ಜಿಲ್ಲೆ ಜೆಡಿಎಸ್‌ ಭದ್ರಕೋಟೆಗೆ ಎಚ್‌ಡಿಕೆ ಸಂಕಲ್ಪ


Team Udayavani, Dec 5, 2022, 5:12 PM IST

ಜಿಲ್ಲೆ ಜೆಡಿಎಸ್‌ ಭದ್ರಕೋಟೆಗೆ ಎಚ್‌ಡಿಕೆ ಸಂಕಲ್ಪ

ತುಮಕೂರು: ರಾಜ್ಯದಲ್ಲಿ 2023 ರ ಚುನಾವಣೆಗೆ ಮೂರು ರಾಜಕೀಯ ಪಕ್ಷಗಳು ಸಜ್ಜಾಗಲು ಯಾತ್ರೆಗಳನ್ನು ಆರಂಭಿಸಿದ್ದು, ಕಲ್ಪತರು ನಾಡಿನಲ್ಲಿ ಜೆಡಿಎಸ್‌ ಆರಂಭಿಸಿರುವ ಪಂಚರತ್ನ ಯಾತ್ರೆಗೆ ಉತ್ತಮ ಜನಸ್ಪಂದನೆ ದೊರೆಯುತ್ತಿದ್ದು, ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರಿಗೆ ಹೊಸ ಚೈತನ್ಯ ಮೂಡುತ್ತಿದೆ.

ರಾಜ್ಯದಲ್ಲಿ ಚುನಾವಣೆ ಹತ್ತಿರ ಬರುತ್ತಿರುವಂತೆಯೇ ರಾಜಕೀಯ ಪಕ್ಷಗಳು ರಾಜ್ಯದಲ್ಲಿ ಯಾತ್ರೆಗಳನ್ನು ಆರಂಭಿ ಸಿದ್ದು, ಕಾಂಗ್ರೆಸ್‌ ಭಾರತ್‌ ಜೋಡೋ ಯಾತ್ರೆ, ಬಿಜೆಪಿ ಸಂಕಲ್ಪ ಯಾತ್ರೆ, ಈಗ ಜೆಡಿಎಸ್‌ನಿಂದ ಪಂಚರತ್ನ ಯಾತ್ರೆ ನಡೆ ಯುತ್ತಿದ್ದು, ಜೆಡಿಎಸ್‌ ಪ್ರಾಬಲ್ಯವಿರುವ ಕಡೆ ಗಳಲ್ಲಿ ಜೆಡಿಎಸ್‌ಇನ್ನೂ ಪ್ರಾಬಲ್ಯ ಸಾಧಿಸಲು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸಂಕಲ್ಪತೊಟ್ಟು ಆರಂಭಿಸಿರುವ ಪಂಚರತ್ನ ಯಾತ್ರೆಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ.

ಜಿಲ್ಲೆ ಮೊದಲಿನಿಂದಲೂ ಜೆಡಿಎಸ್‌ ಭದ್ರಕೋಟೆ. ಈ ಹಿಂದೆ ನಡೆದ ವಿಧಾನಸಭಾ ಚುನಾವಣೆ ಯಲ್ಲಿ ಜಿಲ್ಲೆಯ 11 ಕ್ಷೇತ್ರಗಳ ಪೈಕಿ 9ರಲ್ಲಿ ಜೆಡಿಎಸ್‌ ಗೆಲುವು ಸಾಧಿಸಿತ್ತು.

