ಪರ್ಕಳ ರಸ್ತೆ, ಮಣಿಪಾಲ ಪಾರ್ಕಿಂಗ್‌ ಸಮಸ್ಯೆಗೆ ಮುಕ್ತಿ ಕಲ್ಪಿಸಿ


Team Udayavani, Dec 6, 2022, 5:30 AM IST

ಪರ್ಕಳ ರಸ್ತೆ, ಮಣಿಪಾಲ ಪಾರ್ಕಿಂಗ್‌ ಸಮಸ್ಯೆಗೆ ಮುಕ್ತಿ ಕಲ್ಪಿಸಿ

ಪರ್ಕಳ ಅರ್ಧಕ್ಕೆ ನಿಂತಿರುವ ರಸ್ತೆ, ಮಣಿಪಾಲ ಟ್ರಾಫಿಕ್‌, ಪಾರ್ಕಿಂಗ್‌ ಸಮಸ್ಯೆ, ಬಡಗಬೆಟ್ಟು ಗ್ರಾ. ಪಂ. ವ್ಯಾಪ್ತಿ ಕಸ ಸಂಗ್ರಹ ವಿಳಂಬದ ಬಗ್ಗೆ ಸಾರ್ವಜನಿಕರು ದೂರು ಹೇಳಿಕೊಂಡಿದ್ದು, ಅದರ ವಿಸ್ತೃತ ವರದಿ ಇಲ್ಲಿ ಪ್ರಕಟಿಸಲಾಗಿದೆ. ಯಾವುದೇ ರೀತಿಯ ನಾಗರಿಕ ಸಮಸ್ಯೆಗಳಿದ್ದರೆ ವಾಟ್ಸ್‌ ಆ್ಯಪ್‌ ಸಂಖ್ಯೆ 6362906071ಗೆ ಮಾಹಿತಿ ನೀಡಬಹುದು. ಉಡುಪಿಯ ಸುದ್ದಿಗಳನ್ನು [email protected] ಗೆ ಕಳುಹಿಸಿ.

