ಜೆಡಿಎಸ್-ಬಿಜೆಪಿ ವಾಕ್ ಸಮರ: ಸುರೇಶ್ ಗೌಡ ವಿರುದ್ದ ಅರುಣ್ ಕುಮಾರ್  ಕಿಡಿ

ಕುಟುಂಬಸ್ಥರ ಹೆಸರನ್ನು ತಾಳೆ ಹಾಕಿದರೆ ಪರಿಸ್ಥಿತಿ ಸರಿ ಇರೋದಿಲ್ಲ

Team Udayavani, Dec 5, 2022, 9:45 PM IST

1-wdadasdasd

ಕೊರಟಗೆರೆ: ತುಮಕೂರು ಗ್ರಾಮಾಂತರ ಕ್ಷೇತ್ರದ ಇತ್ತೀಚಿನ ಜೆಡಿಎಸ್ ಹಾಗೂ ಬಿಜೆಪಿ ವಾಕ್ ಸಮರಕ್ಕೆ ಮತ್ತೊಂದು ಸೇರ್ಪಡೆಯಾಗಿದ್ದು ಸುರೇಶ್ ಗೌಡರ ದೂರವಾಣಿ ಸಂಭಾಷಣೆಯ ತುಣುಕಿನ ವಿರುದ್ಧ  ಮಾಜಿ ಸಚಿವ ಸಿ.ಚೆನ್ನಗಪ್ಪನವರ ಹಿರಿಯ ಪುತ್ರ ಅರುಣ್ ಕುಮಾರ್  ಕಿಡಿಕಾರಿದ್ದಾರೆ.

ತುಮಕೂರಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಜಿಲ್ಲೆಯಲ್ಲಿ ಜಿದ್ದಾಜಿದ್ದಿನ ಕ್ಷೇತ್ರವಾಗಿ ಮಾರ್ಪಾಡಾಗಿದ್ದು, ಇತ್ತೀಚಿಗೆ ಬಿಜೆಪಿ ಸುರೇಶ್ ಗೌಡ, ಹಾಲಿ ಶಾಸಕ ಡಿಸಿ ಗೌರಿಶಂಕರ್ ವಿರುದ್ಧ ಕೊಲೆಗೆ ಸುಪಾರಿ ವಿಚಾರದೊಡ್ಡ ಮಟ್ಟದ ಸುದ್ದಿಯಾಗಿ ನ್ಯಾಯಾಂಗ ಮೆಟ್ಟಿಲೇರಿದ ಪ್ರಕರಣ ಈಗ ದೂರವಾಣಿ ಸಂಭಾಷಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿ ಗೌರಿಶಂಕರ್ ಅಣ್ಣ ಅರುಣ್ ಕುಮಾರ್ ಸುರೇಶ್ ಗೌಡರ ವಿರುದ್ಧ ಹರಿಹಾಯ್ದಿದ್ದಾರೆ.

ರಾಜಕಾರಣದಲ್ಲಿ ಒಬ್ಬರ ಮೇಲೊಬ್ಬರು ಆರೋಪ ಪ್ರತ್ಯಾರೋಪ ಮಾಡಿಕೊಳ್ಳುವುದು ಸಹಜ, ಆದರೆ ಸುರೇಶ್ ಗೌಡ  ಹೇಳಿಕೆ ರೀತಿಯಲ್ಲಿ ನಮ್ಮ ಸಂಸ್ಕೃತಿ ಇಲ್ಲ, ಸುಸಂಸ್ಕೃತ ಮನೆತನದಿಂದ ಬಂದವರು ನೂರಾರು ಜನರಿಗೆ ಅನ್ನ ಹಾಕಿದ ಕುಟುಂಬ ನಮ್ಮದು, ಕೊಲೆ ಸುಪಾರಿ ಕೊಟ್ಟು ಮತ್ತೊಬ್ಬರ ಜೀವ ಕಳೆಯುವ ಸಂಸ್ಕೃತಿ ನಮ್ಮದಲ್ಲ, ಎಚ್ಚರಿಕೆಯಿಂದ ಮಾಜಿ ಶಾಸಕರು ಮಾತನಾಡಬೇಕು, ಜೊತೆಗೆ ರಾಜಕಾರಣ ವಿಚಾರ ಬಂದಲ್ಲಿ ಅವರು ಇಬ್ಬರಲ್ಲಿ ಜಟಾಪಟಿ ನಡೆಯಲಿ ಆದರೆ ಕುಟುಂಬಸ್ಥರ ಹೆಸರನ್ನು ತಾಳೆ ಹಾಕಿದರೆ ಪರಿಸ್ಥಿತಿ ಸರಿ ಇರೋದಿಲ್ಲ ಎಂದು ಎಚ್ಚರಿಕೆ ನೀಡಿದರು.

