ವಿಜ್ಞಾನ ನಾಟಕ ಸ್ಪರ್ಧೆ: ಶಿರಸಿ ಮಾರಿಕಾಂಬಾ ಪ್ರೌಢ ಶಾಲೆ ರಾಷ್ಟ್ರಮಟ್ಟಕ್ಕೆ
ಕೇವಲ 9 ವಿದ್ಯಾರ್ಥಿಗಳು 29 ಪಾತ್ರ ನಿರ್ವಹಿಸಿದ ''ಒಂದು ಲಸಿಕೆಯ ಕಥೆ''
Team Udayavani, Dec 2, 2022, 7:29 PM IST
ಶಿರಸಿ: ಬೆಂಗಳೂರಿನ ನಡೆದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಕರ್ನಾಟಕ ಪ್ರತಿನಿಧಿಸಿದ್ದ ಸರಕಾರಿ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ತೆಲಂಗಾಣ, ಕೇರಳ, ತಮಿಳುನಾಡು, ಆಂದ್ರಪ್ರದೇಶ, ಕರ್ನಾಟಕ, ಪುದುಚೆರಿ ಸೇರಿದಂತೆ ಏಳು ರಾಜ್ಯಗಳಿಂದ ಪ್ರಬಲ ಪೈಪೋಟಿ ನೀಡಿದ್ದರು. ಸ್ಪರ್ಧೆಯಲ್ಲಿ ಕೇರಳ ಪ್ರಥಮ ಸ್ಥಾನ ಪಡೆದುಕೊಂಡರೆ ಕರ್ನಾಟಕದ ಪ್ರತಿನಿಧಿಯಲ್ಲಿ ಒಂದಾಗಿದ್ದ ಶಿರಸಿ ಮಾರಿಕಾಂಬಾ ಸರಕಾರಿ ಪ್ರೌಢಶಾಲೆ ಮಕ್ಕಳು ದ್ವಿತೀಯ ಸ್ಥಾನ ಪಡೆದಿದ್ದಾರೆ.
ಕೇವಲ 9 ವಿದ್ಯಾರ್ಥಿಗಳು 29 ಪಾತ್ರ ನಿರ್ವಹಿಸಿದ ಒಂದು ಲಸಿಕೆಯ ಕಥೆ ನಾಟಕವನ್ನು ರಾಜ್ಯ ಪ್ರಶಸ್ತಿ ಪುರಸ್ಕೃತ ಕನ್ನಡ ಶಿಕ್ಷಕ ನಾರಾಯಣ ಭಾಗ್ವತ್ ನಿರ್ದೇಶಿಸಿದ್ದರು. ವಿಜ್ಞಾನ ಶಿಕ್ಷಕಿ ಜಯಲಕ್ಷ್ಮಿ ಗುನಗಾ ನಿರ್ವಹಿಸಿದ್ದರು.
ಸಾಂಕ್ರಾಮಿಕ ರೋಗಗಳ ವಿರುದ್ಧದಲ್ಲಿ ಕೆಲಸ ಮಾಡುವ ಲಸಿಕೆಗಳ ಹುಟ್ಟು, ಅವುಗಳ ಬೆಳವಣಿಗೆ, ಜನರ ವಿರೋಧ ಇದ್ದರೂ ಅದನ್ನು ಎದುರಿಸಿ ಜನತೆಯ ಆರೋಗ್ಯ ರಕ್ಷಣೆಗೆ ಕಟಿಬದ್ಧರಾದ ವಿಜ್ಞಾನಿಗಳು ಹಾಗೂ ಅವರು ನೀಡಿದ ಕೊಡುಗೆಯ ಕುರಿತಾದ ಚಿತ್ರಣವನ್ನು ಹೊಂದಿದ ಒಂದು ಲಸಿಕೆಯ ಕಥೆ ಮೂವತ್ತು ನಿಮಿಷದಲ್ಲಿ ಶತಮಾನದ ಒಟ್ಟೂ ಸಾಧನೆ ಬಿಚ್ಚಿಡುವ ನಾಟಕ ಆಗಿದೆ.
ಇಡೀ ನಾಟಕದಲ್ಲಿ ವಿಜ್ಞಾನದ ಸಂಗತಿಯನ್ನು ಮನೋಜ್ಞವಾಗಿ ತೆರೆದಿಟ್ಟ ಬಗೆ ಹಾಗೂ ವಿದ್ಯಾರ್ಥಿಗಳ ಭಾವಪೂರ್ಣ ಲವಲವಿಕೆಯ ಅಭಿನಯವು ಈ ಗೆಲುವು ತಂದುಕೊಟ್ಟಿದೆ.
ಪಾತ್ರಧಾರಿಗಳಾಗಿ ತುಳಸಿ ಹೆಗಡೆ, ಸ್ಪಂದನಾ ಭಟ್ಟ, ಜಯಶ್ರೀ ಭಟ್ಟ, ನವ್ಯಾ ಹೆಗಡೆ, ಶ್ರೀಜಾ ಭಟ್ಟ, ಮಾನ್ಯ ಹೆಗಡೆ, ಕಿಶನ್ ಕುಮಾರ ಹೆಗಡೆ , ದರ್ಶನ್ ಎಸ್. ಭಟ್, ಪ್ರತ್ವಿಕ್ ಮೋಹನದಾಸ ನಾಯಕ ಅಚ್ಚುಕಟ್ಟಾಗಿ ನಿರ್ವಹಿಸಿ ನಾಟಕ ಪರಿಣಾಮಕಾರಿಯಾಗಿಸಿದರು. ಅತ್ಯುತ್ತಮ ಸ್ಕ್ರಿಪ್ಟ್ ಪ್ರಶಸ್ತಿ ಬಹುಮಾನ ಶಿಕ್ಷಕಿ ಜಯಲಕ್ಷ್ಮೀ ಗುನಗಾ ಅವರಿಗೆ ಲಭಿಸಿದೆ. ನಾಗರಾಜ ಭಂಡಾರಿ ಬೆಳಕಿನ ಸಹಕಾರ ನೀಡಿದರು.
ಭಾರತ ದೇಶ ಮಟ್ಟಕ್ಕೆ ಆಯ್ಕೆ ಆದ ಮಾರಿಕಾಂಬಾದ ವಿದ್ಯಾರ್ಥಿ ಹಾಗೂ ಶಿಕ್ಷಕರನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ಆರ್.ಡಿ.ಹೆಗಡೆ, ಡಿಡಿಪಿಐ ಬಸವರಾಜು, ಬಿಇಓ ಎಂ.ಎಸ್.ಹೆಗಡೆ, ಮಾರಿಕಾಂಬಾ ಪ್ರೌಢಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಆರ್.ವಿ.ನಾಯ್ಕ, ಶಾಲಾಭಿವೃದ್ದಿ ಸಮಿತಿ ಪದಾಧಿಕಾರಿಗಳು, ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ
Madanthyar: ಬಾಲಕಿಯರ ಹಾಸ್ಟೆಲ್ ಕಟ್ಟಡ ಅನಾಥ!
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.