ಅರ್ಧದಲ್ಲೇ ನಿಂತ ಕಾಂಕ್ರೀಟ್‌ ರಸ್ತೆ ಕಾಮಗಾರಿ
ಪರ್ಕಳ ಅರ್ಜುನ ಯುವಕ ಮಂಡಲದ ಪಕ್ಕದಲ್ಲಿ ಸಾಗುವ ರಸ್ತೆ ಮುಂದೆ ಸಾಗಿ ಸರಳೇಬೆಟ್ಟು ಜಂಕ್ಷನ್‌ಗೆ ಸಂಪರ್ಕ ಕಲ್ಪಿಸುವ ಹಳೆಯ ರಸ್ತೆಯನ್ನು ಅಭಿವೃದ್ಧಿಗೊಳಿಸುವ ಕಾಂಕ್ರೀಟ್‌ ರಸ್ತೆ ಯೋಜನೆ ಕುಂಟುತ್ತ ಸಾಗುತ್ತಿದೆ. ಮಳೆಗಾಲದ ಮುನ್ನ ರಸ್ತೆಯನ್ನು ಅಗೆದಿದ್ದು ಕೆಸರು ಗದ್ದೆಯಂತಾಗಿತ್ತು. ಸ್ಥಳೀಯರು ಈ ಜಾಗದಲ್ಲಿ ಪ್ರತಿಭಟನೆ ನಡೆಸಿದ್ದರು. ಮಳೆ ಮುಗಿದು ತಿಂಗಳಾಗಿದ್ದರೂ, ರಸ್ತೆ ಅಭಿವೃದ್ಧಿ ಕೆಲಸ ನಡೆದಿಲ್ಲ. ಪ್ರಸ್ತುತ ರಾಮ ಮಂದಿರದ ಬಳಿ ರಸ್ತೆಯ ಎರಡು ಬದಿಯಲ್ಲಿ ಒಂದೇ ರೀತಿ ವಿಸ್ತರಿಸದೆ ಇರುವುದರಿಂದ ಸಮಸ್ಯೆಯಾಗಿದೆ. ಈ ರಸ್ತೆ ವಿಸ್ತರಣೆ ಪ್ರಕ್ರಿಯೆ ಅವೈಜ್ಞಾನಿಕವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಜನರಿಗೆ ಇದರಿಂದ ನಿತ್ಯ ಓಡಾಟಕ್ಕೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಪ್ರಯಾಣಿಕರು ಅಗೆದು ಬಿಟ್ಟಿರುವ ಹಳೆ ಜಲ್ಲಿಯ ರಸ್ತೆಯಲ್ಲಿಯೇ ವಾಹನ ಸಂಚರಿಸಬೇಕಾದ ಪರಿಸ್ಥಿತಿ ಉದ್ಭವಿಸಿದೆ. ಈ ಬಗ್ಗೆ ಸೂಕ್ತ ಕ್ರಮ ತಗೆದುಕೊಂಡು ರಸ್ತೆ ಶೀಘ್ರ ಮುಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಮಣಿಪಾಲ: ಟ್ರಾಫಿಕ್‌ ನಿರ್ವಹಣೆಗೆ ಮುಂಜಾಗ್ರತೆ ಅಗತ್ಯ
ಮಣಿಪಾಲ ಭಾಗದಲ್ಲಿ ಟ್ರಾಫಿಕ್‌ ಸಹಿತ ಪಾರ್ಕಿಂಗ್‌ ಸಮಸ್ಯೆಗಳಿಗೆ ಈಗಲೇ ಮುಂಜಾಗ್ರತೆ ಕ್ರಮಗಳನ್ನು ತಗೆದುಕೊಳ್ಳಬೇಕಿದೆ ಎಂದು ಸಾರ್ವಜನಿಕರ ಆಗ್ರಹವಾಗಿದೆ. ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಇಲ್ಲದೆ ಸವಾರರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವಂತಾಗಿದೆ. ಪಾರ್ಕಿಂಗ್‌ ಸೌಲಭ್ಯವಿಲ್ಲದೇ ರಸ್ತೆ ಮೇಲೆ ಕಾರುಗಳು ನಿಂತಿರುತ್ತದೆ. ಇದರಿಂದ ಪಾದಚಾರಿಗಳ ಓಡಾಟಕ್ಕೆ ಸಮಸ್ಯೆಯಾಗುತ್ತದೆ. ಮಣಿಪಾಲ ಟೈಗರ್‌ ವೃತ್ತದಿಂದ ಈಶ್ವರನಗರದ ವರೆಗೂ ಎರಡೂ ಕಡೆಗಳಲ್ಲೂ ವಾಹನ ನಿಲ್ಲಿಸಿರುತ್ತಾರೆ. ಇದರಿಂದ ವಾಹನಗಳ ಸುಗಮ ಸಂಚಾರಕ್ಕೆ ಸಮಸ್ಯೆಯಾಗುತ್ತದೆ. ಸಿಂಡಿಕೇಟ್‌ ಸರ್ಕಲ್‌ನಲ್ಲಿ ಹಂಪ್ಸ್‌ ಅಳವಡಿಸುವ ಮೂಲಕ ವಾಹನಗಳ ಅಡ್ಡಾದಿಡ್ಡಿ ಸಂಚಾರ, ವೇಗ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂಬುದು ಜನರ ಬೇಡಿಕೆಯಾಗಿದೆ. ನಗರಸಭೆ, ಪೊಲೀಸ್‌ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹಿಸಿದ್ದಾರೆ.

