ಕಲ್ಲಿದ್ದಲು ಕ್ಷೇತ್ರದ ಭವಿಷ್ಯದ ಬಗ್ಗೆ ಆತಂಕ ಬೇಡ: ಸಚಿವ ಪ್ರಹ್ಲಾದ ಜೋಷಿ

ಪ್ರಸಕ್ತ ವರ್ಷ 900 ಮಿಲಿಯನ್‌ ಟನ್‌ ಕಲ್ಲಿದ್ದಲು ಉತ್ಪಾದನೆ ಗುರಿ

Team Udayavani, Dec 4, 2022, 6:20 AM IST

ಕಲ್ಲಿದ್ದಲು ಕ್ಷೇತ್ರದ ಭವಿಷ್ಯದ ಬಗ್ಗೆ ಆತಂಕ ಬೇಡ: ಸಚಿವ ಪ್ರಹ್ಲಾದ ಜೋಷಿ

ಬೆಂಗಳೂರು: ದೇಶದ ಕಲ್ಲಿದ್ದಲು ಕ್ಷೇತ್ರದ ಭವಿಷ್ಯದ ಬಗ್ಗೆ ಆತಂಕ ಪಡಬೇಕಾಗಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ.

ಖಾಸಗಿ ಹೊಟೇಲ್‌ನಲ್ಲಿ ಶನಿವಾರ ಜರಗಿದ ಕಲ್ಲಿದ್ದಲು ಗಣಿ ಹೂಡಿಕೆ ದಾರರ ಸಮಾವೇಶದಲ್ಲಿ ಮಾತನಾ ಡಿದ ಅವರು, ಭಾರತ ಹೆಚ್ಚಿನ ಪ್ರಮಾ ಣದಲ್ಲಿ ಕಲ್ಲಿದ್ದಲನ್ನು ಉತ್ಪಾದಿಸುವ ರಾಷ್ಟ್ರಗಳಲ್ಲಿ ಒಂದಾಗಿದೆ. ಜತೆಗೆ ಅತಿ ಹೆಚ್ಚಿನ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುವ ದೇಶವೂ ಆಗಿದೆ. ಹೀಗಾಗಿ ದೇಶದ ಕಲ್ಲಿದ್ದಲಿನ ಭವಿಷ್ಯದ ಬಗ್ಗೆ ಚಿಂತೆ ಆಗತ್ಯವಿಲ್ಲ ಎಂದರು.

ದೇಶದಲ್ಲಿ 2014ರಲ್ಲಿ ಸುಮಾರು 572 ಮಿಲಿಯನ್‌ ಟನ್‌ ಕಲ್ಲಿದ್ದಲನ್ನು ಉತ್ಪಾದಿಸಿ ರವಾನೆ ಮಾಡಲಾಗಿದೆ. ಕಳೆದ ವರ್ಷ 817 ಮಿಲಿಯನ್‌ ಟನ್‌ ಉತ್ಪಾದನೆ ಮಾಡಲಾಗಿದ್ದು, ಈ ವರ್ಷ 900 ಮಿಲಿಯನ್‌ ಟನ್‌ ಉತ್ಪಾದನೆಯ ಗುರಿ ಹೊಂದಲಾಗಿದೆ. ಮುಂದಿನ ವರ್ಷ 1000 ಮಿಲಿಯನ್‌ ಟನ್‌ನಷ್ಟು ಕಲ್ಲಿದ್ದಲು ಉತ್ಪಾದಿಸುವ ಆಲೋಚನೆ ಇದೆ ಎಂದರು.

ಕಲ್ಲಿದ್ದಲು ಕ್ಷೇತ್ರದ ಹೂಡಿಕೆದಾರರಿಗೆ ಅನುಕೂಲವಾಗುವ ರೀತಿಯಲ್ಲಿ ಕೇಂದ್ರ ಸರಕಾರ ಕಾನೂನುಗಳನ್ನು ಸರಳಗೊಳಿಸಿದೆ. ಪ್ರಧಾನಿ ಮೋದಿ ಆಡಳಿತ ಅವಧಿಯಲ್ಲಿ ಸಾಕಷ್ಟು ಬದಲಾವಣೆ ತರಲಾಗಿದೆ. ಈಗಾಗಲೇ ಇಡೀ ದೇಶದಲ್ಲಿ 67 ಗಣಿ ಕಂಪೆನಿಗಳಿಗೆ ಹರಾಜು ಮಾಡಲಾಗಿದೆ ಎಂದರು.

