ಜನವರಿ ಕೊನೆಯಲ್ಲಿ ಅದ್ದೂರಿ ಹಂಪಿ ಉತ್ಸವ: ಸಚಿವೆ ಶಶಿಕಲಾ ಜೊಲ್ಲೆ
Team Udayavani, Dec 5, 2022, 7:38 PM IST
ಹೊಸಪೇಟೆ (ವಿಜಯಗರ) : ಜನವರಿ ತಿಂಗಳಾಂತ್ಯಕ್ಕೆ ಮೂರು ದಿನಗಳ ಕಾಲ ಹಂಪಿ ಉತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ದತೆಯನ್ನು ನಡೆಸುವಂತೆ ಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತವಾರಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದರು.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಧಿಕಾರಿಗಳು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಹಂಪಿ ಉತ್ಸವವನ್ನು ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಯಿತು. ಈ ಮೊದಲು 2023 ರ ಜನವರಿ ತಿಂಗಳ 7 ಮತ್ತು 8 ರಂದು ಎರಡು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಅದೇ ಸಮಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದರಿಂದ ಕಾರ್ಯಕ್ರಮವನ್ನು ಜನವರಿ ತಿಂಗಳಾಂತ್ಯಕ್ಕೆ ಮುಂದೂಡಲು ತೀರ್ಮಾನಿಸಲಾಗಿದೆ. ಜನವರಿ 27,28 ಮತ್ತು 29 ರಂದು ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ದಿನಾಂಕವನ್ನು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ. ಆದರೆ, ಸನ್ಮಾನ್ಯ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.
ಅದ್ದೂರಿ ಆಚರಣೆ
ಕೋವಿಡ್ ಸಾಂಕ್ರಾಮಿಕದ ಕಾರಣ ಕಳೆದ ಎರಡು ವರ್ಷಗಳಿಂದ ಹಂಪಿ ಉತ್ಸವವನ್ನು ಆಯೋಜಿಸಲಾಗಿರಲಿಲ್ಲ. ಹೀಗಾಗಿ ಈ ಬಾರಿ ಕಳೆದ ಎಲ್ಲಾ ಹಂಪಿ ಉತ್ಸವಗಳಿಗಿಂತಲೂ ಅದ್ದೂರಿಯಾಗಿ ಆಚರಿಸಲಾಗುವುದು. ಮೂರು ದಿನಗಳ ಕಾಲ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಸಾರುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜನವರಿ ತಿಂಗಳಾಂತ್ಯಕ್ಕೆ ಯಾವುದೇ ಹಂಪಿ ಉತ್ಸವ ನಡೆಯಲೇಬೇಕು. ವಿಜಯನಗರ ಗತ ವೈಭವವನ್ನು ಮರುಸೃಷ್ಟಿಸುವ ರೀತಿಯಲ್ಲಿ ಉತ್ಸವ ಆಯೋಜಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಉತ್ಸವ ಆಚರಣೆಗೆ ಅನುದಾನ
ಈಗಾಗಲೇ 2021-22 ನೇ ಸಾಲಿನ ಹಂಪಿ ಉತ್ಸವ ಆಚರಣೆಯ ಸಲುವಾಗಿ ಕನ್ನಡ ಸಂಸ್ಕೃತಿ ಇಲಾಖೆಯಿಂದ 4.10 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿರುತ್ತದೆ. ಇನ್ನೂ ಹೆಚ್ಚಿನ ಅನುದಾನದ ಅಗತ್ಯವಿದೆ. 6 ಕೋಟಿ ರೂಪಾಯಿಗಳ ಅನುದಾನ ನೀಡುವಂತೆ ಪ್ರವಾಸೋದ್ಯಮ ಇಲಾಖೆಗೆ ಪತ್ರ ಬರೆಯಲಾಗಿದೆ. ಅಗತ್ಯ ಅನುದಾನವನ್ನು ನೀಡುವಂತೆ ಈಗಾಗಲೇ ಸರಕಾರದ ವಿವಿಧ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ಇದಲ್ಲದೆ ಖಾಸಗಿ ಕಂಪನಿಗಳ ಸಿಎಸ್‌ಆರ್ ನಿಧಿಯನ್ನು ನೀಡುವಂತೆ ಕೋರಲಾಗುವುದು ಎಂದರು.
2 ಮುಖ್ಯ ವೇದಿಕೆ
ಈ ಬಾರಿ 2 ಭವ್ಯ ಮುಖ್ಯ ವೇದಿಕೆಗಳನ್ನು ನಿರ್ಮಿಸಲು ಯೋಜಿಸಲಾಗಿದ್ದು, ಕಲಾವಿದರುಗಳ ಲಭ್ಯತೆ ಹಾಗೂ ಕಾರ್ಯಕ್ರಮಗಳ ಸೇರ್ಪಡೆಯ ಮೇಲೆ ಇನ್ನೂ 2 ಉಪ ವೇದಿಕೆಗಳನ್ನು ಸೇರ್ಪಡಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.