ಧೋನಿ ಬಳಿಕ ಸಿಎಸ್ ಕೆಗೆ ಯಾರು ನಾಯಕ?: ಗುಟ್ಟು ಬಿಚ್ಚಿಟ್ಟ ಕೋಚ್ ಮೈಕ್ ಹಸ್ಸಿ

Team Udayavani, Dec 3, 2022, 1:20 PM IST

Michael Hussey spoke about next captain of CSK

ಚೆನ್ನೈ; ಸಂಪೂರ್ಣವಾಗಿ ಭಾರತದಲ್ಲಿ ನಡೆಯಲಿರುವ 16ನೇ ಆವೃತ್ತಿಯ ಇಂಡಿಯನ್ ಪ್ರೀಮ್ ಲೀಗ್‌ (ಐಪಿಎಲ್) ನಲ್ಲಿಯೂ ಮಹೇಂದ್ರ ಸಿಂಗ್ ಧೋನಿ ಅವರೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ವಹಿಸುವುದು ಬಹುತೇಕ ಖಚಿತವಾಗಿದೆ. ಆದರೆ 41 ವರ್ಷದ ಧೋನಿ ನಂತರ ಐಪಿಎಲ್ ನಲ್ಲಿ ಮುಂದುವರಿಯುವುದು ಅನುಮಾನ. ಹೀಗಾಗಿ ಮುಂದಿನ ನಾಯಕನ ಹುಡುಕಾಟದಲ್ಲಿದೆ ಸಿಎಸ್ ಕೆ ಫ್ರಾಂಚೈಸಿ.

ಕಳೆದ ಸೀಸನ್ ನಲ್ಲೇ ಸಿಎಸ್ ಕೆ ನಾಯಕನ ಬದಲಾವಣೆ ಮಾಡಿತ್ತು. ರವೀಂದ್ರ ಜಡೇಜಾ ಅವರು ನಾಯಕರಾಗಿ ಆಯ್ಕೆಯಾಗಿದ್ದರು. ಆದರೆ ಆರಂಭಿಕ ಕೆಲವು ಪಂದ್ಯಗಳಲ್ಲಿನ ಸೋಲಿನ ಬಳಿಕ ಅವರು ಹುದ್ದೆ ತೊರೆದಿದ್ದರು.

ಇದೀಗ ಧೋನಿ ಉತ್ತರಾಧಿಕಾರಿಯನ್ನು ಸಿಎಸ್ ಕೆ ಹುಡುಕುತ್ತಿದೆ. ಕಳೆದ ಕೆಲವು ಋತುಗಳಲ್ಲಿ ತಂಡಕ್ಕಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಆ ಆಟಗಾರರ ಗುಂಪಿನಿಂದ ಯಾರನ್ನಾದರೂ ಕಂಡುಹಿಡಿಯಬೇಕಾಗಿದೆ.

ಅಂತಹ ಒಂದು ಹೆಸರು ಯುವ ಆಟಗಾರ ಋತುರಾಜ್ ಗಾಯಕ್ವಾಡ್. ಅನೇಕ ಬ್ಯಾಟಿಂಗ್ ದಾಖಲೆಗಳನ್ನು ಮುರಿಯುವ ಜತೆಗೆ ತಮ್ಮ ದೇಶೀಯ ತಂಡವಾದ ಮಹಾರಾಷ್ಟ್ರವನ್ನು ವಿಜಯ್ ಹಜಾರೆ ಟ್ರೋಫಿ 2022 ರ ಫೈನಲ್‌ ಗೆ ಮುನ್ನಡೆಸಿದ್ದರು. ಉತ್ತಮ ಬ್ಯಾಟರ್ ಆಗಿರುವ ಗಾಯಕ್ವಾಡ್ ಶಾಂತ ಸ್ವಭಾವದವರು. ಭಾರತೀಯ ಕ್ರಿಕೆಟ್‌ ನ ಮುಂದಿನ ದೊಡ್ಡ ಆಸ್ತಿ ಎಂದೇ ಬಿಂಬಿಸಲಾಗಿರುವ ಗಾಯಕ್ವಾಡ್ ಅವರು ಮುಂದಿನ ಸಿಎಸ್ ಕೆ ನಾಯಕ ಆಗಬಹುದು ಎಂದು ಮಾಜಿ ಸಿಎಸ್ ಕೆ ಬ್ಯಾಟರ್ ಮತ್ತು ಪ್ರಸ್ತುತ ಸೂಪರ್ ಕಿಂಗ್ಸ್ ಕೋಚ್ ಮೈಕೆಲ್ ಹಸ್ಸಿ ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ:ಮೊದಲು ಬೆಳಗಾವಿ-ಬೆಂಗಳೂರಿನಲ್ಲಿ ಮಹಾರಾಷ್ಟ್ರ ಭವನ ನಿರ್ಮಾಣಕ್ಕೆ ಜಾಗ ಕೊಡಿ: ಸಿಎಂಗೆ ರಾವತ್ ತಿರುಗೇಟು

“ಸಿಎಸ್ ಕೆ ಭವಿಷ್ಯದ ಯೋಜನೆಗಳೇನು ಎಂದು ನನಗೆ ಖಚಿತವಾಗಗಿ ತಿಳಿದಿಲ್ಲ, ಆದರೆ ಧೋನಿಯಂತೆ ಗಾಯಕ್ವಾಡ್ ತುಂಬಾ ಶಾಂತ ಸ್ವಭಾವದವರು. ಒತ್ತಡ ನಿಭಾಯಿಸುವ ಸಂದರ್ಭ ಬಂದಾಗ ಅವರು ತುಂಬಾ ಶಾಂತವಾಗಿರುತ್ತಾರೆ. ಆಟವನ್ನು ತುಂಬಾ ಚೆನ್ನಾಗಿ ಗಮನಿಸುತ್ತಾರೆ. ಸ್ವಭಾವ, ಪಾತ್ರ ಮತ್ತು ವ್ಯಕ್ತಿತ್ವದಿಂದಾಗಿ ಜನರು ಅವನತ್ತ ಆಕರ್ಷಿತರಾಗುತ್ತಾರೆ ಎಂದು ನಾನು ಭಾವಿಸುತ್ತೇನೆ. ಋತುರಾಜ್ ಕೆಲವು ಅತ್ಯುತ್ತಮ ನಾಯಕತ್ವದ ಗುಣಗಳನ್ನು ಹೊಂದಿದ್ದಾರೆ” ಎಂದು ಹಸ್ಸಿ ಹೇಳಿದರು.

ಟಾಪ್ ನ್ಯೂಸ್

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

2-r-ashwin

Ravichandran Ashwin: ಯಾವುದೇ ಪಶ್ಚಾತ್ತಾಪವಿಲ್ಲ: ಅಶ್ವಿ‌ನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.