ಕೆಳ ಪರ್ಕಳ: ಸರಣಿ ಅಪಘಾತ ವಲಯ
ಕೆಳ ಪರ್ಕಳ ರಸ್ತೆ ಅವ್ಯವಸ್ಥೆಯಿಂದಾಗಿ ಬೃಹತ್‌ ವಾಹನಗಳು ಆಗಾಗ ಮಗುಚಿ ಬೀಳುತ್ತಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ, ಇದರಿಂದಾಗಿ ಗಂಟೆಗಟ್ಟಲೆ ಟ್ರಾಫಿಕ್‌ ಜಾಮ್‌ ಸಂಭವಿಸುತ್ತಿದ್ದು, ಸರಣಿ ಅಪಘಾತ ವಲಯವಾಗಿ ಮಾರ್ಪಟ್ಟಿದೆ. ಸವಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.

400 ಮೀ. ಉದ್ದದ ನೇರ ರಸ್ತೆ (ಹೆದ್ದಾರಿ) ಕಾಮಗಾರಿ ನಡೆಯುತ್ತಿದ್ದು, ಕೆಳ ಪರ್ಕಳ ತಿರುವು ರಸ್ತೆ ಇರುವುದನ್ನು ನೇರ ರಸ್ತೆಯಾಗಿ ರೂಪಿಸಲಾಗುತ್ತಿದೆ. ಭೂಸ್ವಾಧೀನ ವಿವಾದಕ್ಕೆ ಸಂಬಂಧಿಸಿ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲು ವಿಳಂಬವಾಗುತ್ತಿದ್ದು, ಜಿಲ್ಲಾಡಳಿತ, ಹೆದ್ದಾರಿ ಸಚಿವಾಲಯ ಈ ಬಗ್ಗೆ ಗಂಭೀರ ಕ್ರಮ ತೆಗೆದುಕೊಳ್ಳಬೇಕಿದೆ.

ಪ್ರಸ್ತುತ ಸಂಚಾರಕ್ಕೆ ಇರುವ ಪರ್ಯಾಯ ಮಾರ್ಗ ಕಿರಿದಾಗಿದ್ದು, ಸಂಪೂರ್ಣ ಹದಗೆಟ್ಟಿದೆ. ಇದರಿಂದಾಗಿ ನಿಯಂತ್ರಣ ತಪ್ಪುವ ಸರಕು, ಸಾಮಗ್ರಿ ತುಂಬಿರುವ ಘನ ವಾಹನಗಳು ಅಪಘಾತಕ್ಕೀಡಾಗುತ್ತಿರುವುದು ಸವಾರರ ಆತಂಕಕ್ಕೆ ಕಾರಣವಾಗಿದೆ.

80 ಬಡಗುಬೆಟ್ಟು ಗ್ರಾ. ಪಂ: ತ್ಯಾಜ್ಯ ಸಂಗ್ರಹ ವಿಳಂಬ
80 ಬಡಗುಬೆಟ್ಟು ಪಂಚಾಯತ್‌ ವ್ಯಾಪ್ತಿಗೆ ಸೇರಿರುವ ದಶರಥನಗರದ 2ನೇ ಹಂತದಲ್ಲಿರುವ ಮನೆಗಳಿಗೆ ಗ್ರಾ.ಪಂ. ತ್ಯಾಜ್ಯ ಸಂಗ್ರಹ ಕೆಲವು ತಿಂಗಳಿಂದ ಸರಿಯಾಗಿ ನಡೆಯುತ್ತಿಲ್ಲ. ಪ್ರತಿನಿತ್ಯ ಹಸಿಕಸ ಹಾಗೂ ಬುಧವಾರದಂದು ಒಣಕಸವನ್ನು ತೆಗೆದುಕೊಂಡು ಹೋಗಲು ವ್ಯವಸ್ಥೆ ಮಾಡಲಾಗಿದೆ. ಆದರೆ ಕಸ ಸಂಗ್ರಹಕ್ಕೆ ವಾರಕ್ಕೆ ಒಂದು ಬಾರಿಯೂ ಬರುತ್ತಿಲ್ಲ. ಇತ್ತೀಚೆಗೆ ಪಂಚಾಯತ್‌ ಆಡಳಿತದಲ್ಲಿ ಈ ಬಗ್ಗೆ ವಿಚಾರಿಸಿದ್ದು, ಮುಂದೆ ಸಮಸ್ಯೆಯಾಗುವುದಿಲ್ಲ ಎಂಬ ಭರವಸೆ ನೀಡಿದ್ದರು. ಗ್ರಾ. ಪಂ. ಆಶ್ವಾಸನೆ ಕಾರ್ಯರೂಪಕ್ಕೆ ಬಂದಿಲ್ಲ. ಕಸ ಸಂಗ್ರಹ ವ್ಯವಸ್ಥಿತವಾಗಿ ನಡೆಯುವಂತೆ ಗ್ರಾ.ಪಂ. ನೋಡಿಕೊಳ್ಳಬೇಕು ಎಂದು ಮಣಿಪಾಲದ ಕೆ. ಶಿವಶಂಕರ್‌ ವಿನಂತಿಸಿದ್ದಾರೆ.