ಒಡಿಶಾ ಸರಕಾರ ಕಲ್ಲಿದಲ್ಲು ಕ್ಷೇತ್ರದ ಸುಧಾರಣೆಗೆ ಬಹಳಷ್ಟು ಕಾಳಜಿ ತೋರಿದೆ. ಪ್ರಧಾನಿ ಸಲಹೆ ಮೇರೆಗೆ ಕಲ್ಲಿದ್ದಲು ಕ್ಷೇತ್ರ ನಷ್ಟ ತಗ್ಗಿಸ ಲಾಗಿದೆ. ಒಡಿಶಾ ಸರಕಾರ ಈ ವಿಚಾರದಲ್ಲಿ ಬಹಳ ಬದಲಾವಣೆ ಯನ್ನು ಮಾಡಿಕೊಳ್ಳಲಾಗಿದ್ದು, 2014-15ರಲ್ಲಿ ಒಡಿಶಾ ಸರಕಾರ ಕಲ್ಲಿ ದ್ದಲು ಕ್ಷೇತ್ರದಲ್ಲಿ ಸುಮಾರು 5 ಕೋಟಿ ರೂ. ಆದಾಯ ಸಂಗ್ರಹಿಸಿತ್ತು. ಈಗ ಆ ಪ್ರಮಾಣ 15 ಕೋಟಿ ರೂ.ಗೆ ಏರಿಕೆಯಾಗಿದೆ ಎಂದರು.

ಟಾರ್ಗೆಟ್‌ ನೀಡಿದ ಪ್ರಧಾನಿ
ಪ್ರಧಾನಿ ನರೇಂದ್ರ ಮೋದಿ ಅವರು ಕಲ್ಲಿದ್ದಲು ಗಣಿಗಾರಿಕೆ ಬಗ್ಗೆ ಆಸಕ್ತಿ ತೋರಿದ್ದಾರೆ. 500 ಕಲ್ಲಿದ್ದಲು ಗಣಿಗಳ ವಾಣಿಜ್ಯ ಹರಾಜಿನ ಟಾರ್ಗೆಟ್‌ ನೀಡಿದ್ದಾರೆ. ನೀವು ದಿಲ್ಲಿಯಲ್ಲಿ ಕುಳಿತುಕೊಳ್ಳದೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರ ದೇಶದ ಆರ್ಥಿ ಕತೆಗೂ ಹೆಚ್ಚಿನ ಕೊಡುಗೆ ನೀಡಬೇಕು ಎಂಬು ವುದು ಪ್ರಧಾನಿ ಅವರ ಆಶಯವಾಗಿದೆ. ಈಗಾ ಗಲೇ ದೇಶದ ಜಿಡಿಪಿಗೆ ಕಲ್ಲಿದ್ದಲು ಕ್ಷೇತ್ರ ಶೇ.0.9 ರಷ್ಟು ಕೊಡುಗೆ ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಈ ಸಂಖ್ಯೆ ಶೇ 2.5ಕ್ಕೆ ಏರಿಕೆ ಆಗಬೇಕೆಂದು ತಾಕೀತು ಮಾಡಿದ್ದಾರೆ. 2040ರ ವೇಳೆಗೆ ಇಂಧನ ಬೇಡಿಕೆ ಮತ್ತಷ್ಟು ದ್ವಿಗುಣವಾಗುವ ಸಾಧ್ಯತೆಯಿದೆ. ನವೀಕರಣ ಇಂಧನ ಕ್ಷೇತ್ರದಿಂದ ಶೇ.50ರಷ್ಟು ವಿದ್ಯುತ್‌ ದೊರೆ ಯಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಿದ್ಯುತ್‌ಗೆ ಶೇ.25ರಷ್ಟು ಬೇಡಿಕೆಯಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಹಾಲಪ್ಪ ಆಚಾರ್‌, ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಇಲಾಖೆ ಕಾರ್ಯದರ್ಶಿ ಅಮೃತ್‌ಲಾಲ್‌ ಮೀನಾ ಮತ್ತಿತರರು ಉಪಸ್ಥಿತರಿದ್ದರು.

ಕಬ್ಬಿಣ ಉತ್ಪಾದನೆ ಕರ್ನಾಟಕ ಮುಂಚೂಣಿಯಾಗಲಿದೆ: ಸಿಎಂ
ರಾಜ್ಯದಲ್ಲಿ ಅತಿ ದೊಡ್ಡ ಕಬ್ಬಿಣದ ಕಾರ್ಖಾನೆ ಇದ್ದು, ಮುಂದಿನ ನಾಲ್ಕೈದು ವರ್ಷಗಳಲ್ಲಿ ವಿಶ್ವದಲ್ಲೇ ಅತಿ ದೊಡ್ಡ ಕಬ್ಬಿಣದ ಅದಿರು ಉತ್ಪಾದನೆ ಮಾಡುವ ರಾಜ್ಯವಾಗಿ ಕರ್ನಾಟಕ ಹೊರ ಹೊಮ್ಮಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು.

