಡೆದಿದೆ ಎಂದರು. ಅ. 5 ತಿಂಗಳಲ್ಲಿ ಬಿಜೆಪಿ ಸರಕಾರ ಬಿದ್ದು ಹೋಗುತ್ತದೆ. ಇವರೇನು ಕಾಲೇಜು ಆರಂಭಿಸುತ್ತಾರೆ. ನಾವು ಅಧಿಕಾರಕ್ಕೆ ಬಂದ ಬಳಿಕ ಕಾಲೇಜು ಆರಂಭಿಸುತ್ತೇವೆ. ಆದರೆ, ಅದು ಎಲ್ಲ ವರ್ಗಗಳಿಗೆ, ಬಡ ಮಕ್ಕಳಿಗೆ ಶಿಕ್ಷಣ ನೀಡುವಂತಹ ಕಾಲೇಜು ಆಗಿರಲಿದೆ ಎಂದ ಅವರು, ಹೋಬಳಿ ಮಟ್ಟಕ್ಕೆ ಒಂದು ಕಾಲೇಜು ಮಾಡುವುದು ನಮ್ಮ ಉದ್ದೇಶವಾಗಿದೆ ಎಂದರು.
ಬಿಜೆಪಿ, ಕಾಂಗ್ರೆಸ್ ನಲ್ಲಿ ಸಭ್ಯರಾರು?
ನೋಡ್ರಿ… ಬಿಜೆಪಿಯಲ್ಲಿ ರೌಡಿಗಳನ್ನು ಸೇರಿಸಿಕೊಳ್ಳುವ ವಿಚಾರದಲ್ಲಿ ಏನು ಬೇಕಾದರೂ ತೀರ್ಮಾನ ಕೈಗೊಂಡು ಸಾಯಲಿ, ಅವರಲ್ಲಿ ಈಗ ಇದ್ದವರಲ್ಲಿ ಯಾರು ಸಭ್ಯರಿದ್ದಾರೆ ಹೇಳಿ. ಕಾಂಗ್ರೆಸ್‌ನಲ್ಲೂ ಇದೇ ಸ್ಥಿತಿ ಇದೆ. ಅಲ್ಲೂ ಸಭ್ಯರು ಸಿಗುತ್ತಿಲ್ಲ ಹೀಗಾಗಿ ಈ ವಿಚಾರ ಅಷ್ಟು ಪ್ರಾಮುಖ್ಯತೆ
ಪಡೆಯುವುದಿಲ್ಲ. ಮುಂದೆ ಇದರ ವಿರುದ್ಧ ಜನರೇ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಡಿಸೆಂಬರ್ ನಲ್ಲಿ ಘೋಷಣೆ
ನಮ್ಮ ಪಕ್ಷದಲ್ಲಿ ಡಿಸೆಂಬರ್‌ನಲ್ಲಿ ಮೊದಲ ಹಂತದ ಟಿಕೆಟ್ ಘೋಷಣೆಯಾಗಲಿದೆ. ಎಲ್ಲ ತೀರ್ಮಾನಗಳನ್ನು ದೇವೇಗೌಡರು ಕೈಗೊಳ್ಳುತ್ತಾರೆ. ಅವರು ಹಿರಿಯ ಯಜಮಾನರಿದ್ದಾರೆ. ಅವರ ತೀರ್ಮಾನಗಳೇ ಅಂತಿಮ. ಅವರು ಸಾಕಷ್ಟು ಅನುಭವ ಮತ್ತು ದೂರದೃಷ್ಟಿ ಹೊಂದಿದ್ದಾರೆ. ಮುಖ್ಯ ಮಂತ್ರಿ ಅಭ್ಯರ್ಥಿ ಕುಮಾರಸ್ವಾಮಿ ಅವರೇ, ಅದರಲ್ಲಿ ಬದಲಿಲ್ಲ. ಇನ್ನುಳಿದಂತೆ ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ನನ್ನ ಪುತ್ರ ಹುಮನಬಾದ್‌ನಲ್ಲಿ ಸ್ಪರ್ಧಿಸುವ ಕುರಿತು ಪಕ್ಷವೇ ತೀರ್ಮಾನಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.