ಇಂದಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು: ಕಾಂಗ್ರೆಸ್ ಟ್ವೀಟ್ ಗಳ ಅಸ್ತ್ರ
ಬೊಮ್ಮಾಯಿಯವರೇ ಬಿಜೆಪಿ ಸೇರುವ ಎಲ್ಲಾ ರೌಡಿಗಳ ಕೇಸ್ಗಳನ್ನೂ ಮನ್ನಾ ಮಾಡುವಿರಾ?
Team Udayavani, Dec 3, 2022, 4:15 PM IST
ಬೆಂಗಳೂರು : ರೌಡಿ ಶೀಟರ್ ಗಳಲ್ಲಿ ಹೆಸರಿಸಲಾಗಿದ್ದ ಹಲವರು ಬಿಜೆಪಿ ಸೇರ್ಪಡೆಯಾಗಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಬಿಜೆಪಿ ವಿರುದ್ಧ ಹೋರಾಟಕ್ಕೆ ಹೊಸ ಅಸ್ತ್ರವನ್ನಾಗಿ ಮಾಡಿದ್ದು, ಸರಣಿ ಟ್ವೀಟ್ ಗಳ ಮೂಲಕ ಆಕ್ರೋಶ ಹೊರ ಹಾಕಿ ಪ್ರಶ್ನೆಗಳ ಮಳೆ ಸುರಿಸಿದೆ.
”ಕೋಮು ರಾಜಕಾರಣ ಸಾಲದು ಎಂಬಂತೆ ರೌಡಿ ರಾಜಕೀಯ ಮಾಡಲು ಹೊರಟಿದೆ ಬಿಜೆಪಿ.ರಾಮಾರಾಜ್ಯದ ಹೆಸರು ಹೇಳುತ್ತಿದ್ದ ಬಿಜೆಪಿ ನಾಯಕರು ರೌಡಿರಾಜ್ಯ ಮಾಡಲು ಹೊರಟಿದ್ದಾರೆ.ಅಪ್ಪು ಎಂಬ ರೌಡಿ ಮೇಲಿದ್ದ ರೌಡಿ ಶೀಟ್ ತೆಗೆಸಿ ರಾಜಕಾರಿಣಿಯ ಮುಖವಾಡ ತೋಡಿಸಿದ್ದೇಕೆ ಬೊಮ್ಮಾಯಿ ಅವರೇ? ಬಿಜೆಪಿ ಸೇರುವ ಎಲ್ಲಾ ರೌಡಿಗಳ ಕೇಸ್ಗಳನ್ನೂ ಮನ್ನಾ ಮಾಡುವಿರಾ?” ಎಂದು ಪ್ರಶ್ನಿಸಿದೆ.
”ಸದ್ದಿಲ್ಲದೆ ಬಿಜೆಪಿಯ ರೌಡಿ ಮೋರ್ಚಾ ರೂಪುಗೊಳ್ಳುತ್ತಿದೆ, ಜೈಲಿನಲ್ಲಿರಬೇಕಾದವರು ಬಿಜೆಪಿ ಕಚೇರಿಯಲ್ಲಿದ್ದಾರೆ.ರೌಡಿಗಳಿಗೆ ಪ್ರೋತ್ಸಾಹಿಸುವುದಿಲ್ಲ ಎಂದು ಯೂಟರ್ನ್ ಸ್ಟೇಟ್ಮೆಂಟ್ ನೀಡಿದ್ದ ಬೊಮ್ಮಾಯಿ ಅವರೇ,ಆನೇಕಲ್ ಪುರಸಭೆಗೆ ರೌಡಿ ಶೀಟರ್ನನ್ನು ನಿಮ್ಮದೇ ಸರಕಾರ ನಾಮನಿರ್ದೇಶನ ಮಾಡಿರುವುದೇಕೆ? ದಮ್ಮು ತಾಕತ್ತಿದ್ದರೆ ಉತ್ತರಿಸಿ” ಎಂದು ಪ್ರಶ್ನಿಸಿದೆ.
”ಸಿಎಂ ಬೊಮ್ಮಾಯಿಯವರು ಧಮ್, ತಾಕತ್ತು ಇದ್ರೆ ಬನ್ನಿ ಎಂದು ರೌಡಿಸಂ ಭಾಷೆಯಲ್ಲಿ ಸವಾಲು ಹಾಕಿದ್ದರ ಹಿಂದೆ ನೈಜ ರೌಡಿಸಂ ಇದೆ ಎಂದು ಈಗ ಬೆಳಕಿಗೆ ಬರುತ್ತಿದೆ. ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ ಬೊಮ್ಮಾಯಿ ಅವರೇ? ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ, ಬೊಮ್ಮಾಯಿಯವರು ರೌಡಿಗಳಿಗೆ ಮಹಾಗುರುವಿನಂತೆ ಆಗಿದ್ದಾರೆ.” ಎಂದು ಕುರುಕಿದೆ.
”ರೌಡಿಗಳನ್ನು ಬಿಜೆಪಿ ಸೇರಿಸಿಕೊಳ್ಳುವುದಿಲ್ಲ ಎನ್ನುತ್ತಿರುವ ಬಿಜೆಪಿ ನಾಯಕರು ಮತ್ತೊಂದೆಡೆ ರೌಡಿಗಳ ಪಕ್ಷ ಸೇರ್ಪಡೆ ಅಭಿಯಾನವನ್ನೇ ನಡೆಸುತ್ತಿದೆ. ಬೆತ್ತನಗೆರೆ ಶಂಕರ ಎಂಬ ರೌಡಿ ಶೀಟರ್ನನ್ನು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡದ್ದಾರೆ ಸಂಸದ ಪ್ರತಾಪ್ ಸಿಂಹ.ಬೊಮ್ಮಾಯಿ ಅವರೇ, ರೌಡಿರಾಜ್ಯ ಕಟ್ಟಲು ಹೊರಟಿದ್ದೀರಾ? ಇದೇನಾ ನಿಮ್ಮ ಸಂಸ್ಕೃತಿ” ಎಂದು ಪ್ರಶ್ನಿಸಿದೆ.
”ಹಿಂದೆ ರೌಡಿಗಳನ್ನು ಕಂಡರೆ ಪೊಲೀಸರು ಒದ್ದು ಎಳೆದು ತರುತ್ತಿದ್ದರು,ಈಗ ಬಿಜೆಪಿಯ ರೌಡಿ ರಾಜಕೀಯದಿಂದಾಗಿ ಅದೇ ರೌಡಿಗಳಿಗೆ ಪೊಲೀಸರು ಸೆಲ್ಯೂಟ್ ಹೊಡೆಯುವಂತಾಗಿದೆ. ರೌಡಿಗಳ ವಿರುದ್ಧ ಕಾರ್ಯಾಚರಣೆ ನಡೆಸುವ ಪೊಲೀಸರ ನೈತಿಕ ಸ್ಥೈರ್ಯವನ್ನೇ ಬಿಜೆಪಿ ಕಿತ್ತುಕೊಂಡಿದೆ.ಇಂದಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು” ಎಂಬಂತಾಗಿದೆ. ಎಂದು ಲೇವಡಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.