ಸೂಕ್ತ ಕ್ರಮ ವಹಿಸಲು ಸೂಚನೆ
ಪರ್ಕಳ ಅರ್ಜುನ ಯುವಕ ಮಂಡಲದ ಪಕ್ಕದಿಂದ-ಸರಳೇಬೆಟ್ಟು ಜಂಕ್ಷನ್‌ಗೆ ಸಂಪರ್ಕ ರಸ್ತೆಯ ಅಭಿವೃದ್ಧಿ ಕಾಮಗಾರಿಯು ಜಾಗದ ತಕರಾರಿನಿಂದ ಅರ್ಧಕ್ಕೆ ನಿಲ್ಲುವಂತಾಗಿದೆ. ಇದನ್ನು ಶೀಘ್ರ ಇತ್ಯರ್ಥಪಡಿಸಿ ರಸ್ತೆಯನ್ನು ಪೂರ್ಣಗೊಳಿಸಲಾಗುವುದು. ಮಣಿಪಾಲ ಪಾರ್ಕಿಂಗ್‌ ಸಮಸ್ಯೆ ಬಗ್ಗೆ ಹಲವು ದೂರುಗಳು ಬಂದಿವೆ. ಪೊಲೀಸ್‌ ಇಲಾಖೆ ಅವರಿಗೆ ಈ ಬಗ್ಗೆ ಸೂಕ್ತ ಕ್ರಮವಹಿಸಲು ಸೂಚನೆ ನೀಡಲಾಗುವುದು.
– ಸುಮಿತ್ರಾ ನಾಯಕ್‌, ಅಧ್ಯಕ್ಷರು, ನಗರಸಭೆ, ಉಡುಪಿ

ಕಸ ವಿಂಗಡಣೆೆ ಮಾಡಿ ಕೊಡುವುದು ಅಗತ್ಯ
80 ಬಡಗಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಕಸ ವಿಲೇವಾರಿಯ ಸಮಸ್ಯೆ ಇಲ್ಲ. ಒಣಕಸ ಮತ್ತು ಹಸಿ ಕಸ ವಿಂಗಡಣೆೆ ಮಾಡಿದರೆ ಮಾತ್ರ ತೆಗೆದುಕೊಂಡು ಹೋಗುವುದು ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇವೆ. ಒಣಕಸದ ಜತೆಗೆ ಹಸಿಕಸ ಹಾಕಿದರೆ ತೆಗೆದುಕೊಂಡು ಹೋಗಲು ಕಷ್ಟ. ವಿಲೇವಾರಿಯೂ ಸಮಸ್ಯೆಯಾಗುತ್ತದೆ.
-ಅಶೋಕ್‌ ಕುಮಾರ್‌, ಪಿಡಿಒ, 80 ಬಡಗಬೆಟ್ಟು ಗ್ರಾ.ಪಂ.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.