ನಾಲ್ಕು ಕ್ಷೇತ್ರದಲ್ಲಿ ಗೆಲುವು: 2018ರ ವಿಧಾನ ಸಭಾ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಡಿ.ಸಿ. ಗೌರಿಶಂಕರ್‌, ಗುಬ್ಬಿ ಎಸ್‌.ಆರ್‌.ಶ್ರೀನಿ ವಾಸ್‌, ಮಧುಗಿರಿ ವೀರಭದ್ರಯ್ಯ, ಶಿರಾ ಕ್ಷೇತ್ರದಿಂದ ಬಿ. ಸತ್ಯನಾರಾಯಣ್‌ ಗೆಲುವು ಸಾಧಿಸಿದ್ದರು. ಪಾವಗಡದ ಕ್ಷೇತ್ರದಿಂದ ಮಾಜಿ ಶಾಸಕ ತಿಮ್ಮರಾಯಪ್ಪ, ಕೊರಟಗೆರೆ ಮಾಜಿ ಶಾಸಕ ಸುಧಾಕರಲಾಲ್‌, ತುಮಕೂರು ನಗರ ಎನ್‌. ಗೋವಿಂದ ರಾಜ್‌, ಕುಣಿಗಲ್‌ ಮಾಜಿ ಸಚಿವ ಡಿ.ನಾಗರಾಜಯ್ಯ, ತುರುವೇಕೆರೆ ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ, ಚಿಕ್ಕನಾಯಕನ ಹಳ್ಳಿ ಮಾಜಿ ಶಾಸಕ ಬಿ. ಸುರೇಶ್‌ ಗೌಡ, ತಿಪಟೂರು ಕ್ಷೇತ್ರದಿಂದ ಲೋಕೇಶ್ವರ್‌ ಸ್ಪರ್ಧಿಸಿ ಕೆಲವೇ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.

ಬದಲಾದ ರಾಜ ಕೀಯ ಹಿನ್ನೆಲೆಯಲ್ಲಿ ಜೆಡಿಎಸ್‌ ಶಾಸಕ ಗುಬ್ಬಿ ಕ್ಷೇತ್ರದ ಎಸ್‌. ಆರ್‌.ಶ್ರೀನಿವಾಸ್‌ ಜೆಡಿಎಸ್‌ ತೊರೆದಿದ್ದಾರೆ. ಶಿರಾ ಕ್ಷೇತ್ರ ದಿಂದ ಗೆದ್ದಿದ್ದ ಬಿ.ಸತ್ಯನಾರಾಯಣ್‌ ನಿಧನ ಹೊಂದಿದ ಮೇಲೆ ನಡೆದ ಉಪಚುನಾವಣೆಯಲ್ಲಿ ಆಕ್ಷೇತ್ರ ಬಿಜೆಪಿ ಪಾಲಾಗಿದೆ. ಈಗ ಜಿಲ್ಲೆಯಲ್ಲಿ ಜೆಡಿಎಸ್‌ನಿಂದ ನಡೆಸುತ್ತಿರುವ ಪಂಚರತ್ನ ಯಾತ್ರೆಗೆ ವ್ಯಾಪಕ ಜನ ಬೆಂಬಲ ವ್ಯಕ್ತವಾಗುತ್ತಿದೆ.

ಜನ ಬೆಂಬಲಕ್ಕೆ ಪುಳಕಿತ: ಕಳೆದ ಚುನಾವಣೆ ಯಲ್ಲಿ ಕಡಿಮೆ ಅಂತರದಲ್ಲಿ ಸೋತ ಅಭ್ಯರ್ಥಿ ಗಳನ್ನು ಗೆಲ್ಲಿಸಿಕೊಳ್ಳಬೇಕು ಎಂದು ನಿರ್ಧರಿಸಿರುವ ಕುಮಾರಸ್ವಾಮಿ, ಆ ಕ್ಷೇತ್ರಗಳ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದಾರೆ. ಈ ಗಾಗಲೇ ತುಮಕೂರು, ಮಧುಗಿರಿ, ಕೊರಟಗೆರೆಯಲ್ಲಿ ಮತ್ತು ಭಾನು ವಾರ ಪಾವಗಡದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ತೋರಿ ಬಂದ ಜನ ಬೆಂಬಲಕ್ಕೆ ಪುಳಕಿತರಾಗಿದ್ದು, ಈ ಹಿಂದೆ ಜಿಲ್ಲೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದಂತೆ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್‌ ಹೆಚ್ಚು ಸ್ಥಾನ ಗೆಲ್ಲುತ್ತದೆ ಎನ್ನುವ ವಿಶ್ವಾಸ ಹೊಂದಿದ್ದಾರೆ.