 ತಾಯಿಯ ಬಗ್ಗೆ ಅವಹೇಳನ ಖಂಡನೆ

ತುಮಕೂರು ಗ್ರಾಮಾಂತರ ರಾಜಕಾರಣಕ್ಕೆ ಸಂಬಂಧಿಸಿದಂತೆ ಡಿ ಸಿ ಗೌರಿಶಂಕರ್ ಹಾಗೂ ಸುರೇಶ್ ಗೌಡ ಏನಾದರೂ ಮಾತನಾಡಿಕೊಳ್ಳಲಿ ಆದರೆ ನಮ್ಮ ಕುಟುಂಬಕ್ಕೆ ಕೈ ಹಾಕಿದರೆ ನಾವು ಸುಮ್ಮನಿರೋದಿಲ್ಲ, ನೀನು ನನ್ನ ತಾಯಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದೀಯ, ಇದನ್ನ ನಾವು ಸಹಿಸುವುದಿಲ್ಲ.  ಕ್ಷಮೆ ಕೇಳದಿದ್ದರೆ ಪರಿಣಾಮ ನೆಟ್ಟಗಿರೋದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮಾಜಿ ಉಪ ಮುಖ್ಯಮಂತ್ರಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿ, ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಶಾಸಕ ಡಾ. ಜಿ ಪರಮೇಶ್ವರ ದೊರಕಿರುವುದೇ ಮತದಾರರ ಪುಣ್ಯ, ಯಾವುದೇ ಆಸೆ ಆಕಾಂಕ್ಷೆ ಇಲ್ಲದ ಮತದಾರರ ಶ್ರೇಯೋಭಿವೃದ್ಧಿ ಬಯಸುವ ಅದರಲ್ಲೂ ಕ್ಷೇತ್ರದ ಮತದಾರರಿಗೆ ತಮ್ಮ ಸಿದ್ದಾರ್ಥ ಆಸ್ಪತ್ರೆಯಲ್ಲಿ ಉಚಿತ ಸೇವೆ‌ ಕಲ್ಪಿಸುವ ಇಂಥ ವ್ಯಕ್ತಿಗೆ ಮತ ಹಾಕದಿದ್ದರೆ ಮತದಾರರು ಮುಂದಿನ ದಿನದಲ್ಲಿ ಪಶ್ಚಾತಾಪ ಪಡಬೇಕಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ರಾಹುತನಹಳ್ಳಿ ಮಲ್ಲಿಕ್, ಚಿನ್ನಹಳ್ಳಿ ಈಶ್ವರ್, ಮಧು, ಹರೀಶ್ ಬಾಬು, ವಡ್ಡಗೆರೆ ಗಂಗಣ್ಣ, ಗುಂಡನಪಾಳ್ಯದ ನಟರಾಜು, ಮಂಜುಳಮ್ಮ,ಜಯಲಕ್ಷ್ಮಮ್ಮ, ವಿಜಯ ಲಕ್ಷ್ಮಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.