ಮಹಾ ಸಚಿವರಿಗೆ ಬೆಳಗಾವಿಗೆ ಪ್ರವೇಶ ನೀಡದಂತೆ ಒತ್ತಾಯ
ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ನಿವೃತ್ತ ನ್ಯಾ| ಶಿವರಾಜ ಪಾಟೀಲ ಅವರನ್ನು ಸರ್ಕಾರ ನೇಮಿಸಿದೆ
Team Udayavani, Dec 3, 2022, 6:30 PM IST
ಬೆಳಗಾವಿ: ಮಹಾರಾಷ್ಟ್ರದ ಇಬ್ಬರು ಗಡಿ ಉಸ್ತುವಾರಿ ಸಚಿವರು ಡಿ. 6ರಂದು ಬೆಳಗಾವಿಗೆ ಭೇಟಿ ನೀಡುತ್ತಿದ್ದು, ಇವರಿಗೆ ಪ್ರವೇಶ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ನಿವೃತ್ತ ನ್ಯಾ| ಶಿವರಾಜ ಪಾಟೀಲ ಅವರನ್ನು ಸರ್ಕಾರ ನೇಮಿಸಿದೆ. ಈ ಕಚೇರಿಯನ್ನು ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಿದರೆ ಮಾತ್ರ ಆಯೋಗದ ಪ್ರಯೋಜನ ಗಡಿ ಭಾಗದ ಜನತೆಗೆ ಲಭಿಸುತ್ತದೆ. ಕಳೆದ ಒಂದೂವರೆ ವರ್ಷದ ಹಿಂದೆ ತಾವು ಅಧಿಕಾರಕ್ಕೆ ಬಂದ ಕೂಡಲೇ ಸುವರ್ಣ ವಿಧಾನಸೌಧವನ್ನು ಸಕ್ರಿಯಗೊಳಿಸುವುದಾಗಿ ಭರವಸೆ ನೀಡಿದ್ದೀರಿ.
ಆದರೆ ಇಲ್ಲಿಯವರೆಗೆ ಕೇವಲ ಮಾಹಿತಿ ಹಕ್ಕು ಆಯೋಗದ ಕಚೇರಿಯನ್ನು ಹೊರತುಪಡಿಸಿದರೆ ಇನ್ನುಳಿದ ಯಾವುದೇ ಕಚೇರಿಯನ್ನು ಸ್ಥಳಾಂತರ ಮಾಡಿಲ್ಲ. ಅಧಿವೇಶನ ಮುನ್ನಾದಿನ ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು. ಮಹಾರಾಷ್ಟ್ರದ ಕನ್ನಡ ಪ್ರದೇಶ ಜತ್ ಸೇರಿದಂತೆ ಇತರೆ ಹಳ್ಳಿಗಳನ್ನು ಕರ್ನಾಟಕಕ್ಕೆ ಸೇರಿಸಲು ಪ್ರಯತ್ನಿಸುವುದಾಗಿ ಹೇಳಿದ್ದು ಸ್ವಾಗತಾರ್ಹ. ಸಚಿವ ಸಂಪುಟದ ಇಬ್ಬರು ಹಿರಿಯ ಸಚಿವರನ್ನು ಹಾಗೂ ಹಿರಿಯ
ಅ ಧಿಕಾರಿಗಳನ್ನು ಜತ್ ಪ್ರದೇಶಕ್ಕೆ ಕಳುಹಿಸಿ ಅಲ್ಲಿನ ಕನ್ನಡಿಗರಿಗೆ ಧೈರ್ಯ ತುಂಬಬೇಕು.
50 ವರ್ಷಗಳಿಂದ ಗಡಿಭಾಗದಲ್ಲಿ ಸತತವಾಗಿ ನಾಡದ್ರೋಹಿ ಚಟುವಟಿಕೆಯಲ್ಲಿ ತೊಡಗಿರುವ ಎಂಇಎಸ್ ಹಾಗೂ ಶಿವಸೇನೆಯನ್ನು ನಿಷೇಧ ಮಾಡಬೇಕೆಂದು ಒತ್ತಾಯಿಸಿದರು. ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಮುಖಂಡರಾದ ಮಹಾದೇವ ತಳವಾರ, ಸುರೇಶ ಗವನ್ನವರ, ಗಣೇಶ ರೋಕಡೆ, ರಮೇಶ ಯರಗಣ್ಣವರ, ವಿನಾಯಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.