1994, 2004 ಮರುಕಳಿಸುವಿಕೆ: ತುಮಕೂರು ಜಿಲ್ಲೆಯಲ್ಲಿ 1994ರಲ್ಲಿ ಜನತಾದಳ ಹಾಗೂ 2004ರಲ್ಲಿ ಜೆಡಿಎಸ್‌ ಅತ್ಯಧಿಕ ಸ್ಥಾನ ಗಳಲ್ಲಿ ಗೆಲುವು ಸಾಧಿಸಿದ್ದು, ಈ ಬಾರಿಯೂ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಲು ಜಿಲ್ಲೆಯ 11 ಸ್ಥಾನಗಳಲ್ಲೂ ಜೆಡಿಎಸ್‌ ಗೆಲ್ಲಲು ಚುನಾವಣಾ ರಣತಂತ್ರ ರೂಪಿಸುವಲ್ಲಿ ನಾವು ಹಿಂದುಳಿದಿಲ್ಲ. 1994, 2004ರ ಚುನಾ ವಣಾ ಫ‌ಲಿತಾಂಶ ಮರುಕಳುಹಿಸಲಿದೆ ಎನ್ನುತ್ತಾರೆ ಜೆಡಿಎಸ್‌ ಮುಖಂಡರು.

2023 ರ ಚುನಾವಣೆಯಲ್ಲಿ ಹಣದಾಹಿ ಬಿಜೆಪಿ, ಕಾಂಗ್ರೆಸ್‌ ಪಕ್ಷಗಳನ್ನು ಬರುವ ಚುನಾವಣೆಯಲ್ಲಿ ಸೋಲಿಸಿ ರೈತಪರ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಲು ಜೆಡಿಎಸ್‌ ಗೆ ಪೂರ್ಣ ಬಹುಮತ ನೀಡಿ ಜಿಲ್ಲೆಯಲ್ಲಿ ಹೆಚ್ಚು ಸ್ಥಾನದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲಿಸಿರಿ ನಾನು ಘೋಷಿಸಿರುವ ಪಂಚರತ್ನ ಯೋಜನೆಗಳನ್ನು ನಾನು ಜಾರಿಗೆ ತರಲು ಸಿದ್ಧನಿದ್ದೇನೆ. -ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ಜಿಲ್ಲೆಯಲ್ಲಿ 11 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್‌ ಗೆಲ್ಲಲು ಶ್ರಮ ಹಾಕುತ್ತೇವೆ. ಎಚ್‌.ಡಿ. ಕುಮಾರ ಸ್ವಾಮಿ ಯವರು ಸಂಕಲ್ಪ ತೊಟ್ಟು ಪಂಚರತ್ನ ಯಾತ್ರೆಯ ಮೂಲಕ ಪಕ್ಷ ಬಲ ಪಡಿಸುತ್ತಿದ್ದು, ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವುದು ಖಚಿತ. ಕುಮಾರ ಸ್ವಾಮಿ ಅವರು ಮತ್ತೂಮ್ಮೆ ಸಿಎಂ ಆಗ ಬೇಕೆಂದು ಜನ ಬಯಸಿದ್ದಾರೆ. – ಆರ್‌.ಸಿ.ಆಂಜನಪ್ಪ, ಜಿಲ್ಲಾಧ್ಯಕ್ಷರು ಜೆಡಿಎಸ್‌

ತುಮಕೂರು ನಗರದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪಂಚರತ್ನ ಯಾತ್ರೆ ಯಿಂದ ನಗರದಲ್ಲಿ ಜೆಡಿಎಸ್‌ಗೆ ಭಾರೀ ಪ್ರಮಾಣದಲ್ಲಿ ಜನ ಬೆಂಬಲ ವ್ಯಕ್ತವಾಗಿದೆ. ಜಿಲ್ಲೆಯಲ್ಲಿಯೂ ಉತ್ತಮ ಸ್ಪಂದನೆ ದೊರೆ ತಿದ್ದು ಮುಂಬರುವ ವಿಧಾನಸಭಾ ಚುನಾವ ಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವುದು ಖಚಿತ. -ಎನ್‌.ಗೋವಿಂದರಾಜು, ತುಮಕೂರು ನಗರ ಜೆಡಿಎಸ್‌ ಅಭ್ಯರ್ಥಿ

-ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.