ಸಮಾವೇಶದಲ್ಲಿ ಮಾತನಾಡಿದ ಅವರು, ಬಂಡವಾಳ ಹೂಡಿಕೆದಾರರ ಅನುಕೂಲ ವಾಗುವಂತೆ ಸರಕಾರ ನೀತಿ ರೂಪಿಸಿದೆ. ಸರಕಾರ ಹೂಡಿಕೆದಾರರ ಹೆಗಲಿಗೆ ಹೆಗಲಾಗಿ ನಿಲ್ಲಲಿದೆ ಎಂಬ ಭರವಸೆ ನೀಡಿದರು.

ಬಳ್ಳಾರಿ ಭಾಗದಲ್ಲಿ ಲಭ್ಯವಿರುವ ಅದಿರಿನ ಬಗ್ಗೆ ಈ ಹಿಂದೆ ಉತ್ತಮ ಅಭಿಪ್ರಾಯ ಇರಲಿಲ್ಲ. ಆದರೆ ತಂತ್ರಜ್ಞಾನದ ಪ್ರಗತಿಯಿಂ ದಾಗಿ ಅಲ್ಲಿನ ಅದಿರಿನ ಮಹತ್ವ ಬೆಳಕಿಗೆ ಬಂದಿದ್ದು ಜಗತ್ತಲ್ಲೇ ಉತ್ಕೃಷ್ಟ ಅದಿರು ರಾಜ್ಯದಲ್ಲಿ ಲಭ್ಯವಾಗಿದೆ. ಹಾಗೆಯೇ ನಿಕ್ಕಲ್‌, ಕೋಬಾಲ್ಟ್, ಕ್ರೋಮೈಟ್‌ ಮತ್ತು ಚಿನ್ನದ ಗಣಿಗಾರಿಕೆಯಲ್ಲಿ ರಾಜ್ಯ ಇನ್ನಷ್ಟು ಪ್ರಗತಿ ಸಾಧಿಸಬೇಕಾಗಿದೆ ಎಂದರು.

ಈಗಾಗಲೇ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಬಂಡವಾಳ ಹೂಡಲು ಹೂಡಿಕೆದಾರರು ಮುಂದೆ ಬಂದಿದ್ದಾರೆ. ಕೋಲಾರದ ಕೆಜಿಎಫ್ನಲ್ಲಿ ಗಣಿಗಾರಿಕೆ ಪುನರ್‌ ಆರಂಭಿಸಲು ಹೂಡಿಕೆದಾರರು ಮುಂದೆ ಬಂದಿದ್ದು, ಇದರಿಂದ ಪ್ರತ್ಯಕ್ಷವಾಗಿ ಐದು ಸಾವಿರ ಮಂದಿಗೆ ಉದ್ಯೋಗ ಸಿಗಲಿದೆ ಎಂದರು.

ಕಬ್ಬಿಣ ಮತ್ತು ಉಕ್ಕಿನ ಗಣಿಗಾರಿಕೆ ವಿಚಾರ ದಲ್ಲಿ ಸುಪ್ರೀಂಕೋರ್ಟ್‌ ಮಾರ್ಗ ಸೂಚಿಯಂತೆ ಗಣಿಗಾರಿಕೆ ನಡೆಸಲು ಅವಕಾಶ ನೀಡಲಾಗುತ್ತಿದೆ ಎಂದರು.

2.5ಕೋಟಿ ರೂ.ಬಂಡವಾಳ ಹೂಡಿಕೆ
ನವೀಕರಿಸಬಹುದಾದ ಇಂಧನಕ್ಷೇತ್ರದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಸೌರ ವಿದ್ಯುತ್‌, ಪವನ ವಿದ್ಯುತ್‌ ಈಗ ಸಾಂಪ್ರದಾಯಿಕ ವಿದ್ಯುತ್‌ ಮೂಲವಾಗಿ ಬದಲಾಗಿದ್ದು ಜಲಜನಕ ಮತ್ತು ಅಮೋನಿಯಾ ಆಧಾರಿತ ವಿದ್ಯುತ್‌ ಕ್ಷೇತ್ರದಲ್ಲಿ ಮುಂದಿನ ಮುಂದಿನ ಮೂರು ವರ್ಷಗಳಲ್ಲಿ ಎರಡೂವರೆ ಕೋಟಿ ರೂ.ಬಂಡವಾಳ ಹೂಡಿಕೆ ಆಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

missing

ಬರಿಮಾರು ವ್ಯಕ್ತಿ ನಾಪತ್ತೆ; ನದಿ ಕಿನಾರೆಯಲ್ಲಿ ಪಾದರಕ್ಷೆ, ಮೇವಿನ ಕಟ್ಟು ಪತ್ತೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.