ಮಸೀದಿಯೊಳಗೆ ಹನುಮಾನ್ ಚಾಲೀಸ ಪಠಣಕ್ಕೆ ಕರೆ: ಮಥುರಾದಲ್ಲಿ 144 ಸೆಕ್ಷನ್ ಜಾರಿ; ಬಿಗಿ ಭದ್ರತೆ
Team Udayavani, Dec 6, 2022, 10:51 AM IST
ಉತ್ತರ ಪ್ರದೇಶ: ಮಸೀದಿಯೊಳಗೆ ಹನುಮಾನ್ ಚಾಲೀಸ ಪಠಿಸುತ್ತೇವೆ ಎಂದು ಹಿಂದೂ ಮಹಾಸಭಾ ಕರೆಕೊಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಮಥುರಾದಲ್ಲಿ ಮಂಗಳವಾರ ಬಿಗಿ ಪೊಲೀಸ್ ಬಂದೋಬಸ್ತನ್ನು ಮಾಡಲಾಗಿದೆ.
ಸುಮಾರು 1,500 ಪೊಲೀಸರು, ಸಶಸ್ತ್ರ ಪೊಲೀಸ್ ಪಡೆ ಮತ್ತು ಅರೆಸೇನಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಶ್ರೀ ಕೃಷ್ಣ ಜನ್ಮಸ್ಥಾನದ ದೇವಸ್ಥಾನ,ಶಾಹಿ ಮಸೀದಿ ಈದ್ಗಾ ಬಳಿ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ಪಿಟಿಐಗೆ ಹೇಳಿದ್ದಾರೆ.
ಸೋಮವಾರ, ಅಖಿಲ ಭಾರತ ಹಿಂದೂ ಮಹಾಸಭಾದ ದಿನೇಶ್ ಕೌಶಿಕ್, ಮಸೀದಿಯೊಳಗೆ ಹನುಮಾನ್ ಚಾಲೀಸಾವನ್ನು ಪಠಿಸುತ್ತೇವೆ ಎಂದು ಕರೆ ನೀಡಿದ್ದರು. ಈ ಕಾರಣದಿಂದ ಯಾವುದೇ ಅನಾಹುತ ಸಂಭವಿಸಬಾರದು, ಕೋಮುಗಲಭೆಗೆ ಕಾರಣವಾಗಬಾರದೆನ್ನುವ ನಿಟ್ಟಿನಲ್ಲಿ ಮಥುರಾದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಮಾಡಲಾಗಿದೆ.
ಸೆಕ್ಷನ್ 144 ನ್ನು ಜಾರಿಗೊಳಿಸಲಾಗಿದ್ದು, ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಕಳೆದ ವರ್ಷವೂ ಹಿಂದೂ ಮಹಸಭಾ ಇಂಥದ್ದೇ ಕರೆಯನ್ನು ನೀಡಿತ್ತು. ಆ ಯೋಜನೆಯನ್ನು ಕೂಡ ಜಿಲ್ಲಾಡಳಿತ ವಿಫಲವಾಗಿಸಿತ್ತು.
Uttar Pradesh | Police barricading placed at various places in Mathura this morning & vehicle checking being done by them in wake of a call given by Akhil Bharat Hindu Mahasabha to recite Hanuman Chalisa at Shri Krishna Janmabhoomi complex-Shahi Idgah Masjid maidan here today. pic.twitter.com/LvDK1uy8UJ
— ANI UP/Uttarakhand (@ANINewsUP) December 6, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WMO: 2025ರಲ್ಲೂ ದಾಖಲೆಯ ತಾಪಮಾನ: 10 ವರ್ಷಗಳಿಂದ ಹೆಚ್ಚುತ್ತಿದೆ ಬಿಸಿಯ ಮಾಪಕ
Wayanad ಭೂಕುಸಿತ ಭಾರೀ ಪ್ರಾಕೃತಿಕ ವಿಕೋಪ: 5 ತಿಂಗಳ ಬಳಿಕ ಕೇಂದ್ರ ಘೋಷಣೆ
Telgi stamp paper scam: ಕರ್ನಾಟಕದ ಓರ್ವ ಸೇರಿ 5 ಮಂದಿಗೆ ಸಜೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.